September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವಿದ್ಯಾರ್ಥಿ ಚಳವಳಿಯ ಮೇಲೆ ನಡೆದ ಪೈಶಾಚಿಕ ದಾಳಿ ಕೇಂದ್ರ ಸರ್ಕಾರದ ಸರ್ವಾಧಿಕಾರಿ ಆಡಳಿತಕ್ಕೆ ಸಾಕ್ಷಿ: ಶೇಖರ ಎಲ್

ಬೆಳ್ತಂಗಡಿ: ನೀಟ್ ಸೇರಿದಂತೆ ಪರೀಕ್ಷಾ ವೈಫಲ್ಯದ ವಿರುದ್ಧ , ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಕಳೆದ ಒಂದು ತಿಂಗಳಿನಿಂದ ನಡೆಯುತ್ತಿರುವ ನ್ಯಾಯಯುತ ಪ್ರತಿಭಟನೆಯನ್ನು ಹತ್ತಿಕ್ಕಿ , ವಿದ್ಯಾರ್ಥಿ ಚಳವಳಿಯ ಮೇಲೆ ನಡೆದ ಪೈಶಾಚಿಕ ದಾಳಿ ಕೇಂದ್ರ ಸರ್ಕಾರದ ಸರ್ವಾಧಿಕಾರಿ ಆಡಳಿತಕ್ಕೆ ಸಾಕ್ಷಿ. ಇದು ದೇಶದ ಸಂವಿಧಾನಬದ್ಧ ಹಕ್ಕುಗಳ ಮೇಲಿನ ದಾಳಿ ಮತ್ತು ಪ್ರಜಾಪ್ರಭುತ್ವದ ಕಗ್ಗೊಲೆ ಎಂದರು.

ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರ ಸರ್ಕಾರ ದೇಶದಲ್ಲಿ ತುಘಲಕ್ ಸಾಮ್ರಾಜ್ಯ ಕಾಲದ ಸರ್ಕಾರವನ್ನು ನಡೆಸುತ್ತಿದೆ. ಜರ್ಮನ್ ನ ಸರ್ವಾಧಿಕಾರಿ ಹಿಟ್ಲರ್ ನ ಸರ್ವಾಧಿಕಾರ ಆಡಳಿತವನ್ನು ಜಾರಿ ಮಾಡುತ್ತಿದ್ದು , ಅದರ ಮುಂದುವರಿದ ಭಾಗವಾಗಿ ವಿದ್ಯಾರ್ಥಿ ಯುವಜನರು ನಡೆಸುತ್ತಿದ್ದ ಶಿಕ್ಷಣ , ಉದ್ಯೋಗದ ಪ್ರಶ್ನೆಯನ್ನು ಮುಂದಿಟ್ಟುಕೊಂಡು ನಡೆಸುತ್ತಿದ್ದ ನ್ಯಾಯಯುತ ಹೋರಾಟದ ಮೇಲೆ ಪೈಶಾಚಿಕ ದಾಳಿ ನಡೆಸಿ , ಸಂವಿಧಾನಬದ್ದ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸಿದೆ‌. ನೀಟ್ ಪರೀಕ್ಷಾ ವೈಫಲ್ಯದಿಂದ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು , ಇದು ಕೇಂದ್ರ ಸರ್ಕಾರ ನಡೆಸಿದ ಬೀಭತ್ಸ ಕೊಲೆಯಾಗಿದೆ. ಇದರ ನೈತಿಕ ಹೊಣೆ ಹೊತ್ತು ಧರ್ಮೇಂದ್ರ ಪ್ರಧಾನ್ ರಾಜಿನಾಮೆ ನೀಡಬೇಕು , ತಪ್ಪಿದಲ್ಲಿ ಈ ಹೋರಾಟ ದೇಶದಲ್ಲಿ ಮತ್ತಷ್ಟು ಬಲಶಾಲಿಯಾಗಬಹುದು.

ಮುಂದಿನ ದಿನಗಳಲ್ಲಿ ಈ ಹೋರಾಟ ದೇಶದ ಎರಡನೇ ಸ್ವಾತಂತ್ರ್ಯ ಹೋರಾಟವಾಗುತ್ತದೆ. ಈಗಾಗಲೇ ಈ ಹೋರಾಟಕ್ಕೆ ದೇಶದ ವಿಪಕ್ಷಗಳು ನೈತಿಕ ಬೆಂಬಲ ಘೋಷಿಸಿದ್ದು ಆಶಾದಾಯಕ ಬೆಳವಣಿಗೆ. ಮುಂದಿನ ದಿನಗಳಲ್ಲಿ ಈ ಹೋರಾಟದಲ್ಲಿ ವಿದ್ಯಾರ್ಥಿ , ಯುವಜನರ ಜೊತೆಗೆ ರೈತ , ಕಾರ್ಮಿಕರು ಸೇರಿದಂತೆ ದೇಶದ ಸರ್ವಾಧಿಕಾರಿ ಧೋರಣೆಯ ಆಡಳಿತವನ್ನು ವಿರೋಧಿಸುವವರು ಜೊತೆಯಾಗುತ್ತಾರೆ ಎಂಬ ವಿಶ್ವಾಸವಿದೆ. ಮುಂದಾಗುವ ಅನಾಹುತಗಳಿಗೆ ಕೇಂದ್ರ ಸರ್ಕಾರವೇ ನೇರ ಹೊಣೆಯಾಗುತ್ತದೆ ಎಂದು ಬೆಳ್ತಂಗಡಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕ ಶೇಖರ ಎಲ್ ಹೇಳಿದರು.

Related posts

ಜೆಸಿಐ ಪುತ್ತೂರಿನಲ್ಲಿ ತರಬೇತಿ ಕಾರ್ಯಗಾರ

Suddi Udaya

ಕೊಕ್ರಾಡಿ: ಭೀಕರ ರಸ್ತೆ ಅಪಘಾತ

Suddi Udaya

ಬೆಳ್ತಂಗಡಿ: ಬುರುಡೆ ಚಿನ್ನಯ್ಯ ಜೈಲಿನಿಂದ ಬಿಡುಗಡೆ

Suddi Udaya

ಸಿ.ಎ ಪರೀಕ್ಷೆಯಲ್ಲಿ ನಾರಾವಿಯ ಕು.ಸಂಗೀತಾ ಜಿ. ಹೆಗ್ಡೆ ತೇರ್ಗಡೆ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಹೊಸಂಗಡಿ ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುನೀಲ್ ಶೆಟ್ಟಿಯವರಿಂದ ನಾಮಪತ್ರ ಸಲ್ಲಿಕೆ

Suddi Udaya
error: Content is protected !!