September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯದ ಜೈನ ಸಮುದಾಯದ ಕುಂದು ಕೊರತೆಗಳ ಬಗ್ಗೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರ ಜೊತೆ ಸಮಾಲೋಚನಾ ಸಭೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ ಬೆಂಗಳೂರು ಕೇಂದ್ರ ಕಚೇರಿಯಲ್ಲಿ ರಾಜ್ಯದ ಜೈನ ಸಮುದಾಯದ ಕುಂದು ಕೊರತೆಗಳ ಬಗ್ಗೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ನಿಸಾರ್ ಅಹ್ಮದ್ ರವರ ಅಧ್ಯಕ್ಷತೆಯಲ್ಲಿ ರಾಜ್ಯ ಅಲ್ಪಸಂಖ್ಯಾತ ಆಯೋಗದ ಸದಸ್ಯರಾದ ಶ್ರೀಮತಿ ಪರಿಮಳ ಜೈನ್ ರವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶೇಕ್ ಲತಿಫ್ ರವರ ಉಪಸ್ಥಿತಿಯಲ್ಲಿ ಇಂದು ಸಭೆ ನಡೆಯಿತು.

ಸಭೆಯಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು, ಸಮಾಜದ ಪ್ರಮುಖರು ಹಾಗೂ ಡಾ. ಕೆ ಜಯಕೀರ್ತಿ ಜೈನ್ ಧರ್ಮಸ್ಥಳ, ಧನಕೀರ್ತಿ ಶೆಟ್ಟಿ ಧರ್ಮಸ್ಥಳ, ಮಹಾವೀರ್ ಜೈನ್ ದೆಪ್ಪುನಿ ಮುಂತಾದವರು ಭಾಗವಹಿಸಿ ಹಲವಾರು ಸಲಹೆ ಸೂಚನೆಗಳನ್ನು ನೀಡಿದರು. ಪ್ರಮುಖವಾಗಿ ತಸ್ತಿಕ್ ಕೊಡುತ್ತಿರುವ ಬಸದಿಗಳಿಗೆ ಸಹಾಯಕ ಪುರೋಹಿತರಿಗೂ ಗೌರವಧನ ನೀಡಬೇಕು. ಸ್ತ್ರೀ ಶಕ್ತಿ ಗುಂಪುಗಳಿಗೆ ಸ್ವ ಉದ್ಯೋಗಕ್ಕೆ ಪ್ರೋತ್ಸಾಹ ಕೊಡಬೇಕು. ಆಯೋಗದ ಕಚೇರಿಗಳಲ್ಲಿ ಸಮಾಜದವರಿಗೆ ಉದ್ಯೋಗ ಅವಕಾಶಗಳನ್ನು ನೀಡಬೇಕು ಬಸದಿಗಳ ದಾಖಲೆಗಳನ್ನು ಸರಿಪಡಿಸಲು ಸಹಕರಿಸಬೇಕು. ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಮುಂತಾದ ಹಲವಾರು ವಿಷಯಗಳನ್ನು ಅಧ್ಯಕ್ಷರ ಗಮನಕ್ಕೆ ತಂದು ಸರಕಾರಕ್ಕೆ ಶಿಫಾರಸ್ ಮಾಡುವಂತೆ ಮನವಿ ಸಲ್ಲಿಸಲಾಯಿತು.

Related posts

ಗುರುವಾಯನಕೆರೆ ಶ್ರೀಶಾರದಾಂಭ ಭಜನಾ ಮಂಡಳಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಬೆಳ್ತಂಗಡಿ ನ್ಯಾಯವಾದಿ ಭಗೀರಥ ಜಿ ರವರ ನೋಟರಿ ಕಚೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

ಉಜಿರೆ : ಅಭ್ಯಾಸ್ ಪಿ.ಯು ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಕಾರ್ಯಕ್ರಮ

Suddi Udaya

ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ. ಮಾ. ಶಾಲೆಯ ವಿದ್ಯಾರ್ಥಿ ಯಶಸ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಎಸ್‌.ಡಿ.ಎಂ ಕಾಲೇಜು : ‘ ಕೆಮ್ಸಿನ್–2026’ ರಾಷ್ಟ್ರ ಮಟ್ಟದ ವಿಚಾರ ಸಂಕಿರಣ ಮಾಹಿತಿ ಕೈಪಿಡಿ ಬಿಡುಗಡೆ:

Suddi Udaya

ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ನಾಮನಿರ್ದೇಶಿತ ಸದಸ್ಯರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಅಭಿನಂದನೆ

Suddi Udaya
error: Content is protected !!