September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ರುಡ್‌ ಸೆಟ್ ಸಂಸ್ಥೆಯಲ್ಲಿ ವಿಶೇಷ ಸಂವಾದ ಕಾರ್ಯಕ್ರಮ

ಉಜಿರೆ: ರುಡ್‌ ಸೆಟ್ (RUDSETI) ಸಂಸ್ಥೆಯಲ್ಲಿ ಮಹಿಳಾ ಟೈಲರಿಂಗ್, ಕಂಪ್ಯೂಟರ್ ಡಿಟಿಪಿ ಹಾಗೂ ಸಿಸಿ ಕ್ಯಾಮರಾ ಅಳವಡಿಸುವಿಕೆ ತರಬೇತಿ ಪಡೆಯುತ್ತಿರುವ ಶಿಬಿರಾರ್ಥಿಗಳೊಂದಿಗೆ ವಿಶೇಷ ಸಂವಾದ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ. ಎನ್. ಜನಾರ್ದನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಕೌಶಲ್ಯಾಭಿವೃದ್ಧಿ, ಆತ್ಮವಿಶ್ವಾಸ ಹಾಗೂ ಉದ್ಯಮಶೀಲತೆಯ ಮಹತ್ವವನ್ನು ವಿವರಿಸಿದರು. ತರಬೇತಿಯ ಮೂಲಕ ಪಡೆದ ಜ್ಞಾನವನ್ನು ಸ್ವಯಂ ಉದ್ಯೋಗದ ಅವಕಾಶಗಳಾಗಿ ರೂಪಿಸಿಕೊಳ್ಳುವಂತೆ ಶಿಬಿರಾರ್ಥಿಗಳಿಗೆ ಕರೆ ನೀಡಿದರು.

ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಸುನಿಲ್ ಜಿ. ನಾಯ್ಕ ಮಾತನಾಡಿ, ಸಂಸ್ಥೆಯು ಗ್ರಾಮೀಣ ಯುವಜನರು ಹಾಗೂ ಮಹಿಳೆಯರಿಗೆ ಉಚಿತ ಕೌಶಲ್ಯ ತರಬೇತಿ ನೀಡಿ ಸ್ವಾವಲಂಬಿ ಜೀವನಕ್ಕೆ ಅಗತ್ಯ ಮಾರ್ಗದರ್ಶನ ನೀಡುತ್ತಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಹಿರಿಯ ಉಪನ್ಯಾಸಕರುಗಳಾದ ಅಬ್ರಹಾಂ ಜೇಮ್ಸ್ ಹಾಗೂ ಕೆ. ಕರುಣಾಕರ ಜೈನ್ ಉಪಸ್ಥಿತರಿದ್ದು, ಶಿಬಿರಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು. ಸಂವಾದದಲ್ಲಿ ಶಿಬಿರಾರ್ಥಿಗಳು ಉದ್ಯೋಗ ಹಾಗೂ ಸ್ವಯಂ ಉದ್ಯಮಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳಿ ಮಾರ್ಗದರ್ಶನ ಪಡೆದರು. ಕಾರ್ಯಕ್ರಮದಲ್ಲಿ ತರಬೇತುದಾರರು, ಶಿಬಿರಾರ್ಥಿಗಳು ಹಾಗೂ ರುಡ್ ಸೆಟ್ ಸಂಸ್ಥೆಯ ಸಿಬ್ಬಂದಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಉಜಿರೆಯಲ್ಲಿ ಗಾಳಿ- ಮಳೆಗೆ ವಾಹನಗಳ ಮೇಲೆ ಬಿದ್ದ ಮರ, ಒರ್ವರಿಗೆ ಗಾಯ, ಸಂಚಾರ ಅಸ್ತವ್ಯಸ್ಥ

Suddi Udaya

ಮಾಲಾಡಿ: ಪೆರ್ಡೆ ಕ್ರಾಸ್ – ಊರ್ಲ ರಸ್ತೆ ಶಾಸಕ ಹರೀಶ್ ಪೂಂಜರಿಂದ ಲೋಕಾರ್ಪಣೆ

Suddi Udaya

ಬೆಳ್ತಂಗಡಿಗೆ ಎರಡು ನ್ಯಾಯಾಧೀಶರನ್ನು ನೇಮಕಗೊಳಿಸಿ ಹೈಕೋರ್ಟ್ ಆದೇಶ

Suddi Udaya

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ‘ಪರೋಪಕಾರ ಸಪ್ತಾಹ’

Suddi Udaya

ಬೆಳ್ತಂಗಡಿ ಪ.ಪಂ. ನಿವೃತ್ತ ನೌಕರ ವಿಜಯ ಕುಮಾರ್ ಜೈನ್ ನಿಧನ

Suddi Udaya
error: Content is protected !!