24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೇಂದ್ರ ಸರ್ಕಾರದ ದಮನಕಾರಿ ಕ್ರಮ ಪ್ರಜಾಪ್ರಭುತ್ವಕ್ಕೆ ಕಳಂಕ: ರಕ್ಷಿತ್ ಶಿವರಾಂ

ಬೆಳ್ತಂಗಡಿ : ನವದೆಹಲಿಯಲ್ಲಿ ತಮ್ಮ ನ್ಯಾಯಸಮ್ಮತ ಬೇಡಿಕೆಗಳಿಗಾಗಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿರುವುದು ಅತ್ಯಂತ ಖಂಡನೀಯ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುವ ಯುವಜನರ ಮೇಲೆ ಬಲಪ್ರಯೋಗ ನಡೆಸಿರುವುದು ಕೇಂದ್ರ ಸರ್ಕಾರದ ದಮನಕಾರಿ ಮನೋಭಾವವನ್ನು ಬಯಲಿಗೆಳೆದಿದೆ.

ದೇಶದ ಯುವಕರು ಉದ್ಯೋಗ, ಶಿಕ್ಷಣ ಹಾಗೂ ಭವಿಷ್ಯದ ಭದ್ರತೆಗಾಗಿ ತಮ್ಮ ಅಳಲನ್ನು ವ್ಯಕ್ತಪಡಿಸುತ್ತಿದ್ದಾರೆ. ಅವರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಂಡುಕೊಳ್ಳುವ ಬದಲು, ಲಾಠಿ ಚಾರ್ಜ್ ಮೂಲಕ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ.

ದೇಶದ ಯುವಕರಿಗೆ ಉದ್ಯೋಗದ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕೇಂದ್ರ ಸರ್ಕಾರ ಇಂದು ಅದೇ ಯುವಕರ ಮೇಲೆ ದೌರ್ಜನ್ಯ ನಡೆಸುತ್ತಿರುವುದು ಅತ್ಯಂತ ವಿಷಾದನೀಯ. ವಿದ್ಯಾರ್ಥಿಗಳ ಧ್ವನಿಯನ್ನು ಹತ್ತಿಕ್ಕುವುದರಿಂದ ಸಮಸ್ಯೆಗಳು ಪರಿಹಾರವಾಗುವುದಿಲ್ಲ. ಅವರ ನ್ಯಾಯಯುತ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಿ, ಸಂವಾದದ ಮೂಲಕ ಪರಿಹಾರ ಕಂಡುಕೊಳ್ಳಬೇಕು.

ಲಾಠಿ ಚಾರ್ಜ್‌ನಲ್ಲಿ ಗಾಯಗೊಂಡ ವಿದ್ಯಾರ್ಥಿಗಳಿಗೆ ಸೂಕ್ತ ಚಿಕಿತ್ಸೆ ಮತ್ತು ನ್ಯಾಯ ಒದಗಿಸಬೇಕು. ಈ ಘಟನೆಯ ಕುರಿತು ಪಾರದರ್ಶಕ ತನಿಖೆ ನಡೆಸಿ, ಹೊಣೆಗಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನಾನು ಕೇಂದ್ರ ಸರ್ಕಾರವನ್ನು ಆಗ್ರಹಿಸುತ್ತೇನೆ.

ಕಾಂಗ್ರೆಸ್ ಪಕ್ಷವು ಸದಾ ವಿದ್ಯಾರ್ಥಿಗಳು ಹಾಗೂ ಯುವಜನರ ಹಕ್ಕುಗಳ ಪರವಾಗಿ ನಿಲ್ಲಲಿದೆ. ದೇಶದ ಪ್ರಜಾಪ್ರಭುತ್ವ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸಂವಿಧಾನಾತ್ಮಕ ಹಕ್ಕುಗಳ ರಕ್ಷಣೆಗೆ ನಮ್ಮ ಹೋರಾಟ ನಿರಂತರವಾಗಿರುತ್ತದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದರು.

Related posts

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘದ 18ನೇ ವರ್ಷದ ವಾರ್ಷಿಕೋತ್ಸವ-ವಿಶ್ವಕರ್ಮ ಪೂಜೆ

Suddi Udaya

ಪಣಕಜೆ ವಿಜಯ ಸಾಲ್ಯಾನರವರ ಮನೆಗೆ ಬಿದ್ದ ಮರ

Suddi Udaya

ಬೆಳ್ತಂಗಡಿ ತಾಲೂಕಿನ ವಿವಿಧ ಕಡೆಗಳಲ್ಲಿ ಗೆಜ್ಜೆಗಿರಿ ಜಾತ್ರೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಉಜಿರೆ ವಲಯದ ಮಾಚಾರು ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಕಾರು ಪಲ್ಟಿ: ಅದೃಷ್ಟವಶಾತ್ ತಪ್ಪಿದ ಅನಾಹುತ

Suddi Udaya
error: Content is protected !!