September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಬೆಳೆ ಸಮೀಕ್ಷೆ ಮಾಹಿತಿ ಕಾರ್ಯಾಗಾರ

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ರೈತರಿಗೆ ಬೆಳೆ ಸಮೀಕ್ಷೆ ಮಾಹಿತಿ ಕಾರ್ಯಾಗಾರ ಜು.21ರಂದು ನಡೆಯಿತು.

ಬೆಳ್ತಂಗಡಿ ಕೃಷಿ ಅಧಿಕಾರಿ ಗಣೇಶ್ ರವರು ಮೊಬೈಲ್ ಮೂಲಕವೇ ಬೆಳೆ ಸಮೀಕ್ಷೆ ಮಾಡು ಕುರಿತು ಮಾಹಿತಿ ನೀಡಿದರು. ಸುರೇಶ್ಚಂದ್‌ರ ತೊಟ್ಟೆತ್ತೋಡಿ ಸುಳ್ಯ ಹಾಗೂ ಎಡ್ವಾರ್ಡ್ ರೆಬೆಲ್ಲೋ ಮೂಡಬಿದ್ರೆ ಇವರಿಂದ ರೈತರ ಆದಾಯ ದ್ವಿಗುಣಗೊಳಿಸಲು ಅಡಿಕೆ ಜೊತೆಗೆ ಲಾಭದಾಯಕ ಬೆಳೆಗಳಾದ ಜಾಯಿಕಾಯಿ, ರಾಂಬೂಟನ್, ಕೋಕೋ, ಮ್ಯಾಂಗೋಸ್ಟೀನ್, ಕಾಳುಮೆಣಸು ಗಿಡಗಳನ್ನು ಬೆಳೆಸುವ, ಪೋಷಿಸುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ಪ್ರೀತಮ್, ಉಪಾಧ್ಯಕ್ಷರು, ಮುಖ್ಯಕಾರ್ಯನಿರ್ವಹಣಾಧಿಕಾರಿ, ನಿರ್ದೇಶಕರು, ಸಿಬ್ಬಂದಿವರ್ಗ, ಉಪಸ್ಥಿತರಿದ್ದರು. ರೈತ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಾಹಿತಿ ಪಡೆದುಕೊಂಡರು.

Related posts

ಕೊಕ್ಕಡ: ಮಜ್ದೂರ್ ಸಂಘದ ಕೊಕ್ಕಡ ವಲಯದ ನೂತನ ಕಛೇರಿಯ ಉದ್ಘಾಟನೆ

Suddi Udaya

ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲು

Suddi Udaya

ಮಡಂತ್ಯಾರು ಶೌರ್ಯ ಘಟಕದ ಸ್ವಯಂಸೇವಕರಿಂದ ಕರ್ನಾಟಕ ಪಬ್ಲಿಕ್ ಶಾಲೆಯ ಎಲ್.ಕೆ.ಜಿ ಮತ್ತು ಯು.ಕೆ.ಜಿ ಮಕ್ಕಳ ‘ಚಿಲಿಪಿಲಿ ಆಟದ ಮೈದಾನ ಶ್ರಮದಾನ

Suddi Udaya

ಫೆ 16: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಜಾತ್ರೋತ್ಸವ,ಫೆ 19 ಭೈರವಕಲ್ಲಿನ ಪುರುಷರಾಯ ಜಾತ್ರೆ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

Suddi Udaya

ಧರ್ಮಸ್ಥಳದಲ್ಲಿ ರಾಜ್ಯ ಭಜನಾ ಪರಿಷತ್ ಸಭೆ

Suddi Udaya
error: Content is protected !!