24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನೀಟ್ ಪ್ರತಿಭಟನೆಕಾರರ ಮೇಲಿನ ಹಲ್ಲೆ ಖಂಡನೀಯ : ಜಿಲ್ಲಾ ಕೆ ಡಿ ಪಿ ಸದಸ್ಯ ಸಂತೋಷ್ ಕುಮಾರ್ ಲಾಯಿಲ

ಬೆಳ್ತಂಗಡಿ: ವ್ಯವಸ್ಥಿತ ಪರೀಕ್ಷೆ ನಡೆಸದೆ, ಪ್ರಶ್ನೆಪತ್ರಿಕೆ ಸೋರಿಕೆಯಾದರೂ ಸುಮ್ಮನಿದ್ದು, ಕೇಂದ್ರ ಸರಕಾರದಿಂದ ಆದ ಅನ್ಯಾಯದ ವಿರುದ್ಧ, ನೀಟ್ ಪರೀಕ್ಷೆಯ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯ ಮತ್ತು ಲಾಠಿಚಾರ್ಜ್ ನಡೆಸಿರುವುದು ಖಂಡನೀಯ. ವಿದ್ಯಾರ್ಥಿಗಳು ದೇಶದ ಭವಿಷ್ಯ, ದೇಶದಲ್ಲಿ ಹುಟ್ಟಿದ ಪ್ರತಿಯೊಬ್ಬನಿಗೂ ಪ್ರತಿಭಟಿಸುವ ಸಾವಿಂಧಾನಿಕ ಹಕ್ಕಿದ್ದು, ಆದ ಅನ್ಯಾಯದ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಹಕ್ಕೊತ್ತಾಯ ಮಂಡಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ದೌರ್ಜನ್ಯ ಮಾಡುವ ಮೂಲಕ ಕೇಂದ್ರ ಸರಕಾರವನ್ನು ಯಾರೂ ಪ್ರಶ್ನಿಸುವಂತಿಲ್ಲ ಎನ್ನುವ ನಡೆ ದಬ್ಬಳಿಕೆಯೇ ಸರಿ.

ನೀಟ್ ಪರೀಕ್ಷೆಯ ಅಕ್ರಮಗಳು ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ವಿರುದ್ಧ ನ್ಯಾಯಕ್ಕಾಗಿ ಹೋರಾಡುತ್ತಿದ್ದ ಲಕ್ಷಾಂತರ ವಿದ್ಯಾರ್ಥಿಗಳ ಸಮೂಹದ ಧ್ವನಿಯನ್ನು ಕೇಂದ್ರ ಸರ್ಕಾರ ಪೊಲೀಸರನ್ನು ಬಳಸಿಕೊಂಡು ಹತ್ತಿಕ್ಕಲು ಯತ್ನಿಸಿದೆ. ದೆಹಲಿ ಪೊಲೀಸರು ನಡೆಸಿದ ಲಾಠಿಚಾರ್ಜ್ ಮತ್ತು ದೌರ್ಜನ್ಯ ಇಡೀ ನಾಗರಿಕ ಸಮಾಜವೇ ತಲೆತಗ್ಗಿಸುವಂತೆ ಮಾಡಿದೆ. ಪರೀಕ್ಷೆಯ ಗೊಂದಲಗಳು ಮತ್ತು ಭ್ರಷ್ಟಾಚಾರದಿಂದ ಕಂಗಾಲಾಗಿರುವ ವಿದ್ಯಾರ್ಥಿಗಳು ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹಾಗೂ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿರುವುದೇ ತಪ್ಪೇ…? ಪ್ರತಿಭಟನೆಯ ಭಾಗವಾಗಿ ಸೋಮವಾರದಂದು ‘ಸಂಸತ್ ಚಲೋ’ ಹಕ್ಕೊತ್ತಾಯ ಮೆರವಣಿಗೆ ಹೊರಡಲು ಸಿದ್ಧರಾಗಿದ್ದ ವಿದ್ಯಾರ್ಥಿಗಳನ್ನು ಪೊಲೀಸರು ಯಾವುದೇ ಮುನ್ಸೂಚನೆ ನೀಡದೆ ಅಮಾಯಕ ವಿದ್ಯಾರ್ಥಿಗಳ ಮೇಲೆ ಮುಗಿಬಿದ್ದಿದ್ದಾರೆ.

ಭವಿಷ್ಯದ ವೈದ್ಯ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರನ್ನದೇ ಮನ ಬಂದಂತೆ ಲಾಠಿ ಬೀಸಿ, ಟಿಯರ್ ಗ್ಯಾಸ್ ಪ್ರಯೋಗಿಸಿದ್ದಾರೆ. ಈ ಸಂದರ್ಭದಲ್ಲಿ ತೀವ್ರ ಗಾಯಗೊಂಡ ಹಲವು ವಿದ್ಯಾರ್ಥಿಗಳನ್ನು ಚಿಕಿತ್ಸೆಗೆ ದಾಖಲಿಸುವ ಬದಲು, ವಶಕ್ಕೆ ಪಡೆದುಕೊಂಡಿದ್ದಾರೆ. ದೇಶದ ಭವಿಷ್ಯವಾಗಬೇಕಿದ್ದ ಯುವಶಕ್ತಿಯನ್ನು ಬೀದಿಯಲ್ಲಿ ನಿಲ್ಲಿಸಿ, ಅವರ ರಕ್ತ ಹರಿಯುವಂತೆ ಮಾಡುತ್ತಿರುವುದು ಕೇಂದ್ರದ ಸರ್ವಾಧಿಕಾರಿ ಧೋರಣೆಗೆ ಸಾಕ್ಷಿಯಾಗಿದೆ. ವೈದ್ಯ ವಿದ್ಯಾರ್ಥಿಗಳಿಗೆ ಬಿದ್ದ ಲಾಠಿ ಏಟು ಈ ದೇಶದ ಶಿಕ್ಷಣ ವ್ಯವಸ್ಥೆಗೆ ಬಿದ್ದ ಏಟಾಗಿದೆ. ಕೇಂದ್ರ ಸರ್ಕಾರವು ತಕ್ಷಣ ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಲ್ಲಿ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾ ಕೆ ಡಿ ಪಿ ಸದಸ್ಯರಾದ ನ್ಯಾಯವಾದಿ ಸಂತೋಷ್ ಕುಮಾರ್ ಲಾಯಿಲ ಆಗ್ರಹಿಸಿದ್ದಾರೆ.

Related posts

ಪಟ್ರಮೆಯ ಹಿಂದೂ ಯುವಕನ ಜೊತೆ ನೆಲ್ಲಿಕಾರಿನ ಮುಸ್ಲಿಂ ಯುವತಿ ವಿವಾಹ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸತತ 6ನೇ ಬಾರಿ ಎಸ್.ಡಿ.ಸಿ.ಸಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕೊಕ್ರಾಡಿ -ಸಾವ್ಯ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya

ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆದ ಕಂಬಳ: ದಿಡುಪೆ ಪರಂಬೇರಿನ ನಾರಾಯಣ ಮಲೆಕುಡಿಯರ ಕೋಣಗಳು, ನೇಗಿಲು ಹಿರಿಯ ವಿಭಾಗದಲ್ಲಿ ಪ್ರಥಮ, ಒಂದು ಲಕ್ಷ ನಗದು, 16 ಗ್ರಾಂ ಚಿನ್ನ ಮತ್ತು ಟ್ರೋಫಿ

Suddi Udaya
error: Content is protected !!