September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್‌ಡಿಎಂ ಕಾಲೇಜಿನ ಕಲಾ ವಿಭಾಗದ ನೂತನ ಡೀನ್ ಆಗಿ ಡಾ. ಬೋಜಮ್ಮ ಕೆ. ಎನ್. ನೇಮಕ

ಉಜಿರೆ: ಇಲ್ಲಿನ ಎಸ್‌ಡಿಎಂ ಸ್ವಾಯತ್ತ ಕಾಲೇಜಿನ ಕಲಾ ವಿಭಾಗದ ನೂತನ ಡೀನ್ ಆಗಿ ಡಾ. ಬೋಜಮ್ಮ ಕೆ. ಎನ್. ಅವರು ನೇಮಕಗೊಂಡಿದ್ದಾರೆ.

ಕಳೆದ 33 ವರ್ಷಗಳಿಂದ ಬೋಧನಾ ಕ್ಷೇತ್ರದಲ್ಲಿ ಸಕ್ರಿಯರಾಗಿರುವ ಡಾ. ಬೋಜಮ್ಮ ಅವರು, ಕಳೆದ 21 ವರ್ಷಗಳಿಂದ ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕಳೆದ 5 ವರ್ಷಗಳಿಂದ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ತಮ್ಮ ಅತ್ಯುತ್ತಮ ಬೋಧನೆ ಹಾಗೂ ವಿದ್ಯಾರ್ಥಿ ಸ್ನೇಹಿ ವ್ಯಕ್ತಿತ್ವದಿಂದ ಅಪಾರ ವಿದ್ಯಾರ್ಥಿಗಳ ಪ್ರೀತಿಗೆ ಪಾತ್ರರಾಗಿದ್ದಾರೆ. ಇದೀಗ ಇವರ ಸುದೀರ್ಘ ಅನುಭವ ಮತ್ತು ಸೇವೆಯನ್ನು ಪರಿಗಣಿಸಿ, ಕಲಾ ವಿಭಾಗದ ನೂತನ ಡೀನ್ ಹೊಣೆಗಾರಿಕೆಯನ್ನು ನೀಡಲಾಗಿದೆ.

Related posts

ತಣ್ಣೀರುಪಂತ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ

Suddi Udaya

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ ಖಂಡಿಸಿ ಮುಂಡಾಜೆ ವಿರಾಟ್ ಹಿಂದೂ ಸೇವಾ ಸಂಘ ವತಿಯಿಂದ ಸೋಮಂತಡ್ಕದಲ್ಲಿ ಪಂಜಿನ ಮೆರವಣಿಗೆ ಮತ್ತು ಪ್ರತಿಭಟನೆ

Suddi Udaya

ನಾಳ ದೇವಸ್ಥಾನದಲ್ಲಿ ಯಕ್ಷಗಾನ ಬಯಲಾಟ

Suddi Udaya

ಕೊಕ್ಕಡ “ಅಮೃತ” ಗ್ರಾಮ ಪಂಚಾಯತ್ ವಿವಿಧ ಕಾಮಗಾರಿಗಳ ಉದ್ಘಾಟನೆ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಕಡಿರುದ್ಯಾವರ ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya
error: Content is protected !!