24.1 C
ಪುತ್ತೂರು, ಬೆಳ್ತಂಗಡಿ
September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಕು.ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರುತನಿಖೆಗೆ ಒಪ್ಪಿಗೆ : ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಬೆಳ್ತಂಗಡಿ: ತಾಲೂಕಿನ ಧರ್ಮಸ್ಥಳ ಗ್ರಾಮದ ಪಾಂಗಳ ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ ತಳೆದಿದ್ದು, ಪ್ರಕರಣದ ಮರುತನಿಖೆಗೆ ಒಪ್ಪಿಗೆ ಸೂಚಿಸಿದೆ. ಮರುತನಿಖೆಯನ್ನು ಯಾವ ರೀತಿ ಹಾಗೂ ಯಾವ ಏಜೆನ್ಸಿ ಮೂಲಕ ನಡೆಸಬೇಕು ಎಂಬುದರ ಕುರಿತು ವಾದ-ಪ್ರತಿವಾದಗಳನ್ನು ಆಲಿಸಿದ ದೇಶದ ಅತ್ಯುನ್ನತ ನ್ಯಾಯಾಲಯವು ತನ್ನ ಅಂತಿಮ ತೀರ್ಪನ್ನು ಕಾಯ್ದಿರಿಸಿದೆ.

ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ರಾಜ್ಯ ಸರ್ಕಾರವು ಪ್ರಕರಣದ ಮರುತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (SIT)ರಚಿಸಲು ಸಂಪೂರ್ಣ ಸಿದ್ಧವಿರುವುದಾಗಿ ತಿಳಿಸಿದೆ. ಸೌಜನ್ಯ ಅವರ ತಾಯಿ ಕುಸುಮಾವತಿ ಅವರು ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಾಧೀಶರ ನೇರ ಉಸ್ತುವಾರಿಯಲ್ಲಿಯೇ ಈ ತನಿಖೆ ನಡೆಯಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ.

ತನಿಖಾ ಸಂಸ್ಥೆ ಹಾಗೂ ತನಿಖೆಯ ಸ್ವರೂಪದ ಕುರಿತು ನ್ಯಾಯಾಲಯವು ತನ್ನ ಅಂತಿಮ ಆದೇಶದಲ್ಲಿ ವಿಸ್ತ್ರತವಾದ ನಿರ್ದೇಶನಗಳನ್ನು ನೀಡಲಿದೆ. ದಶಕದ ಹಿಂದೆ ನಡೆದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆ ನಡೆಸುವಂತೆ ಸೌಜನ್ಯ ತಾಯಿ ಕುಸುಮಾವತಿ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ಸೂಚನೆ ನೀಡಿದೆ.

Related posts

ಏಷ್ಯನ್ ಪೆಸಿಫಿಕ್ ಚಾಂಪಿಯನ್ ಶಿಪ್ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲೆಯ ಶಿಕ್ಷಕಿ ಶ್ರೀಮತಿ ಅಕ್ಕಮ್ಮ ರವರಿಗೆ ಚಿನ್ನದ ಪದಕ

Suddi Udaya

ಇಳಂತಿಲ ಅಂಡೆತಡ್ಕ ಮನೆ ನಿವಾಸಿ ಅರುಣ್ ನಾಪತ್ತೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಕ್ಷಗಾನ ಮೇಳದ ಪ್ರಧಾನ ಸಂಚಾಲಕರಾಗಿ ಲ. ನಿತ್ಯಾನಂದ ನಾವರ ನೇಮಕ

Suddi Udaya

ನಾವೂರು ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕ-ಶಿಕ್ಷಕರ ಸಭೆ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿ ಚಾರ್ಜ್ ಖಂಡಿಸಿ: ಬೆಳ್ತಂಗಡಿ ಯುವ ಕಾಂಗ್ರೆಸ್ ವತಿಯಿಂದ ರಸ್ತೆ ತಡೆ ಪ್ರತಿಭಟನೆ

Suddi Udaya

ತೆಕ್ಕಾರು ಗ್ರಾ.ಪಂ. ನಿಂದ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!