September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಂಘ ರಚನೆ, ಪೋಷಕರ ಸಭೆ

ಬೆಳಾಲು: ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ 2026 – 27 ನೇ ಸಾಲಿನ ಶಿಕ್ಷಕ ರಕ್ಷಕ ಸಂಘ ರಚನೆ ಮತ್ತು ಪೋಷಕರ ಸಭೆ ಇತ್ತೀಚೆಗೆ ನಡೆಯಿತು.

ಅಧ್ಯಕ್ಷರಾಗಿ ಪ್ರಮೀಳಾ , ಉಪಾಧ್ಯಕ್ಷರಾಗಿ ಯಶೋಧರ, ಸದಸ್ಯರಾಗಿ ಮೋಹನ್, ಪುಟ್ಟಣ್ಣ, ಶೀಲಾವತಿ, ಅರುಣಾಕ್ಷಿ, ಸುರೇಶ ಮತ್ತು ಶ್ವೇತ ಆಯ್ಕೆಯಾದರು. ಕಾರ್ಯದರ್ಶಿಯಾಗಿ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಮತ್ತು ಜೊತೆ ಕಾರ್ಯದರ್ಶಿಯಾಗಿ ಶಿಕ್ಷಕ ಕಿರಣ್ ಕಾರ್ಯನಿರ್ವಹಿಸುವರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾಂಚನ ವೆಂಕಟ ಸುಬ್ರಹ್ಮಣ್ಯ ಸ್ಮಾರಕ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ರಮೇಶ್ ಮಯ್ಯ ಮಾತನಾಡಿ, ಮಕ್ಕಳ ಸರ್ವಾಂಗಿಣ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರದಷ್ಟೆ ಪೋಷಕರ ಪಾತ್ರ ಬಹಳ ಮುಖ್ಯವಾಗಿರುತ್ತದೆ. ಮಕ್ಕಳನ್ನು ಇತರರೊಂದಿಗೆ ಹೋಲಿಕೆ ಮಾಡದೆ ಸಂಸ್ಕೃತಿ ಸಂಸ್ಕಾರ ಕಲಿಸಿದರೆ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗುವುದು ಎಂದರು.

ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಶಾಲೆಯಲ್ಲಿರುವ ಸೌಲಭ್ಯಗಳು ಮತ್ತು ಶೈಕ್ಷಣಿಕ ಚಟುವಟಿಕೆಗಳ ಕುರಿತು ಪೋಷಕರಿಗೆ ಮಾಹಿತಿ ನೀಡಿದರು. ಶಿಕ್ಷಕಿ ಕೋಕಿಲ 2025-26 ನೇ ಸಾಲಿನ ವರದಿಯನ್ನು ವಾಚಿಸಿದರು.

ವೇದಿಕೆಯಲ್ಲಿ ಶಿಕ್ಷಕ ರಕ್ಷಕ ಸಂಘದ ನಿಕಟಪೂರ್ವ ಅಧ್ಯಕ್ಷರಾದ ರಾಜೇಶ್ ಕುರ್ಕಿಲ , ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ರವಿಚಂದ್ರ ಜೈನ್ ಕಾರ್ಯಕ್ರಮ ಸಂಘಟಿಸಿದರು. ಶಿಕ್ಷಕ ಕಿರಣ್ ಸ್ವಾಗತಿಸಿ, ಕೃಷ್ಣಾನಂದ ವಂದಿಸಿ, ಸುಮನ್ ಯು.ಎಸ್. ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ತಾಲೂಕಿನಾದ್ಯಂತ ಪೂಜಿಸಲ್ಪಡುವ ಗಣೇಶೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಪಡಂಗಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಸಿರಿ ಸಂಜೀವಿನಿ ಗ್ರಾಮ ಪಂಚಾಯತ್ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಅ.3: ಮುಂಡಾಜೆ ಮೂರ್ತಿಲ್ಲಾಯ ಭಕ್ತವೃಂದದಿಂದ ಬಿರ್ದ್‌ದ ಪಿಲಿಗೊಬ್ಬು

Suddi Udaya

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಚಂದ್ರಯಾನ-3 ರ ಯಶಸ್ಸು ರಾಷ್ಟ್ರದ ಇತಿಹಾಸದಲ್ಲಿ ಹೊಸ ಪುಟಗಳನ್ನು ತೆರೆದಿದೆ: ಪ್ರತಾಪ್ ಸಿಂಹ ನಾಯಕ್

Suddi Udaya

ಧರ್ಮಸ್ಥಳ ಗ್ರಾ.ಪಂ. ಪಿಡಿಒ ಉಮೇಶ್ ಕೆ. ಸೇವಾ ನಿವೃತ್ತಿ: ಧರ್ಮಸ್ಥಳ ಬೀಳ್ಕೊಡುಗೆ ಸಮಾರಂಭ ಸಮಿತಿಯಿಂದ ಬೀಳ್ಕೊಡುಗೆ

Suddi Udaya
error: Content is protected !!