September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಾಸಕರ ಮುತುವರ್ಜಿಯಿಂದ ಪದವು–ಬೊಳ್ಮನಾರ್ ಮುಖ್ಯರಸ್ತೆಗೆ ತುರ್ತು ದುರಸ್ತಿ; ಮಳೆಗಾಲದ ಬಳಿಕ ರೂ.30 ಲಕ್ಷ ವೆಚ್ಚದಲ್ಲಿ ಮರುಡಾಮರೀಕರಣ

ಬೆಳ್ತಂಗಡಿ : ಪುದುವೆಟ್ಟು ಗ್ರಾಮದ ಪದವು–ಬೊಳ್ಮನಾರ್ ಮುಖ್ಯರಸ್ತೆಯ ದುಸ್ಥಿತಿಯನ್ನು ಶಾಸಕ ಹರೀಶ್ ಪೂಂಜ ಅವರ ಮುತುವರ್ಜಿಯಿಂದ ಪರಿಶೀಲಿಸಿ, ಸಾರ್ವಜನಿಕರ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.

ಇತ್ತೀಚಿನ ಭಾರೀ ಮಳೆಯಿಂದ ಹದಗೆಟ್ಟ ರಸ್ತೆಗೆ ತಾತ್ಕಾಲಿಕವಾಗಿ ವೆಟ್ ಮಿಕ್ಸ್ ಹಾಕಿ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿದೆ. ಜೊತೆಗೆ, ರಸ್ತೆಯಲ್ಲಿ ಶೇಖರಗೊಂಡ ಮಳೆನೀರು ಸರಾಗವಾಗಿ ಹರಿದು ಹೋಗುವಂತೆ ಅಗತ್ಯ ಚರಂಡಿ ನಿರ್ಮಾಣ ಕಾರ್ಯಕ್ಕೂ ಕ್ರಮ ಕೈಗೊಳ್ಳಲಾಗಿದೆ.

ಈ ರಸ್ತೆಯ ಮರುಡಾಮರೀಕರಣ ಕಾಮಗಾರಿಗಾಗಿ ಈಗಾಗಲೇ ರೂ.30 ಲಕ್ಷ ಅನುದಾನವನ್ನು ಮಂಜೂರು ಮಾಡಲಾಗಿದ್ದು, ಅಗತ್ಯ ಆಡಳಿತಾತ್ಮಕ ಅನುಮೋದನೆಯೂ ದೊರೆತಿದೆ. ಪ್ರಸ್ತುತ ಮಳೆಗಾಲ ಇರುವುದರಿಂದ ಶಾಶ್ವತ ಕಾಮಗಾರಿಯನ್ನು ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ತಾತ್ಕಾಲಿಕ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ.

ಮಳೆಗಾಲ ಮುಗಿದ ತಕ್ಷಣವೇ ರಸ್ತೆ ಮರುಡಾಮರೀಕರಣ ಕಾಮಗಾರಿಯನ್ನು ಆರಂಭಿಸಿ, ಉತ್ತಮ ಗುಣಮಟ್ಟದ ಶಾಶ್ವತ ರಸ್ತೆ ನಿರ್ಮಾಣದ ಮೂಲಕ ಸಾರ್ವಜನಿಕರ ಬಹುಕಾಲದ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲಾಗುವುದು.

Related posts

ಮಾ.6: ವೇಣೂರು ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ಧರ್ಮಸ್ಥಳದ ಸಂತೋಷ್ ಆಚಾರ್ಯ ಮತ್ತು ಕೇಶವ ಪೂಜಾರಿ ಖುಲಾಸೆ

Suddi Udaya

ಲಾಯಿಲ: ಪಡ್ಲಾಡಿ ಶಾಲಾ ವಠಾರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಉತ್ಸವ

Suddi Udaya

ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ 12 ವರ್ಷ : ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ದ.ಕ ಜಿಲ್ಲಾ ಕಸಾಪ ವತಿಯಿಂದ ನಾಲ್ವರು ಹಿರಿಯ ಸಾಹಿತಿಗಳ ಭೇಟಿ, ಯೋಗಕ್ಷೇಮ ವಿಚಾರಣೆ

Suddi Udaya

ಬೆಳಾಲು ಶ್ರೀ ಧ. ಮ. ಅನುದಾನಿತ ಪ್ರೌಢಶಾಲೆಯಲ್ಲಿ ಆಟಿದ ಲೇಸ್ ಕಾರ್ಯಕ್ರಮ

Suddi Udaya
error: Content is protected !!