September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಿಪ್ಲೋಮ – CET ಪರೀಕ್ಷೆ : ಉಜಿರೆಯ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿಗೆ ಅತ್ಯುತ್ತಮ ರ‍್ಯಾಂಕ್

ಉಜಿರೆ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ದ್ವಿತೀಯ ವರ್ಷದ ನೇರ ಇಂಜಿನಿಯರಿಂಗ್ (Lateral Entry) ಪ್ರವೇಶಕ್ಕಾಗಿ ನಡೆಸುವ ರಾಜ್ಯ ಮಟ್ಟದ ಪರೀಕ್ಷೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ರ‍್ಯಾಂಕ್ ಗಳನ್ನು ಪಡೆಯುವ ಮೂಲಕ ವಿಶೇಷ ಸಾಧನೆ ಮೆರೆದಿದ್ದಾರೆ.

ಕಾಲೇಜಿನ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್ ವಿಭಾಗದ ವಿದ್ಯಾರ್ಥಿ ಅಭಿಷೇಕ್ ಪ್ರಶಾಂತ್ ಅವರು ರಾಜ್ಯ ಮಟ್ಟದಲ್ಲಿ 59ನೇ ರ‍್ಯಾಂಕ್ ಪಡೆಯುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ. ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿನಿ ಶ್ರೇಷ್ಠ ವೈ . ಆರ್. 417 ನೇ ರ‍್ಯಾಂಕ್ , ಸಿವಿಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಧ್ರುವ ಬಿ. ಗೌಡ ಅವರು 624ನೇ ರ‍್ಯಾಂಕ್ ಪಡೆದಿದ್ದಾರೆ. ಉಳಿದಂತೆ ಹಲವು ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಅತ್ಯುತ್ತಮ ರ‍್ಯಾಂಕ್ ಪಡೆದು ಕಾಲೇಜಿನ ಸಾಧನೆಗೆ ಮತ್ತಷ್ಟು ಮೆರುಗು ತಂದಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸೇರಿದಂತೆ ಕಾರ್ಯದರ್ಶಿಗಳಾದ ಡಾ. ಸತೀಶ್ಚಂದ್ರ ಎಸ್, ಐಟಿ ಮತ್ತು ಹಾಸ್ಟೆಲ್ ಆಡಳಿತ ವಿಭಾಗದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪೂರನ್ ವರ್ಮ, ಕಾಲೇಜಿನ ಪ್ರಾಂಶುಪಾಲರು ಸಂತೋಷ್, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಮೆಚ್ಚುಗೆ ವ್ಯಕ್ತಪಡಿಸಿ ಮುಂದಿನ ವಿದ್ಯಾಭ್ಯಾಸ ಹಾಗೂ ವೃತ್ತಿಜೀವನ ಮನ್ನಷ್ಟು ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದ್ದಾರೆ.

Related posts

ಪಾತಾಳ ವೆಂಕಟರಮಣ ಭಟ್ಟರಿಗೆ ಕುರಿಯ ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ 4ನೇ‌ ದಿನದ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಉಜಿರೆ ಅನುಗ್ರಹ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಕರಾಟೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಕರಾಟೆ ಚಾಂಪಿಯನ್‌ಶಿಪ್: ಮುಹಮ್ಮದ್ ಹುಝೈರ್ ಕುಮಿಟೆ ವಿಭಾಗದಲ್ಲಿ ಪ್ರಥಮ, ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya

ಉಜಿರೆಯ ರಕ್ಷಿತ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶ್ರೀರಸ್ತು ಶುಭಮಸ್ತು ಧಾರವಾಹಿಯ ನಟಿ ದೀಪಾ ಕಟ್ಟೆ

Suddi Udaya
error: Content is protected !!