September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರತೀಯ ಮಜ್ದೂರ್ ಸಂಘದ 71ನೇ ಸ್ಥಾಪನಾ ದಿನಾಚರಣೆ ಹಾಗೂ ರಿಕ್ಷಾ ಚಾಲಕ -ಮಾಲಕರ ಸಂಘ ವೇಣೂರು ವಲಯ ವಾರ್ಷಿಕ ಸಭೆ

ವೇಣೂರು: ಭಾರತೀಯ ಮಜ್ದೂರ್ ಸಂಘದ ಸಂಯೋಜಿತ ರಿಕ್ಷಾಚಾಲಕ -ಮಾಲಕರ ಸಂಘ ವೇಣೂರು ವಲಯದ ವತಿಯಿಂದ ಭಾರತೀಯ ಮಜ್ದೂರ್ ಸಂಘದ 71ನೇ ಸ್ಥಾಪನಾ ದಿನಾಚರಣೆ ಹಾಗೂ ವಾರ್ಷಿಕ ಸಭೆಯು ಜು.22 ರಂದು ವೇಣೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕು ರಿಕ್ಷಾ ಯೂನಿಯನ್ ಅಧ್ಯಕ್ಷ ಶ್ರೀ ಕೃಷ್ಣ ಬೆಳಾಲು ವಹಿಸಿದ್ದರು. ವೇಣೂರು ವಲಯ ಅಧ್ಯಕ್ಷ ವಸಂತ ಮಡಿವಾಳ ಅವರು ಅತಿಥಿಗಳನ್ನು ಸ್ವಾಗತಿಸಿ, ಸಂಘದ ವಾರ್ಷಿಕ ವರದಿಯನ್ನು ಮಂಡಿಸಿ ಕಳೆದ ಒಂದು ವರ್ಷದ ಸಂಘಟನಾ ಚಟುವಟಿಕೆಗಳ ಕುರಿತು ವಿವರಿಸಿದರು.

ಜಿಲ್ಲಾಧ್ಯಕ್ಷರಾದ ಅನಿಲ್ ಕುಮಾರ್ ಯು., ವಕೀಲರು ಅವರು ಭಾರತ ಮಾತೆ, ಭಗವಾನ್ ವಿಶ್ವಕರ್ಮ ಹಾಗೂ ಭಾರತೀಯ ಮಜ್ದೂರ್ ಸಂಘದ ಸಂಸ್ಥಾಪಕರಾದ ಪೂಜ್ಯ ದತ್ತೋಪಂತ್ ಬಾಪುರಾವ್ ಥೇಂಗಡಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ, ಭಾರತೀಯ ಮಜ್ದೂರ್ ಸಂಘದ 71ನೇ ಸ್ಥಾಪನಾ ದಿನಾಚರಣೆಯ ಮಹತ್ವ ಕುರಿತು ಮಾತನಾಡಿದರು. 1955ರ ಜುಲೈ 23ರಂದು ಸ್ಥಾಪನೆಯಾದ ಭಾರತೀಯ ಮಜ್ದೂರ್ ಸಂಘವು ಇಂದು ದೇಶದ ಅತಿದೊಡ್ಡ ಕಾರ್ಮಿಕ ಸಂಘಟನೆಯಾಗಿ ಬೆಳೆದಿದ್ದು, “ರಾಷ್ಟ್ರಹಿತ – ಉದ್ಯಮಹಿತ – ಶ್ರಮಿಕಹಿತ” ಎಂಬ ಧ್ಯೇಯದೊಂದಿಗೆ ಕಾರ್ಮಿಕರ ಹಕ್ಕುಗಳ ಜೊತೆಗೆ ಕರ್ತವ್ಯಗಳಿಗೂ ಸಮಾನ ಮಹತ್ವ ನೀಡುತ್ತಿದೆ ಎಂದು ತಿಳಿಸಿದರು. ಸಂಘಟನೆಯನ್ನು ಇನ್ನಷ್ಟು ಬಲಿಷ್ಠಗೊಳಿಸಲು ಸದಸ್ಯತ್ವ ವೃದ್ಧಿ ಹಾಗೂ ಸಮರ್ಪಣಾ ನಿಧಿ ಸಮರ್ಪಣೆಯಲ್ಲಿ ಪ್ರತಿಯೊಬ್ಬ ಸದಸ್ಯರು ಸಕ್ರಿಯವಾಗಿ ಭಾಗವಹಿಸುವಂತೆ ಕರೆ ನೀಡಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಬಿ ಎಮ್ ಎಸ್ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲ್ಯಾನ್ ಅವರು ಇಂದಿನ ಕಾರ್ಮಿಕರು ಎದುರಿಸುತ್ತಿರುವ ವಿವಿಧ ಸವಾಲುಗಳು, ಅಸಂಘಟಿತ ವಲಯದ ಸಮಸ್ಯೆಗಳು ಹಾಗೂ ಸಂಘಟಿತ ಹೋರಾಟದ ಅಗತ್ಯತೆ ಕುರಿತು ಮಾತನಾಡಿ, ಎಲ್ಲ ಕಾರ್ಮಿಕರು ಭಾರತೀಯ ಮಜ್ದೂರ್ ಸಂಘದೊಂದಿಗೆ ಕೈಜೋಡಿಸುವಂತೆ ಮನವಿ ಮಾಡಿದರು.

ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನಿಂಗಪ್ಪ ಜಕ್ಕಣ್ಣ ಅವರು ರಿಕ್ಷಾ ಚಾಲಕರಿಗೆ ಸಂಬಂಧಿಸಿದ ಸಂಚಾರ ನಿಯಮಗಳು, ಮೋಟಾರು ವಾಹನ ಕಾಯ್ದೆಯ ಪ್ರಮುಖ ಅಂಶಗಳು, ರಸ್ತೆ ಸುರಕ್ಷತೆ, ಸರ್ಕಾರಿ ಸೌಲಭ್ಯಗಳು ಹಾಗೂ ಕಾನೂನು ಅರಿವಿನ ಮಹತ್ವದ ಕುರಿತು ಮಾಹಿತಿ ನೀಡಿ ಸದಸ್ಯರಿಗೆ ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ರಿಕ್ಷಾ ಯೂನಿಯನ್‌ನ ಕ್ಷೇಮನಿಧಿಯಿಂದ ನಿಧನರಾದ ನಾರಾವಿಯ ರಿಕ್ಷಾ ಚಾಲಕರಾದ ದಿ. ರವಿ ಸಾಲ್ಯಾನ್ ಅವರ ಪತ್ನಿಗೆ ಕ್ಷೇಮನಿಧಿಯ ಚೆಕ್ ಅನ್ನು ಹಸ್ತಾಂತರಿಸಲಾಯಿತು.

ಕಾರ್ಯಕ್ರಮದಲ್ಲಿ ವೇಣೂರು ಗ್ರಾಮ ಪಂಚಾಯತ್‌ನ ನಿಕಟಪೂರ್ವ ಅಧ್ಯಕ್ಷ ನೇಮಯ್ಯ ಕುಲಾಲ್, ಬೆಳ್ತಂಗಡಿ ತಾಲೂಕು ರಿಕ್ಷಾ ಯೂನಿಯನ್ ಕಾರ್ಯದರ್ಶಿ ಶ್ರೀಮತಿ ಶಾಂತಿ ಮಾರ್ಟಿನ್, ಕೋಶಾಧಿಕಾರಿ ಪ್ರಶಾಂತ್ ಹಾಗೂ ವೇಣೂರು ಪೊಲೀಸ್ ಠಾಣೆಯ ಎಎಸ್‌ಐ ನಾಗರಾಜ್ ಸೇರಿದಂತೆ ಹಲವು ಗಣ್ಯರು ಹಾಗೂ ಭಾರತೀಯ ಮಜ್ದೂರ್ ಸಂಘದ ವಿವಿಧ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ವೇಣೂರು ವಲಯದ ಸ್ಥಾಪಕ ಅಧ್ಯಕ್ಷ ಸತೀಶ್ ಹೆಗ್ಡೆ ನಿರೂಪಿಸಿದರು.
ಸಭೆಯಲ್ಲಿ ರಿಕ್ಷಾ ಚಾಲಕ-ಮಾಲಕರು, ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಸಂಘಟನೆಯನ್ನು ಇನ್ನಷ್ಟು ಬಲಿಷ್ಠಗೊಳಿಸುವ ಸಂಕಲ್ಪದೊಂದಿಗೆ 71ನೇ ಸ್ಥಾಪನಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದರು.

Related posts

ಚೆನ್ನೆಮಣೆ ಗೊಬ್ಬು ಪಂಥೊ ಮತ್ತು ಸಂಧಿ ಪಾರ್ದನ ಸುಗಿಪ್ಪು ಪಂಥೊದ ಸಮಾರೋಪ ಸಮಾರಂಭ

Suddi Udaya

ಮೇ 27: ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ‘ಜನರ ಬಳಿಗೆ – ತಾಲೂಕು ಆಡಳಿತ’ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ

Suddi Udaya

ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ, ಕಣ್ಣಿನ ತಪಾಸಣೆ ಹಾಗೂ ಉಚಿತ ಮಹಿಳೆಯರ ಕ್ಯಾನ್ಸರ್ ತಪಾಸಣಾ ಶಿಬಿರ

Suddi Udaya

ಕರ್ನಾಟಕ ರಾಜ್ಯ ಮಟ್ಟದ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್: ಬಂದಾರುವಿನ ತೇಜಸ್ವಿನಿ ಪೂಜಾರಿ ರವರಿಗೆ ಎರಡು ಚಿನ್ನದ ಪದಕ

Suddi Udaya

ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಸಂದೇಶ್ ಪೂಜಾರಿ ಕೈರೋಡಿ

Suddi Udaya

ಬಜೆಟ್ ನಲ್ಲಿ ನಕ್ಸಲ್ ಪೀಡಿತ ಪ್ರದೇಶಗಳ ಅಭಿವೃದ್ಧಿಗಾಗಿ 10 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ:ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ : ಶೇಖರ್ ಲಾಯಿಲ

Suddi Udaya
error: Content is protected !!