24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಾಳೆ (ಜು.23) ದ.ಕ.ಜಿಲ್ಲಾ ಶಾಲಾ-ಕಾಲೇಜುಗಳಿಗೆ ರಜೆ

ಮಂಗಳೂರು: ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಗುರುವಾರ (ಜು.23) ರಂದು ಜಿಲ್ಲೆಯಾದ್ಯಂತ ಎಲ್ಲಾ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಆದೇಶ ಹೊರಡಿಸಿದ್ದಾರೆ.

ಜಿಲ್ಲಾಧಿಕಾರಿಗಳ ಆದೇಶದಂತೆ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಮತ್ತು ಪದವಿ ಪೂರ್ವ (PU) ಕಾಲೇಜುಗಳಿಗೆ ರಜೆ ಅನ್ವಯವಾಗಲಿದೆ. ಆದೇಶ ಉಲ್ಲಂಘಿಸಿ ತರಗತಿಗಳನ್ನು ನಡೆಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿಯಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.

ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ನದಿ, ಹಳ್ಳ, ಕೊಳ್ಳ ಹಾಗೂ ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ. ಪೋಷಕರು ತಮ್ಮ ಮಕ್ಕಳ ಬಗ್ಗೆ ಹೆಚ್ಚುವರಿ ಜಾಗ್ರತೆ ವಹಿಸುವಂತೆ ಕೋರಲಾಗಿದೆ.

Related posts

ಬದನಾಜೆ ಶಾಲಾ ಅಮೃತಮಹೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ: ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ & ಕಾಸ್ಟ್ಯೂಮ್ ಕಾರ್ನರ್ ಶುಭಾರಂಭ

Suddi Udaya

ಕೊಕ್ಕಡ: ಕಾರು ಹಾಗೂ ಬೈಕ್ ಮಧ್ಯೆ ಅಪಘಾತ: ಬೈಕ್ ಸವಾರ ತಾ. ಪಂ. ಮಾಜಿ ಸದಸ್ಯ ಲಕ್ಷ್ಮೀನಾರಾಯಣ ಟಿ.ಎಮ್ ರಿಗೆ ತೀವ್ರ ಗಾಯ

Suddi Udaya

ಸುಲ್ಕೇರಿ: ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಘಟಕದ ಪದಾಧಿಕಾರಿಗಳ ಸಭೆ

Suddi Udaya

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಶೋಧನಾ ವಿಧಿ ವಿಧಾನಗಳ ಬಗ್ಗೆ ಕಾರ್ಯಾಗಾರ

Suddi Udaya
error: Content is protected !!