September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿ ಚಾರ್ಜ್ ಖಂಡಿಸಿ: ಬೆಳ್ತಂಗಡಿ ಯುವ ಕಾಂಗ್ರೆಸ್ ವತಿಯಿಂದ ರಸ್ತೆ ತಡೆ ಪ್ರತಿಭಟನೆ

ಬೆಳ್ತಂಗಡಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಯಲ್ಲಿ ನಡೆದ ಲಾಠಿ ಚಾರ್ಜ್ ಹಾಗೂ ರಾಹುಲ್ ಗಾಂಧಿಯವರ ಬಂಧನದ ವಿರುದ್ಧ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಜು.23ರಂದು ಬೆಳ್ತಂಗಡಿ ಮೂರು ಮಾರ್ಗದ ಬಳಿ ರಸ್ತೆ ತಡೆ ಪ್ರತಿಭಟನೆ ನಡೆಯಿತು.

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ ಅವರು “NEET ಪ್ರಶ್ನೆ ಪತ್ರಿಕೆ ಸೋರಿಕೆ ಕೃತ್ಯವು ಅಕ್ಷಮ್ಯ ಅಪರಾಧವಾಗಿದೆ. ದೆಹಲಿಯಲ್ಲಿ ನ್ಯಾಯ ಕೇಳಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಆರ್ ಎಸ್ ಎಸ್ ಗೂಂಡಾಗಳ ಮೂಲಕ ಹಲ್ಲೆಯನ್ನು ನಡೆಸಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ’ಯವರು ತಕ್ಷಣ ರಾಜೀನಾಮೆ ನೀಡಬೇಕು. ಮುಂದಿನ ದಿನಗಳಲ್ಲಿ ಹಳ್ಳಿಯಿಂದ ದಿಲ್ಲಿಯವರೆಗೆ ಆಂದೋಲನ ನಡೆಸಲಿದ್ದೇವೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್, ಕೆಪಿಸಿಸಿ ವಕ್ತಾರ ಅಮೃತ್‌ ಶೆಣೈ, ನಮಿತಾ, ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆ, ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಂ ಕೊಕ್ಕಡ, ಮಾಲಾಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಪುನೀತ್ ಕುಮಾರ್, ಪ್ರಚಾರ ಸಮಿತಿ ಆಶ್ರಪ್ ನೆರಿಯ, ಝೀನತ್, ಸಂತೋಷ್ ಕುಮಾರ್, ಪ್ರಜ್ವಲ್ ಜೈನ್ ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್ ಡಿ ಎಂ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 554 ನೇ ಸಹಾಯಧನ ವಿತರಣೆ

Suddi Udaya

ಬೆಳ್ತಂಗಡಿ ಆದಿ ದ್ರಾವಿಡ ಸಮಾಜ ಸೇವಾ ಸಂಘದ ಸಾಮಾನ್ಯ ಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಓಡಿಲ್ನಾಳ : ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ರಾಷ್ಟ್ರಮಟ್ಟದ ಉರ್ದು ಭಾಷಣ ಸ್ಪರ್ಧೆ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ ಹಳೆ ವಿದ್ಯಾರ್ಥಿ ಸೈಯ್ಯದ್ ಮಹಮ್ಮದ್ ಉವೈಸ್ ಪ್ರಥಮ ಸ್ಥಾನ

Suddi Udaya

ಟಿಪ್ಪ‌ರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು

Suddi Udaya
error: Content is protected !!