September 6, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿವರದಿ

ನೀಟ್ ಪ್ರಶ್ನಾ ಪತ್ರಿಕೆ ಸೋರಿಕೆ: ವಿದ್ಯಾರ್ಥಿಗಳ ಹೋರಾಟವನ್ನು ಹತ್ತಿಕ್ಕುವುದು ಖಂಡನೀಯ -ಕೆ.ಎಂ. ನಾಗೇಶ್ ಕುಮಾರ್ ಗೌಡ

ಬೆಳ್ತಂಗಡಿ: ನೀಟ್ ಪ್ರಶ್ನಾ ಪತ್ರಿಕೆ ಸೋರಿಕೆ ವಿರುದ್ಧ ನಡೆಯುತ್ತಿರುವ ವಿದ್ಯಾರ್ಥಿಗಳ ಹೋರಾಟವನ್ನು ಹತ್ತಿಕ್ಕುವ ಕೆಲಸ ದೇಶದಲ್ಲಿ ನಡೆಯುತ್ತಿದೆ. ಕಾನೂನು ಬದ್ಧವಾಗಿ ನಡೆಯುತ್ತಿರುವ ಹೋರಾಟದಲ್ಲಿ ಆರ್ ಎಸ್ ಎಸ್ ಗೂಂಡಾಗಳನ್ನು ಇಟ್ಟುಕೊಂಡುವಿದ್ಯಾರ್ಥಿಗಳ ಮೇಲೆ ಗುಂಡಿನ ದಾಳಿ, ಲಾಠಿ ಚಾರ್ಜ್ ಮಾಡುತ್ತಿರುವುದು ಪ್ರಜಾಪ್ರಭುತ್ವದ ಹಕ್ಕಿನ ದಮನ.

ಈ ಹಿಂದೆ ಜಂತರ್ ಮಂತರ್ ನಲ್ಲಿ ಕೃಷಿ ನೀತಿ ವಿರೋಧಿಸಿ ರೈತರು ನಡೆಸಿದ ಹೋರಾಟದಲ್ಲಿ ಬಿಜೆಪಿ ಗೂಂಡಾಗಳು ರೈತರ ಮೇಲೆ ವಾಹನಗಳನ್ನು ಹರಿಸಿ ಅವರ ಸಾವುಗಳನ್ನು ನೋಡಿ ಬಳಿಕ ಪ್ರಧಾನಿ ಕ್ಷಮೆ ಯಾಚಿಸಿ ಕೃಷಿ ನೀತಿಯನ್ನು ಹಿಂಪಡೆದಿದ್ದರು. ಇದೇ ರೀತಿಯಲ್ಲಿ ದೇಶದಲ್ಲಿ ವಿದ್ಯಾರ್ಥಿಗಳ ಮಾರಣಹೋಮ ನಡೆಯುತ್ತಿದೆ. ಎಲ್ಲಾ ಕಾನೂನು ವ್ಯವಸ್ಥೆಯನ್ನು ತನ್ನ ಕಪಿಮುಷ್ಟಿಯಲ್ಲಿ ಹಿಡಿದು ನಿರಂತರವಾಗಿ ನೀಟ್ ಪ್ರಶ್ನಾ ಪತ್ರಿಕೆ ಸೋರಿಕೆ ಮಾಡುತ್ತಾ ದಮನಕಾರಿ ನೀತಿ ಮುಂದುವರಿಸುತ್ತಿದ್ದಾರೆ ಹಾಗಾಗಿ ದೇಶ ರಕ್ಷಣೆ ನಾವೆಲ್ಲರೂ ಎಚ್ಚೆತ್ತುಕೊಳ್ಳಬೇಕು ಎಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಕೆ.ಎಂ. ನಾಗೇಶ್ ಕುಮಾರ್ ಗೌಡ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಮಚ್ಚಿನ : ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ

Suddi Udaya

ಬೋಳಿಯರ್ ರಸ್ತೆ ಬದಿಯಲ್ಲಿ ಮತ್ತೆ ಪ್ರತ್ಯಕ್ಷವಾದ ಕಾಡಾನೆ

Suddi Udaya

ಕೊಯ್ಯೂರು: ಬಜಿಲ ಶ್ರೀ ವಿಷ್ಣುಮೂರ್ತಿ ಪುರುಷರ ಬಳಗದಿಂದ ಪುರುಷ ಪೂಜೆ, ಸನ್ಮಾನ

Suddi Udaya

ಕಳೆದ ಎರಡೂವರೆ ದಶಕಗಳಿಂದ ಅಮೂಲ್ಯ ಸೇವೆ ಸಲ್ಲಿಸಿದ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್. ಎಚ್. ಮಂಜುನಾಥ್ ರವರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವತಿಯಿಂದ ಹರೀಶ್ ಮೂಲ್ಯ ರವರಿಗೆ ಆರ್ಥಿಕ ಧನಸಹಾಯ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ರಾಷ್ಟ್ರೀಯ ಯುವ ದಿನಾಚರಣೆ

Suddi Udaya
error: Content is protected !!