September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: “ಗೃಹಜ್ಯೋತಿ ಹೆಚ್ಚುವರಿ ಮಾಹಿತಿ ಸಂಗ್ರಹಣೆಯ” ಪ್ರಗತಿ ಸಭೆ

ಬೆಳ್ತಂಗಡಿ: ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯ ಮಹತ್ವಕಾಂಕ್ಷಿ ಯೋಜನೆಯಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ “ಗೃಹಜ್ಯೋತಿ ಹೆಚ್ಚುವರಿ ಮಾಹಿತಿ ಸಂಗ್ರಹಣೆ” ಪ್ರಗತಿ ಸಭೆಯನ್ನು ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆಯು ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್‌ ರವರ ಅಧ್ಯಕ್ಷತೆಯಲ್ಲಿ, ಸದಸ್ಯ ಕಾರ್ಯದರ್ಶಿ, ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್‌ ಎನ್. ಹಾಗೂ ಮೆಸ್ಕಾಂ ಬೆಳ್ತಂಗಡಿ ಹಾಗೂ ಉಜಿರೆ ಉಪವಿಭಾಗದ ಎಲ್ಲಾ ಅಧಿಕಾರಿಗಳ ಉಪಸ್ಥಿತಿಯಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತಿಯ ಗ್ಯಾರಂಟಿ ಅನುಷ್ಟಾನ ಸಮಿತಿ ಕಛೇರಿಯಲ್ಲಿ ನಡೆಯಿತು.

ಗೃಹಜ್ಯೋತಿ ಯೋಜನೆಯಡಿ ಉಜಿರೆ ಮತ್ತು ಬೆಳ್ತಂಗಡಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಗತಿ ನೀಡುತ್ತಾ ಉಜಿರೆ ಉಪವಿಭಾಗದ ಒಟ್ಟು 25581 ಫಲಾನುಭವಿಗಳಲ್ಲಿ 17169 ಫಲಾನುಭವಿಗಳ ಮಾಹಿತಿ ಸಂಗ್ರಹಿಸಲಾಗಿ ಶೇಕಡಾ 67.12% ಪ್ರಗತಿ ಸಾಧಿಸಲಾಗಿದೆ. ಬೆಳ್ತಂಗಡಿ ಉಪವಿಭಾಗದ ಒಟ್ಟು 47477 ಫಲಾನುಭವಿಗಳಲ್ಲಿ 22881 ಫಲಾನುಭವಿಗಳ ಮಾಹಿತಿ ಸಂಗ್ರಹಿಸಿ ಶೇಕಡಾ 48.19% ಪ್ರಗತಿ ಸಾಧಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಎಲ್ಲಾ ಉಪವಿಭಾಗದ ಪವರ್‌ಮ್ಯಾನ್ ಗಳು ಮನೆಮನೆಗೆ ತೆರಳಿ ಮಾಹಿತಿ ಸಂಗ್ರಹಿಸುತ್ತಿರುವ ಕಾರ್ಯವು ಪ್ರಗತಿಯಲ್ಲಿದ್ದು, ಆಗಸ್ಟ್‌ 2026ರೊಳಗೆ ಸರಕಾರವು ನೀಡಿದ ಗಡುವಿನ ಮೊದಲು ತಾಲೂಕಿನಲ್ಲಿ ಶೇಕಡಾ 100% ಪ್ರಗತಿಯನ್ನು ಸಾಧಿಸಲು ಕ್ರಮ ವಹಿಸಲು ಸಲಹೆ ನೀಡಿದರು.

ಬೆಳ್ತಂಗಡಿ ತಾಲೂಕಿನ ಎಲ್ಲಾ ಮೆಸ್ಕಾಂ ಸಿಬ್ಬಂದಿಗಳಿಗೆ ಅಭಿನಂದನೆಯನ್ನು ಸಲ್ಲಿಸುತ್ತಾ, ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ ಹಲವಾರು ಕಡೆಗಳಲ್ಲಿ ಮೊಬೈಲ್‌ ನೆಟ್‌ವರ್ಕ್ ಇಲ್ಲದೇ ಇರುವುದರಿಂದ ಸಂಬಂಧಪಟ್ಟ ಗ್ರಾಮ ಪಂಚಾಯತ್‌ಗಳಲ್ಲಿ ಹೆಚ್ಚುವರಿ ಮಾಹಿತಿ ಸಂಗ್ರಹಿಸುವ ಕಾರ್ಯವನ್ನು ಹಮ್ಮಿಕೊಳ್ಳಲು ಮಾನ್ಯ ಅಧ್ಯಕ್ಷರು ಹಾಗೂ ಪಂಚಗ್ಯಾರಂಟಿ ಸದಸ್ಯರು ಸಭೆಯಲ್ಲಿ ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. ಈ ಬಗ್ಗೆ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೆ ಸೂಚಿಸುವುದೆಂದು ಕಾರ್ಯನಿರ್ವಹಣಾಧಿಕಾರಿಯರು ಸಭೆಗೆ ತಿಳಿಸಿದರು. ಮಳೆಗಾಲದ ಪೂರ್ವ ತಯಾರಿಯಲ್ಲಿ ವಿದ್ಯುತ್‌ ಕಂಬಗಳಿಗೆ ತಗುಲಿರುವ ಮರದ ಕೊಂಬೆಗಳನ್ನು ಶೀಘ್ರ ತೆರವುಗೊಳಿಸುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಲಾಯಿತು.

ಸಭೆಯಲ್ಲಿ ಬೆಳ್ತಂಗಡಿ ತಾಲೂಕಿನ ಉಜಿರೆ ಮತ್ತು ಬೆಳ್ತಂಗಡಿ ಉಪ ವಿಭಾಗದ ಎಲ್ಲಾ ಕಿರಿಯ ಇಂಜಿನಿಯರ್‌ಗಳು, ಪಂಚ ಗ್ಯಾರಂಟಿ ಯೋಜನೆಗಳ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಜೋಕಿಂ ಡಿ ಸೋಜಾ, ತಾಲೂಕು ಅನುಷ್ಟಾನ ಸಮಿತಿಯ ಸದಸ್ಯರಾದ ಶ್ರೀಮತಿ ವಂದನಾ ಕುಮಾರಿ, ಶ್ರೀಮತಿ ಸೌಮ್ಯ ಲಾಯಿಲ, ಶ್ರೀಮತಿ ಮೆರಿಟಾ ಪಿಂಟೋ, ವೀರಪ್ಪ ಮೊಯ್ಲಿ, ವಿಜಯ ಗೌಡ ಬೆಳಾಲು, ಶರೀಫ್‌ ಶಬರಬೈಲ್‌, ಕೆ.ನೇಮಿರಾಜ್‌ ಕಿಲ್ಲೂರು, ಸತೀಶ ಹೆಗ್ಡೆ, ಯತೀಶ, ಕೇಶವ ನಾಯ್ಕ, ಅಬ್ದುಲ್‌ ಸಲಾಂ ಹಾಗೂ ನೋಡೆಲ್‌ ಅಧಿಕಾರಿಯಾದ ಹೆರಾಲ್ಡ್‌ ಸ್ವಿಕ್ವೇರಾ ಉಪಸ್ಥಿತರಿದ್ದರು.

Related posts

ಎಸ್‌ಡಿಎಂ ತಾಂತ್ರಿಕ ವಿದ್ಯಾಸಂಸ್ಥೆ ಗ್ರಂಥಪಾಲಕರಿಗಾಗಿ ವೃತ್ತಿಪರ ಶಿಕ್ಷಣ ಕಾರ್ಯಾಗಾರ : ಪುಸ್ತಕ ಪ್ರದರ್ಶನ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya

ಕೊಯ್ಯೂರು ಸರಕಾರಿ ಪದವಿಪೂರ್ವ ಕಾಲೇಜು ಅಭಿವೃದ್ಧಿ ಬಗ್ಗೆ ಸಮಾಲೋಚನೆ ಸಭೆ

Suddi Udaya

ವಿಶ್ವವಿದ್ಯಾಲಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಪ್ರಶಸ್ತಿ ಪ್ರದಾನ – ಸಮಾರೋಪ ಸಮಾರಂಭ

Suddi Udaya

ಹ್ಯಾಂಡ್‌ಬಾಲ್ ಪಂದ್ಯಾಟ : ಸಂತ ತೆರೇಸಾ ಪ್ರೌಢಶಾಲೆಯ ನಾಲ್ಕು ತಂಡಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಪುಂಜಾಲಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಕಾರ್ಯಾಲಯ ಉದ್ಘಾಟನೆ

Suddi Udaya
error: Content is protected !!