September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜು. 27, 28: ಗೃಹಜ್ಯೋತಿ ಫಲಾನುಭವಿಗಳ ಹೆಚ್ಚುವರಿ ಮಾಹಿತಿ ಸಂಗ್ರಹಣೆ: ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್ ಲಾಯಿಲ

ಬೆಳ್ತಂಗಡಿ: ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯ ಮಹತ್ವಕಾಂಕ್ಷಿ ಯೋಜನೆಯಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ “ಗೃಹಜ್ಯೋತಿ ಫಲಾನುಭವಿಗಳ ಹೆಚ್ಚುವರಿ ಮಾಹಿತಿ ಸಂಗ್ರಹಣೆ” ಕಾರ್ಯವು ಮನೆ ಮನೆಗೆ ಭೇಟಿ ನೀಡುವುದರ ಮೂಲಕ ನಡೆಯುತ್ತಿದ್ದು, ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ ಹಲವಾರು ಕಡೆಗಳಲ್ಲಿ ಮೊಬೈಲ್ ನೆಟ್‌ವರ್ಕ್ ಇಲ್ಲದೇ, ಸಮಸ್ಯೆಯಾಗಿರುತ್ತದೆ. ಈ ಹಿನ್ನಲೆಯಲ್ಲಿ ಗ್ರಾಮ ಪಂಚಾಯತ್‌ಗಳಲ್ಲಿ ಹೆಚ್ಚುವರಿ ಮಾಹಿತಿ ಸಂಗ್ರಹಿಸುವ ಕಾರ್ಯವನ್ನು ಹಮ್ಮಿಕೊಳ್ಳಲು ಜು.23ರಂದು ಬೆಳ್ತಂಗಡಿ ತಾಲೂಕಿನ ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ಅವರ ಅಧ್ಯಕ್ಷತೆಯಲ್ಲಿ ನಡೆದ ತಾಲೂಕು ಪಂಚಗ್ಯಾರಂಟಿ ಸಮಿತಿ ಸಭೆಯಲ್ಲಿ ನಿರ್ಣಯಿಸಲಾಗಿರುತ್ತದೆ.

ಅದರಂತೆ ಜುಲೈ 27 ಹಾಗೂ 28 ರಂದು ನಿಗದಿಪಡಿಸಿದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ “ಗೃಹಜ್ಯೋತಿ ಫಲಾನುಭವಿಗಳ ಹೆಚ್ಚುವರಿ ಮಾಹಿತಿ ಸಂಗ್ರಹಣೆ” ಕಾರ್ಯವು ಜರುಗಲಿದೆ.

ಸಂಬಂಧಪಟ್ಟ ಗ್ರಾಮ ಪಂಚಾಯತ್‌ಗಳು, ಮೆಸ್ಕಾಂ ಇಲಾಖೆಗೆ ಪೂರ್ಣ ಸಹಕಾರದೊಂದಿಗೆ ಜು. 27 ಲಾಯಿಲ, ಬಂದಾರು, ಪಡಂಗಡಿ, ಕಾಶಿಪಟ್ಣ, ಬಳಂಜ, ಪುದುವೆಟ್ಟು, ಕೊಕ್ಕಡ, ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಮತ್ತು

ಜು.28- ಅಂಡಿಂಜೆ, ಮರೋಡಿ,ಕಣಿಯೂರು,ಕಳಿಯ, ಮಡಂತ್ಯಾರು, ನಿಡ್ಲೆ,ಅರಸಿನಮಕ್ಕಿ, ಮಲವಂತಿಗೆ, ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 5 ಗಂಟೆಯ ವರಗೆ ನಡೆಯಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ್ ಕುಮಾರ್ ಲಾಯಿಲ ತಿಳಿಸಿರುತ್ತಾರೆ.

Related posts

ದ.ಕ ಟೆಲಿಕಾಂ ಸಲಹಾ ಸಮಿತಿ ಸದಸ್ಯರಾಗಿ ಕೊರಗಪ್ಪ ನಾಯ್ಕ ಮುಂಡಾಜೆ ನೇಮಕ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ, ದುರ್ಗಾಪೂಜೆ

Suddi Udaya

ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂದಿರದ ಹರಿ ಓಂ ಬಾಲ ಸಂಸ್ಕಾರ ಕೇಂದ್ರದ ಮಕ್ಕಳಿಗೆ ಬ್ಯಾಗ್, ಕೊಡೆ ಹಾಗೂ ಪುಸ್ತಕ ವಿತರಣೆ

Suddi Udaya

ಬಿಜೆಪಿ ಬಡಗಕಾರಂದೂರು ಬೂತ್ ಸಂಖ್ಯೆ 40 ರ ಅಧ್ಯಕ್ಷರಾಗಿ ಶ್ರೇಯಸ್ ಶೆಟ್ಟಿ, ಕಾರ್ಯದರ್ಶಿಯಾಗಿ ಓಂಕಾರ್ ಜೈನ್ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ 3 ರ್‍ಯಾಂಕ್‌ಗಳು

Suddi Udaya

ಮಚ್ಚಿನ ಹಾಗೂ ಕೊರಂಜ ಶಾಲೆ ಕರ್ನಾಟಕ ಪಬ್ಲಿಕ್ ಸ್ಕೂಲ್ಆಗಿ ಮೇಲ್ದರ್ಜೆಗೆ  : ಶಾಸಕ ಹರೀಶ್ ಪೂಂಜ

Suddi Udaya
error: Content is protected !!