September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪರಿಶಿಷ್ಟ ಜಾತಿ-ಪಂಗಡಗಳ ವಿಶೇಷ ಗ್ರಾಮಸಭೆ ಬೆನ್ನಲ್ಲೇ ಸ್ಥಳಕ್ಕೆ ಬಂದ ಅಧಿಕಾರಿಗಳು – ನಡುಗುಡ್ಡೆ ಕಾಲುಸಂಕ ಪ್ರದೇಶ ಹಾಗೂ ರಸ್ತೆ ವಂಚಿತ ಬಜಕ್ರೆಸಾಲು ಪ್ರದೇಶದಲ್ಲಿ ಸಮಸ್ಯೆಗಳ ಪರಿಶೀಲನೆ


ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಬುಧವಾರ ನಡೆದ ಪರಿಶಿಷ್ಟ ಜಾತಿ/ ಪಂಗಡಗಳ ವಿಶೇಷ ಗ್ರಾಮಸಭೆಯಲ್ಲಿ ಲಾಯಿಲ ಗ್ರಾಮದ ಬರೆಮೇಲು ನಡುಗುಡ್ಡೆ ಪ್ರದೇಶದ ಕಾಲುಸಂಕದ ವಿಚಾರ ವ್ಯಾಪಕ ಚರ್ಚೆ ಕಾರಣವಾಗಿತ್ತು. ಬಜಕ್ರೆಸಾಲು ಪ್ರದೇಶದ 8-10 ಪರಿಶಿಷ್ಟ ಜಾತಿ ಕುಟುಂಬಗಳು ರಸ್ತೆ ವಂಚಿತಗೊಂಡಿರುವ ಬಗ್ಗೆಯೂ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಜು.24ರಂದು ಈ ಪ್ರದೇಶಕ್ಕೆ ಅಧಿಕಾರಿಗಳು ಆ ಪ್ರದೇಶಕ್ಕೆ ಭೇಟಿ ನೀಡಿದರು.

ಗ್ರಾಮಸಭೆಯಲ್ಲಿ ಗ್ರಾಮಸ್ಥ ಶೇಖರ್ ಲಾಯಿಲ ಕಾಲುಸಂಕದಲ್ಲಿ ಶಾಲಾ ಮಕ್ಕಳು ನಡೆದಾಡುವ ಪೋಟೋ, ಹಾಗೂ ಮೂರು ವರ್ಷಗಳ ಹಿಂದೆ ಆಯಿಲ ಹೋಗುವ ರಸ್ತೆ ಬದಿಯ ಧರೆ ಕುಸಿತವಾಗಿದ್ದು ಇವುಗಳ ಪೋಟೊಗಳನ್ನು ಅಧಿಕಾರಗಳ ಮುಂದೆ ಪ್ರದರ್ಶಿಸಿದಲ್ಲದೆ, ಬಜಕ್ರೆಸಾಲು ರಸ್ತೆ ವಂಚಿತ ದಲಿತ ಕುಟುಂಬಗಳ ವಿಷಯ ಪ್ರಸ್ತಾಪಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಕವಿ ಸಿದ್ದಲಿಂಗಯ್ಯ ರವರ ಯಾರಿಗೆ ಬಂತು, ಎಲ್ಲಿಗೆ ಬಂತು ನಲ್ವತ್ತೇಳರ ಸ್ವಾತಂತ್ರ್ಯ ಎಂಬ ಹಾಡನ್ನು ಹಾಡಿ ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 79 ವರ್ಷಗಳಾದರೂ ಇನ್ನೂ ದಲಿತ, ಆದಿವಾಸಿ ಸಮುದಾಯದ ಅಭಿವೃದ್ಧಿಯಾಗಿಲ್ಲ ಎಂದರೆ ದಲಿತ, ಆದಿವಾಸಿಗಳಿಗೆ ಇನ್ನೂ ಸ್ವಾತಂತ್ರ್ಯ ಲಭಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇಂದು ಬರೆಮೇಲು ನಡುಗುಡ್ಡೆ ಪ್ರದೇಶ ಹಾಗೂ ಬಜಕ್ರೆಸಾಲು ದಲಿತ ಕಾಲನಿಗೆ ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಉಪ ವಿಭಾಗದ ಇಂಜಿನಿಯರ್ ಸಂದೀಪ್ ಶೆಟ್ಟಿ ಮಂದರ್ಸ, ಸಮಾಜ ಕಲ್ಯಾಣ ಇಲಾಖೆಯ ಧೀರಾಜ್ ಕುಮಾರ್, ಲಾಯಿಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ತಾರಾನಾಥ ನಾಯ್ಕ್, ಸಹಾಯಕ ಲೆಕ್ಕಾಧಿಕಾರಿ ಸುಪ್ರೀತಾ ಶೆಟ್ಟಿ, ಗ್ರಾಮ ಪಂಚಾಯತ್ ಮಾಜಿ ಸದಸ್ಯ ಪ್ರಸಾದ್ ಶೆಟ್ಟಿ ಏಣಿಂಜೆ, ಪಂಚಾಯತ್ ಸಿಬ್ಬಂದಿ ಪ್ರದೀಪ್ ಹೋರಾಟಗಾರ ಶೇಖರ್ ಲಾಯಿಲ ಭೇಟಿ ನೀಡಿ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು ಬಜಕ್ರೆಸಾಲು ದಲಿತ ಕಾಲನಿಗೆ ಸರ್ಕಾರಿ ಜಮೀನಿನಲ್ಲಿ ರಸ್ತೆ ನಿರ್ಮಾಣ ಮಾಡಲು ಕಂದಾಯ ಇಲಾಖೆ ಅನುಮತಿ ನೀಡಬೇಕು. ಈ ನಿಟ್ಟಿನಲ್ಲಿ ತಹಶೀಲ್ದಾರರನ್ನು ಭೇಟಿ ನೀಡಿ ಸಮಸ್ಯೆಯನ್ನು ಮನವರಿಕೆ ಮಾಡಲಾಗುವುದು ಎಂದರು. ಬರೆಮೇಲು ನಡುಗುಡ್ಡೆ ಪ್ರದೇಶಕ್ಕೆ ಕಾಲುಸಂಕ ನಿರ್ಮಾಣದ ಬಗ್ಗೆ ಅಂದಾಜುವೆಚ್ಚ, ನೀಲನಕಾಶೆಯ ಜೊತೆಗೆ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಭರವಸೆ ನೀಡಿದರು.

Related posts

ಕೊಯ್ಯೂರು: ದೆoತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಳದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬಳಂಜ: ಮುಂದುವರಿದ ಭಾರಿ ಮಳೆ,ಅಟ್ಲಾಜೆ-ಬದಿನಡೆ,ಪೊಯ್ಯೆಗುಡ್ಡೆ ಮಣ್ಣಿನ ರಸ್ತೆ ಕೆಸರುಮಯ: ಸಾರ್ವಜನಿಕರು ನಡೆಯಲಾಗದ ಪರಿಸ್ಥಿತಿ ನಿರ್ಮಾಣ,ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya

ಕೊಡಗು ವಿ.ವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ ಎನ್ ಜನಾರ್ದನ್ ನೇಮಕ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಆರೋರ 2K26’ ಕಾಮರ್ಸ್ ಫೆಸ್ಟ್

Suddi Udaya

ಮಿತ್ತಬಾಗಿಲು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಪಜಿರಡ್ಕ ಶ್ರೀಸದಾಶಿವೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!