September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ‘ಚಿಗುರು’ ಸಂಘ ಉದ್ಘಾಟನೆ

ಉಜಿರೆ ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ “ಚಿಗುರು ಸಂಘ’ದ ಉದ್ಘಾಟನೆ ಮತ್ತು ನೂತನ ವಿದ್ಯಾರ್ಥಿಗಳ ಪ್ರಶಿಕ್ಷಣ ಕಾರ್ಯಕ್ರಮ ‘ಆರಂಭ್’ ಇತ್ತೀಚೆಗೆ ನಡೆಯಿತು.

‘ಮಂಜುವಾಣಿ’ ಮಾಸ ಪತ್ರಿಕೆಯ ಸಂಪಾದಕರಾದ ಡಾ. ಭಾಸ್ಕರ ಹೆಗಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿಭಾಗದ ಎಲ್ಲಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಪ್ರೇರೇಪಿಸಿದರು. ಅಲ್ಲದೆ, ಮಾಧ್ಯಮ ಕ್ಷೇತ್ರದಲ್ಲಿ ಯಶಸ್ಸು ಗಳಿಸಲು ಬಲವಾದ ವೃತ್ತಿಪರ ಪೋರ್ಟ್‌ಫೋಲಿಯೊ ಬೆಳೆಸಿಕೊಳ್ಳುವುದು ಎಷ್ಟು ಮುಖ್ಯ ಎಂಬುದನ್ನು ವಿವರಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಬರೆದು, ರಾಜ್ಯದ ವಿವಿಧ ಪತ್ರಿಕೆಗಳಲ್ಲಿ ಪ್ರಕಟಗೊಂಡಿದ್ದ ಲೇಖನಗಳ ಸಂಕಲನವನ್ನು ಬಿಡುಗಡೆ ಮಾಡಲಾಯಿತು. ಜೊತೆಗೆ ವಿಭಾಗದ ವೈವಿಧ್ಯಮಯ ಚಟುವಟಿಕೆಗಳನ್ನು ಬಿಂಬಿಸುವ ವಿಶೇಷ ‘ಭಿತ್ತಿ ಪತ್ರಿಕೆ’ಯನ್ನು ಅನಾವರಣಗೊಳಿಸಲಾಯಿತು.

ಕಾರ್ಯಕ್ರಮದಲ್ಲಿ ಡಾ. ಭಾಸ್ಕರ್ ಹೆಗಡೆ ಅವರು ದ್ವಿತೀಯ ಬಿ.ಎ. ಪತ್ರಿಕೋದ್ಯಮ ವಿದ್ಯಾರ್ಥಿನಿ ರಮ್ಯಾ ಅವರಿಗೆ ವೈಯಕ್ತಿಕವಾಗಿ ವಿದ್ಯಾರ್ಥಿವೇತನ ನೀಡಿ, ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಸುನಿಲ್ ಹೆಗ್ಡೆ, ಎಸ್.ಡಿ.ಎಂ ಮಲ್ಟಿಮೀಡಿಯಾ ಸ್ಟುಡಿಯೋದ ಸೀನಿಯರ್ ಪ್ರೊಡಕ್ಷನ್ ಅಸೋಸಿಯೇಟ್ ಸಂಹಿತಾ ಎಸ್. ಮೈಸೂರೆ, ‘ರೇಡಿಯೋ ನಿನಾದ 90.4’ ರ ಮುಖ್ಯಸ್ಥರಾದ ವಿ. ಕೆ. ಕಡಬ, ಕಾರ್ಯಕ್ರಮ ಸಂಯೋಜಕ ಸಂತೋಷ್, ಇ – ಲೆಕ್ಚರ್ ಸಂಯೋಜಕ ಕುಮಾರೇಶ್ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

ಪ್ರಥಮ, ದ್ವಿತೀಯ ಮತ್ತು ತೃತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related posts

ಕಳಿಯ : ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಪೂರ್ವಭಾವಿ ಸಭೆ ಹಾಗೂ ಸಮಿತಿ ರಚನೆ

Suddi Udaya

ಮಾ.18-23: ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಸುರ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಕೊಕ್ಕಡ: ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ಬೆಳ್ತಂಗಡಿ ವಕೀಲರ ಸಂಘ, ಯುವ ವಕೀಲರ ವೇದಿಕೆಯ ವತಿಯಿಂದ ಕ್ರಿಸ್ ಮಸ್ ಆಚರಣೆ

Suddi Udaya

ನಿಡ್ಲೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಉಜಿರೆ; ಲಾರಿ ಬೈಕ್‌ ನಡುವೆ ಅಪಘಾತ; ಬೈಕ್‌ ಸವಾರ ಸಾವು

Suddi Udaya
error: Content is protected !!