September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುತ್ಲೂರು ಶಾಲೆಯಲ್ಲಿ ವನಮಹೋತ್ಸವ: ಕುತ್ಲೂರು ಶಾಲಾ ವಠಾರದಲ್ಲಿ ಹಣ್ಣುಗಳ ಉದ್ಯಾನ: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಭರವಸೆ

ಕುತ್ಲೂರು: ಕುತ್ಲೂರು ಗ್ರಾಮದಲ್ಲಿರುವ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಜು.23ರಂದು ಮೂಡಬಿದ್ರೆ ಉಪವಿಭಾಗದ ಅರಣ್ಯಇಲಾಖೆ ಹಾಗೂ ಶಾಲೆಯ ವನಸಿರಿ ಪರಿಸರ ಸಂಘದ ಆಶ್ರಯದಲ್ಲಿ ಆಯೋಜಿಸಿದ ವನಮಹೋತ್ಸವ ಕಾರ್ಯಕ್ರಮವನ್ನು ಅರಣ್ಯಇಲಾಖೆಯ ಮೂಡಬಿದ್ರೆ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಉದ್ಘಾಟಿಸಿ ಶುಭ ಹಾರೈಸಿದರು.

ಅರಣ್ಯ ಇಲಾಖೆ ವತಿಯಿಂದ ಶಾಲಾ ಆವರಣದಲ್ಲಿ ಹಣ್ಣುಗಳ ಉದ್ಯಾನ ನಿರ್ಮಿಸಿಕೊಡುವುದಾಗಿ ಅವರು ಭರವಸೆ ನೀಡಿದರು.
ಶಾಲಾ ವಠಾರದಲ್ಲಿ ಗಿಡನೆಟ್ಟು ಉತ್ತಮ ರೀತಿಯಲ್ಲಿ ಬೆಳೆಸುವ ಪ್ರತಿ ವಿದ್ಯಾರ್ಥಿಗೆ ತಲಾ ಇನ್ನೂರು ರೂ. ಬಹುಮಾನ, ಶಾಲಾಶಿಕ್ಷಕರೊಬ್ಬರ ಮಾಸಿಕ ವೇತನ ಎಂಟು ಸಾವಿರ ರೂ. ಹಾಗೂ ವಿದ್ಯಾರ್ಥಿಗಳಿಗೆ ನೋಟ್‌ಬುಕ್‌ಗಳನ್ನು ತನ್ನ ವೈಯಕ್ತಿಕ ದೇಣಿಗೆಯಾಗಿ ನೀಡುವುದಾಗಿ ಅವರು ಪ್ರಕಟಿಸಿದರು.

ಪರಿಸರ ಸಂರಕ್ಷಣೆಯಲ್ಲಿ ಸಂಘ-ಸAಸ್ಥೆಗಳ ಪಾತ್ರ ಮಹತ್ವಪೂರ್ಣವಾಗಿದೆ ಎಂದು ಹೇಳಿದ ಅವರು ಶಾಲೆಯ ಪ್ರಗತಿಗೆ ಜಿಲ್ಲಾ ಪತ್ರಕರ್ತರ ಸಂಘದ ಕೊಡುಗೆಯನ್ನು ಶ್ಲಾಘಿಸಿ ಅಭಿನಂದಿಸಿದರು.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಅವರನ್ನು ಶಾಲೆಯ ವತಿಯಿಂದ ಗೌರವಿಸಲಾಯಿತು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್, ಬಿ.ಎನ್. ಮತ್ತು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕನಕವರ್ಮ ಜೈನ್ ಮತ್ತು ಉಪಾಧ್ಯಕ್ಷೆ ಶ್ವೇತಾಜಗದೀಶ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Related posts

ಧರ್ಮಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 344 ಕೋಟಿ ವಾರ್ಷಿಕ ವ್ಯವಹಾರ: 1 ಕೋಟಿ 9 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 12.50 ಡಿವಿಡೆಂಟ್ ಘೋಷಣೆ:

Suddi Udaya

ಎಕ್ಸೆಲ್ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ಅಂತರರಾಷ್ಟ್ರೀಯ ಗಣಿತ ಒಲಿಂಪಿಯಾಡ್‌ನಲ್ಲಿ ಮಹತ್ವದ ಸಾಧನೆ

Suddi Udaya

ಬಾರ್ಯ ಗ್ರಾ.ಪಂ. ಅಧ್ಯಕ್ಷರಾಗಿ ಉಸ್ಮಾನ್, ಉಪಾಧ್ಯಕ್ಷರಾಗಿ ಯಶೋಧ ಶೆಟ್ಟಿ ಆಯ್ಕೆ

Suddi Udaya

ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜಿನಲ್ಲಿ ʼಎಮ್ಯುಲೇಶನ್‌ʼ ಕಾರ್ಯಕ್ರಮ

Suddi Udaya

ಕೊಯ್ಯೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ 75ನೇ ವರ್ಷದ ಅಮೃತ ಮಹೋತ್ಸವದ‌ “ಅಮೃತ ಕೊಯ್ಲು” ಆಮಂತ್ರಣ

Suddi Udaya
error: Content is protected !!