24.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಂಘದ ಸಭೆ

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆ ಹಾಗೂ ಕಾಲೇಜಿನಲ್ಲಿ ಜು.24 ರಂದು ಶಿಕ್ಷಕ-ರಕ್ಷಕ ಸಂಘದ ಸಭೆಯು ನಡೆಯಿತು.

ಸಭೆಯಲ್ಲಿ 2026–27ನೇ ಶೈಕ್ಷಣಿಕ ವರ್ಷದ ಶಿಕ್ಷಕ-ರಕ್ಷಕ ಸಂಘದ ನೂತನ ಸಮಿತಿಯನ್ನು ರಚಿಸಲಾಯಿತು. ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಸೈಲಾಶ್ರೀ, ಉಪಾಧ್ಯಕ್ಷರಾಗಿ ಪ್ರಶಾಂತ್, ಕಾರ್ಯದರ್ಶಿಯಾಗಿ ಶ್ರೀಮತಿ ಪಾವನ, ಜಂಟಿ ಕಾರ್ಯದರ್ಶಿಯಾಗಿ ಪ್ರವೀಣ್ ರನ್ನಾಡಿ ಹಾಗೂ ಸದಸ್ಯರನ್ನು ಆಯ್ಕೆ ಮಾಡಲಾಯಿತು.

2026–27ನೇ ಶೈಕ್ಷಣಿಕ ವರ್ಷದ “ಕುಂಭಶ್ರೀ ವೈಭವ” ಕಾರ್ಯಕ್ರಮದ ಯಶಸ್ವಿ ಆಯೋಜನೆಗಾಗಿ ವಿಶೇಷ ಸಮಿತಿಯನ್ನೂ ರಚಿಸಲಾಯಿತು. ಈ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ಪೂಜಾರಿ, ಉಪಾಧ್ಯಕ್ಷರಾಗಿ ಜನಾರ್ಧನ ಪೂಜಾರಿ, ಕಾರ್ಯದರ್ಶಿಯಾಗಿ ವಸಂತ್ ಪಡೀಲ್ ಹಾಗೂ ಸದಸ್ಯರನ್ನು ನೇಮಕ ಮಾಡಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಶ್ರೀನಿವಾಸ ನಾಯಕ ಅವರು ಮಾತನಾಡಿ, ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ಮತ್ತು ಗುಣಮಟ್ಟದ ಶಿಕ್ಷಣ ದೊರಕುವ ಉದ್ದೇಶದಿಂದ ಕುಂಭಶ್ರೀ ವಿದ್ಯಾಸಂಸ್ಥೆಯನ್ನು ಆಯ್ಕೆ ಮಾಡಿಕೊಂಡಿರುವುದು ಹೆಮ್ಮೆಯ ಸಂಗತಿಯಾಗಿದೆ. ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿ ಹಾಗೂ ಉತ್ತಮ ಶೈಕ್ಷಣಿಕ ಫಲಿತಾಂಶಕ್ಕಾಗಿ ಶಿಕ್ಷಕ ವೃಂದವು ನಿರಂತರವಾಗಿ ಶ್ರಮಿಸುತ್ತಿದೆ ಎಂದು ಹೇಳಿದರು.

2025–26ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷರಾಗಿದ್ದ ವಸಂತ್ ಪಾಟೀಲ್ ಅವರು, ಕುಂಭಶ್ರೀ ವಿದ್ಯಾಸಂಸ್ಥೆಯು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ವಿವಿಧ ಸಹಪಠ್ಯ ಚಟುವಟಿಕೆಗಳು ಹಾಗೂ ಎನ್‌ಸಿಸಿ (NCC) ಸೇರಿದಂತೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಒದಗಿಸುತ್ತಿರುವ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿದೆ ಎಂದು ತಿಳಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಲಾ ಸಂಚಾಲಕರಾದ ಹಾಗೂ ಕುಂಭಶ್ರೀ ವೈಭವ ಸಮಿತಿಯ ಪ್ರಧಾನ ಅಧ್ಯಕ್ಷ ಅಶ್ವಿತ್ ಕುಲಾಲ್ ಅವರು ಮಾತನಾಡಿ, ಪೋಷಕರು ತಮ್ಮ ಮಕ್ಕಳ ಶೈಕ್ಷಣಿಕ ಪ್ರಗತಿಯನ್ನು ನಿರಂತರವಾಗಿ ತಿಳಿದುಕೊಂಡು, ಶಾಲೆಯೊಂದಿಗೆ ಉತ್ತಮ ಸಹಕಾರ ಹೊಂದುವಂತೆ ಕರೆ ನೀಡಿದರು.


ಕಾರ್ಯಕ್ರಮದಲ್ಲಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಮಮತಾ ಶಾಂತಿ, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಶುಭ ನಿತೇಶ್, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಾ ಎಲ್.ಎನ್., ಸಂಸ್ಥೆಯ ಆಡಳಿತ ಅಧಿಕಾರಿ ಮನೋಜ್, ಪೋಷಕರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.


ಕಾರ್ಯಕ್ರಮವನ್ನು ಪ್ರೌಢಶಾಲೆಯ ಕನ್ನಡ ಉಪನ್ಯಾಸಕ ಸುಮನ್ ಹಾಗೂ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀಮತಿ ದಿವ್ಯ ಪೂಜಾರಿ ನಿರೂಪಿಸಿದರು. ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀಮತಿ ಭವಾನಿ ದಿವ್ಯ ಸ್ವಾಗತಿಸಿ, ಪ್ರೌಢಶಾಲಾ ವಿಭಾಗದ ಶಿಕ್ಷಕಿ ಶ್ರೀಮತಿ ಸುಚಿತ್ರ ವಂದಿಸಿದರು.

Related posts

ರೋಟರಿ ಕ್ಲಬ್ ವತಿಯಿಂದ ಬುಹುಮುಖಿ ಸಮಾಜ ಸೇವೆ

Suddi Udaya

ಮಡಂತ್ಯಾರು ನೇಸರ ಸಂಜೀವಿನಿ ಒಕ್ಕೂಟದ ಮಸಾಲಾ ಉತ್ಪನ್ನಗಳ ತರಬೇತಿ ಕಾರ್ಯಾಗಾರ

Suddi Udaya

ಉಜಿರೆ: ಕನ್ನಡ ಸಾಂಸ್ಕೃತಿಕ ಸಂವರ್ಧನೆ ಮತ್ತು ಭಾಷಾಂತರಕಾರರು ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆ ಸರಿಯಲ್ಲ: ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್

Suddi Udaya

ನಾರಾವಿ ವಲಯ ಮಟ್ಟದ ಬಾಲಕ–ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಇಳಂತಿಲ: ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ ಎಸ್ ಎಸ್ ಎಲ್ ಸಿ ವಿಧ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

Suddi Udaya
error: Content is protected !!