25.1 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಂಭ ಶ್ರೀ ಆಂಗ್ಲ ಮಾಧ್ಯಮ ಶಾಲಾ-ಕಾಲೇಜಿನಲ್ಲಿ “ಹದಿಹರೆಯ ಅರಿವಿನ ಪಯಣ” ಮಾಹಿತಿ ಕಾರ್ಯಕ್ರಮ

ವೇಣೂರು: ನಿಟ್ಟಡೆ ಗ್ರಾಮದ ಕುಂಭ ಶ್ರೀ ಆಂಗ್ಲ ಮಾಧ್ಯಮ ಶಾಲಾ-ಕಾಲೇಜಿನಲ್ಲಿ ಜು.22 ರಂದು “ಹದಿಹರೆಯ ಅರಿವಿನ ಪಯಣ” ಕುರಿತು ವಿದ್ಯಾರ್ಥಿಗಳಿಗಾಗಿ ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮಕ್ಕೆ ಎನ್‌ಜಿಒ ಯೋಜನಾ ಸಂಯೋಜಕಿಯರಾದ ಸರಿತಾ ಶಿವಕುಮಾರ್ ಹಾಗೂ ಜಯಶ್ರೀ ಪಡಿ (ಮಂಗಳೂರು) ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ಹದಿಹರೆಯದಲ್ಲಿ ಮಕ್ಕಳಲ್ಲಿ ಉಂಟಾಗುವ ದೈಹಿಕ, ಮಾನಸಿಕ ಹಾಗೂ ಭಾವನಾತ್ಮಕ ಬದಲಾವಣೆಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ಮಕ್ಕಳೊಂದಿಗೆ ಸ್ನೇಹಪೂರ್ವಕವಾಗಿ ವರ್ತಿಸುವುದು, ಅವರ ಸಮಸ್ಯೆಗಳನ್ನು ಆಲಿಸಿ ಸೂಕ್ತ ಮಾರ್ಗದರ್ಶನ ನೀಡುವುದು ಅತ್ಯಂತ ಅಗತ್ಯ ಎಂಬುದನ್ನು ಹೇಳಿದರು.

ಇದಲ್ಲದೆ, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ‘ಗುಡ್ ಟಚ್’ ಮತ್ತು ‘ಬ್ಯಾಡ್ ಟಚ್’ ಕುರಿತು ಅರಿವು ಮೂಡಿಸಿ, ತಮ್ಮ ಸುರಕ್ಷತೆಯ ಬಗ್ಗೆ ಜಾಗೃತರಾಗಿರುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮವು ಮಕ್ಕಳ ಆರೋಗ್ಯಕರ ಬೆಳವಣಿಗೆ, ಸುರಕ್ಷತೆ ಹಾಗೂ ಉತ್ತಮ ವ್ಯಕ್ತಿತ್ವ ನಿರ್ಮಾಣದ ಕುರಿತು ವಿದ್ಯಾರ್ಥಿಗಳು ಮತ್ತು ಶಿಕ್ಷಕರಲ್ಲಿ ಹೆಚ್ಚಿನ ಅರಿವು ಮೂಡಿಸಿತು.

ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕ ಅಶ್ವಿತ್ ಕುಲಾಲ್ ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಮತಾ ಶಾಂತಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶುಭ ನಿತೇಶ್, ಪೂರ್ವಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಾ ಎಲ್.ಎನ್. ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಪ್ರೌಢಶಾಲಾ ಶಿಕ್ಷಕಿ ಕು ಅಲಿಷ ಮರಿಯ ನಿರೂಪಿಸಿದರು .

Related posts

ಬುರುಡೆ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾದ ಪ್ರದೀಪ್ : ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ಎಸ್.ಐ.ಟಿ

Suddi Udaya

ಬಂಗೇರಕಟ್ಟೆಯಿಂದ ಮಡಂತ್ಯಾರಿನವರೆಗೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ತಕ್ಷಣ ಕ್ರಮ ಕೈಗೊಳ್ಳುವಂತೆ ಚಾಲಕರ ಹಾಗೂ ಸಾರ್ವಜನಿಕರ ಆಗ್ರಹ

Suddi Udaya

ಕೊಯ್ಯೂರು ಪ್ರಗತಿಪರ ಕೃಷಿಕ ಬೆಳಿಯಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ತಾಲೂಕು ಮಟ್ಟದ ಗೀತಗಾಯನ ಸ್ಪರ್ಧೆ: ಶ್ರೀ ಧ ಮ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರತಿಭಾ ಉತ್ಸವ

Suddi Udaya

ಬೆಳ್ತಂಗಡಿ ಅತಿಥಿ ಶಿಕ್ಷಕರ ವಿವಿಧ ಬೇಡಿಕೆಗಳು ಹಾಗೂ ಸಮಸ್ಯೆಗಳನ್ನು ಈಡೇರಿಸುವಂತೆ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವರಿಗೆ ಮನವಿ

Suddi Udaya
error: Content is protected !!