25.1 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಟ (NATA) 2026 ಫಲಿತಾಂಶ: ಎಕ್ಸೆಲ್‌ ಪಿಯು ಕಾಲೇಜಿಗೆ ಭರ್ಜರಿ ಯಶಸ್ಸು, ರಾಜ್ಯ ಮಟ್ಟದಲ್ಲಿ ಮಿಂಚಿದ ವಿದ್ಯಾರ್ಥಿಗಳು

ಗುರುವಾಯನಕೆರೆ: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನಡೆಸಿದ ರಾಷ್ಟ್ರೀಯ ಆರ್ಕಿಟೆಕ್ಚರ್ ಅರ್ಹತಾ ಪರೀಕ್ಷೆ (NATA 2026) ಯಲ್ಲಿ ಗುರುವಾಯನಕೆರೆಯ ಎಕ್ಸೆಲ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ.

ಪ್ರಕಟಗೊಂಡ ಫಲಿತಾಂಶದಲ್ಲಿ ಕಾಲೇಜಿನ ಹಲವು ವಿದ್ಯಾರ್ಥಿಗಳು ರಾಜ್ಯ ಮಟ್ಟದ ಅಗ್ರ ಶ್ರೇಣಿಯಲ್ಲಿ ಸ್ಥಾನ ಪಡೆದಿದ್ದಾರೆ. ನಾಟಾ ಪರೀಕ್ಷೆಯಲ್ಲಿ ಎಕ್ಸೆಲ್‌ ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಶ್ರೇಷ್ಠ ಬುದ್ಧಿಮತ್ತೆಯನ್ನು ಪ್ರದರ್ಶಿಸಿದ್ದಾರೆ. ಕಾಲೇಜಿನ ಪ್ರತಿಭಾನ್ವಿತ ವಿದ್ಯಾರ್ಥಿ ಅಭಯ್‌ ಎಂಪಿ ರಾಜ್ಯ ಮಟ್ಟದಲ್ಲಿ 37ನೇ ರ್ಯಾಂಕ್ ಪಡೆದು ಕಾಲೇಜಿಗೆ ಹೆಮ್ಮೆ ತಂದಿದ್ದಾರೆ.

ಮೋನಿಶಾ ಪಿ ಅವರು 68ನೇ ರಾಂಕ್ ಗಳಿಸಿದ್ದಾರೆ .ಉಳಿದಂತೆ ಸಂಸ್ಥೆಯ ವಿದ್ಯಾರ್ಥಿಗಳಾದ ಸುಪ್ರೀತ್‌ ಮಂಜುನಾಥ್‌ ಬಡಿಗೇರ್‌ (128ನೇ ರಾಂಕ್ ), ಮನ್ವಿತಾ ವಿ (129ನೇ ರಾಂಕ್)ರಚಿತ್‌ ಕುಮಾರ್‌ (173ನೇ ರಾಂಕ್)ಅರುಣ್‌ ಗೊಡಚಿ (292ನೇ ರಾಂಕ್)ಹಾಗೂ ಚಿನ್ಮಯಿ ಎಸ್‌ ಆರ್‌ (357ನೇ ರಾಂಕ್)ಪಡೆದು ರಾಜ್ಯ ಮಟ್ಟದ ಟಾಪ್ ರ‍್ಯಾಂಕರ್‌ಗಳ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

ರಾಷ್ಟ್ರೀಯ ಮಟ್ಟದ ಈ ಕಠಿಣ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆಗೈದ ವಿದ್ಯಾರ್ಥಿಗಳನ್ನು ಎಕ್ಸೆಲ್‌ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷ ಸುಮಂತ್‌ ಕುಮಾರ್‌ ಜೈನ್‌ ಶ್ಲಾಘಿಸಿದ್ದಾರೆ. “ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಉಪನ್ಯಾಸಕರ ಸೂಕ್ತ ಮಾರ್ಗದರ್ಶನ ಹಾಗೂ ಸಂಸ್ಥೆಯ ಗುಣಮಟ್ಟದ ಶಿಕ್ಷಣಕ್ಕೆ ಈ ಫಲಿತಾಂಶವೇ ಸಾಕ್ಷಿ. ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳ ಭವಿಷ್ಯದ Architecture ವೃತ್ತಿಜೀವನಕ್ಕೆ ಶುಭವಾಗಲಿ” ಎಂದು ಅವರು ತಮ್ಮ ಅಭಿನಂದನಾ ಸಂದೇಶದಲ್ಲಿ ತಿಳಿಸಿದ್ದಾರೆ. ವಿದ್ಯಾರ್ಥಿಗಳ ಈ ಅದ್ಭುತ ಯಶಸ್ಸಿಗೆ ಕಾಲೇಜಿನ ಪ್ರಾಂಶುಪಾಲರು, ಆಡಳಿತ ಮಂಡಳಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ಪೋಷಕರು ಹರ್ಷ ವ್ಯಕ್ತಪಡಿಸಿ, ಶುಭ ಹಾರೈಸಿದ್ದಾರೆ.

Related posts

ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆ – ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಇದರ ಆಶ್ರಯದಲ್ಲಿ : ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ ಉದ್ಘಾಟನೆ

Suddi Udaya

ಇಂದಬೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ದ್ವಿತೀಯ ಸೋಪಾನ ಹಾಗೂ ದ್ವಿತೀಯ ಚರಣ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ಸಾಮೂಹಿಕ ಯೋಗ ಶಿವ ನಮಸ್ಕಾರ

Suddi Udaya

ಉಜಿರೆ ಭಾರತ್ ಕೋ ಆಪರೇಟಿವ್ ಬ್ಯಾಂಕ್ ಶಾಖೆಯ ಹತ್ತನೇ ವರ್ಷದ ಆಚರಣೆ

Suddi Udaya

ಬೆಳ್ತಂಗಡಿ: ರೈತರು ಫ್ರುಟ್ಸ್ ಐ.ಡಿ. ಮಾಡಿಸಿಕೊಳ್ಳುವಂತೆ ತಹಶೀಲ್ದಾರ್ ಪೃಥ್ವಿ ಸಾನಿಕಂ ಮನವಿ

Suddi Udaya
error: Content is protected !!