24.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಳ್ವಾಸ್ ಪ್ರಗತಿ ಉದ್ಯೋಗ ಮೇಳ ಯಶಸ್ವಿಗೊಳಿಸಲು ಬೆಳ್ತಂಗಡಿಯಲ್ಲಿ ಶ್ರಮಿಕ ಸೇವಾ ಟ್ರಸ್ಟ್ ನಿಂದ ಪೂರ್ವಭಾವಿ ಕಾರ್ಯಾಗಾರ

ಬೆಳ್ತಂಗಡಿ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆ. 7 ಮತ್ತು 8ರಂದು ಮೂಡಬಿದ್ರೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ನಡೆಯಲಿರುವ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳದ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಯುವಜನತೆಗೆ ಮಾಹಿತಿ ನೀಡುವ ಉದ್ದೇಶದಿಂದ ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಪೂರ್ವಭಾವಿ ಸಂದರ್ಶನ ತರಬೇತಿ ಕಾರ್ಯಾಗಾರವು ಜು.25 ರಂದು ಶ್ರೀ ಮಂಜುನಾಥ ಕಲಾಭವನ, ಸಂತೆಕಟ್ಟೆಯಲ್ಲಿ ನಡೆಯಿತು.

ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕ ಹರೀಶ್ ಪೂಂಜ, ರಾಜ್ಯದ ಅತಿದೊಡ್ಡ ಉದ್ಯೋಗ ಮೇಳಗಳಲ್ಲಿ ಒಂದಾದ ಆಳ್ವಾಸ್ ಪ್ರಗತಿಗೆ ಈ ಬಾರಿ ಸುಮಾರು 307ಕ್ಕೂ ಅಧಿಕ ಕಂಪನಿಗಳು ಭಾಗವಹಿಸುತ್ತಿದ್ದು, ಸಾವಿರಾರು ಉದ್ಯೋಗಾವಕಾಶಗಳು ಯುವಜನತೆಗೆ ಲಭ್ಯವಾಗಲಿವೆ ಎಂದರು.

ಉದ್ಯೋಗಕ್ಕೆ ಸೇರಿದ ಕೂಡಲೇ ಹೆಚ್ಚಿನ ಸಂಬಳದ ನಿರೀಕ್ಷೆ ಇಡದೆ, ಮೊದಲ ಎರಡು ವರ್ಷ ಅನುಭವ ಗಳಿಸುವತ್ತ ಗಮನ ಹರಿಸಬೇಕು. ಅನುಭವ ಹಾಗೂ ಕೌಶಲ್ಯ ಹೆಚ್ಚಿದಂತೆ ಉತ್ತಮ ಸಂಬಳ ಮತ್ತು ಉನ್ನತ ಹುದ್ದೆಗಳು ತಾನಾಗಿಯೇ ದೊರೆಯುತ್ತವೆ. ಎಐ ಸವಾಲುಗಳ ನಡುವೆಯೂ ಯುವಕರು ತಮ್ಮ ಕೌಶಲ್ಯವನ್ನು ನಿರಂತರವಾಗಿ ಅಭಿವೃದ್ಧಿಪಡಿಸಿಕೊಳ್ಳಬೇಕು. ಅಕ್ಟೋಬರ್‌ನಿಂದ ತಾಲೂಕಿನ ಪ್ರತಿಯೊಂದು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನ ಎದುರಿಸುವ ಕುರಿತು ಉಚಿತ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಆಳ್ವಾಸ್ ಎಜುಕೇಶನ್ ಟ್ರಸ್ಟ್‌ನ ವ್ಯವಸ್ಥಾಪಕ ನಿರ್ದೇಶಕ ಎಂ. ವಿವೇಕ್ ಆಳ್ವ, ಗ್ರಾಮೀಣ ಭಾಗದ ಪ್ರತಿಭಾವಂತ ಯುವಜನತೆಗೆ ಉದ್ಯೋಗಾವಕಾಶಗಳನ್ನು ತಲುಪಿಸುವ ಮಹತ್ತರ ಉದ್ದೇಶದಿಂದ ‘ಆಳ್ವಾಸ್ ಪ್ರಗತಿ’ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದೆ. ಉದ್ಯೋಗದಾತರು ಮತ್ತು ಉದ್ಯೋಗಾಕಾಂಕ್ಷಿಗಳನ್ನು ಒಂದೇ ವೇದಿಕೆಯಲ್ಲಿ ಸಂಪರ್ಕಿಸುವ ಈ ಮೇಳದಲ್ಲಿ ವಿವಿಧ ಕ್ಷೇತ್ರಗಳ ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು, ಅರ್ಹರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಸಂದರ್ಶನಕ್ಕೆ ಆತ್ಮವಿಶ್ವಾಸ, ಸಂವಹನ ಕೌಶಲ್ಯ ಮತ್ತು ಸೂಕ್ತ ಸಿದ್ಧತೆ ಅತ್ಯಂತ ಮುಖ್ಯವಾಗಿದ್ದು, ಕಾರ್ಯಾಗಾರಗಳ ಮೂಲಕ ಅದಕ್ಕೆ ಅಗತ್ಯ ಮಾರ್ಗದರ್ಶನ ನೀಡಲಾಗುತ್ತಿದೆ ಎಂದು ತಿಳಿಸಿದರು.

ಸಂದರ್ಶನ ತರಬೇತಿ ಕಾರ್ಯಾಗಾರದಲ್ಲಿ ಸುದ್ದಿ ಬಿಡುಗಡೆ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ. ಯು.ಪಿ. ಶಿವಾನಂದ ಉಪಸ್ಥಿತರಿದ್ದರು.ತಾಲೂಕಿನ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ಉಪನ್ಯಾಸಕ ವೃಂದ ಹಾಗೂ ಉದ್ಯೋಗಾಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಬೆಳ್ತಂಗಡಿ ರತ್ನತ್ರಯ ತೀರ್ಥಕ್ಷೇತ್ರದಲ್ಲಿಶ್ರವಣಬೆಳಗೊಳದ ಪೂಜ್ಯ ಚಾರುಕೀರ್ತಿ ಭಟ್ಟಾರಕರ ದಿವ್ಯ ಉಪಸ್ಥಿತಿಯಲ್ಲಿ ಚಂದನ ಷಷ್ಠಿ ನೋಂಪಿ ಉದ್ಯಾಪನೆ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸಹಾಯಧನ ವಿತರಣೆ

Suddi Udaya

ಉಜಿರೆ : ಕಾಲೇಜು ವಿದ್ಯಾರ್ಥಿ ಚಂದ್ರಶೇಖರ್ ಗೌಡ ನಿಧನ

Suddi Udaya

ಮಾಜಿ ಪ್ರಧಾನಿ ಡಾ. ಮನ್ ಮೋಹನ್ ಸಿಂಗ್ ವಿಧಿವಶ

Suddi Udaya

ಮಚ್ಚಿನ ಸ. ಪ್ರೌ. ಶಾಲೆಯಲ್ಲಿ ಪೋಷಕರ ಸಭೆ ಹಾಗೂ ಉಚಿತ ಪುಸ್ತಕ ವಿತರಣೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಆಡಳಿತ ಮಂಡಳಿಯಿಂದ ಪಿಡಿಒ ಹಾಗೂ ಸಿಬ್ಬಂದಿವರ್ಗಕ್ಕೆ ಅಭಿನಂದನೆ

Suddi Udaya
error: Content is protected !!