25.1 C
ಪುತ್ತೂರು, ಬೆಳ್ತಂಗಡಿ
September 9, 2026
ಅಭಿನಂದನೆಗ್ರಾಮಾಂತರ ಸುದ್ದಿಚುನಾವಣೆಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸರ್ಕಾರಿ ಇಲಾಖಾ ಸುದ್ದಿ

ನೂತನ ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ನೇಮಕ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳುನಡೆಸುತ್ತಿದ್ದ ಬೃಹತ್ ಪ್ರತಿಭಟನೆಗೆ ಮಣಿದು ಧರ್ಮೇಂದ್ರ ಪ್ರಧಾನ್ ಅವರು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಶನಿವಾರ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದೌಪದಿ ಮುರ್ಮು ಅವರು ಪ್ರಧಾನ ಮಂತ್ರಿಗಳ ಸಲಹೆಯಂತೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಅಂಗೀಕರಿಸಿದ್ದಾರೆ.

ರಾಜೀನಾಮೆಯ ಬೆನ್ನಲ್ಲೇ, ಪ್ರಸ್ತುತ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ನವೀಕರಿಸಬಹುದಾದ ಇಂಧನ ಸಚಿವರಾಗಿರುವ ಪ್ರಹ್ಲಾದ್ ಜೋಶಿ ಅವರಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆಗಾರಿಕೆಯನ್ನು ವಹಿಸಿ ರಾಷ್ಟ್ರಪತಿಗಳು ಆದೇಶ ಹೊರಡಿಸಿದ್ದಾರೆ.

ಕರ್ನಾಟಕದ ಧಾರವಾಡ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ಪ್ರಹ್ಲಾದ್ ಜೋಶಿ, ಪ್ರಸ್ತುತ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಇಲಾಖೆ ಹಾಗೂ ನೂತನ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದ (MNRE) ಸಚಿವರಾಗಿದ್ದಾರೆ. ಅಲ್ಲದೆ, ಅಂತರರಾಷ್ಟ್ರೀಯ ಸೌರ ಒಕ್ಕೂಟದ ಅಧ್ಯಕ್ಷರೂ ಆಗಿದ್ದಾರೆ.

ಶನಿವಾರ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಧರ್ಮೇಂದ್ರ ಪ್ರಧಾನ್, ವಿದ್ಯಾರ್ಥಿಗಳ ಭವಿಷ್ಯವನ್ನು ಕಾಪಾಡುವ ಉದ್ದೇಶದಿಂದ ಹಾಗೂ ರಾಷ್ಟ್ರವಿರೋಧಿ ಶಕ್ತಿಗಳು ಯುವಕರ ಪ್ರತಿಭಟನೆಯನ್ನು ದುರುಪಯೋಗಪಡಿಸಿಕೊಳ್ಳದಂತೆ ತಡೆಯಲು ಈ ನಿರ್ಧಾರ ಕೈಗೊಂಡಿರುವುದಾಗಿ ಹೇಳಿದ್ದಾರೆ.

Related posts

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಸಿಂಪನ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನ ಹರೀಶ್ ಶೆಟ್ಟಿ ಸಬ್ ಲೆಫ್ಟಿನೆಂಟ್ ರ‍್ಯಾಂಕ್ 

Suddi Udaya

ಉಜಿರೆ: ಎಸ್ ಡಿ ಯಂ ಪಾಲಿಟೆಕ್ನಿಕ್ – ರಾಷ್ಟೀಯ ಯುವ ದಿನದ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

Suddi Udaya

ಶಿಶಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ ಮತ್ತು ದಂತ ತಪಾಸಣಾ ಶಿಬಿರ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!