30.3 C
ಪುತ್ತೂರು, ಬೆಳ್ತಂಗಡಿ
September 9, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಬಾಗಲಕೋಟೆಯಲ್ಲಿ ಐದೂವರೆ ಕೋಟಿ ಮೌಲ್ಯದ ಮಾದಕ ಎಂಡಿಎಂಎ ವಶ ಪ್ರಕರಣ: ಅಂಬುಲೆನ್ಸ್ ಚಾಲಕ ಬೆಳ್ತಂಗಡಿಯ ಜಲೀಲ್ ಬಾಬಾ ವಿರುದ್ದ ಪ್ರಕರಣ ದಾಖಲು

ಬೆಳ್ತಂಗಡಿ: ಬಾಗಲಕೋಟೆಯಲ್ಲಿ ಇತ್ತೀಚೆಗೆ ಪತ್ತೆಯಾದ ಐದೂವರೆ ಕೋಟಿ ರೂ.‌ ಮೌಲ್ಯದ ಮಾದಕ ಎಂಡಿಎಂಎ ವಶಪಡಿಸಿಕೊಂಡ ಪ್ರಕರಣದಲ್ಲಿ ಈಗಾಗಲೇನಾಲ್ವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸದ್ರಿ ಪ್ರಕರಣದಲ್ಲಿ ಬೆಳ್ತಂಗಡಿಯ ಅಂಬುಲೆನ್ಸ್ ಚಾಲಕ ಜಲೀಲ್ ಬಾಬಾ ಅವರ ಹೆಸರೂ ಸೇರ್ಪಡೆಗೊಂಡಿದೆ.

ಮಂಗಳೂರು ನಗರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಮಂಗಳೂರಿನ ಪ್ರಿನ್ಸಿಪಲ್ ಸೆಶನ್ಸ್ ನ್ಯಾಯಾಲಯಕ್ಕೆ ಸಲ್ಲಿಸಿದ ಪ್ರಥಮ ವರ್ತಮಾನದ ಮುಂದಿನ ವರದಿಯಲ್ಲಿ ಮತ್ತೋರ್ವ ಆರೋಪಿಯಾಗಿ ಜಲೀಲ್ ಬಾಬಾ ಎಂಬವನ ಹೆಸರನ್ನು ಉಲ್ಲೇಖಿಸಿದ್ದು, ದಸ್ತಗಿರಿಗೆ ಬಾಕಿ ಎಂದು ವರದಿ ಸಲ್ಲಿಸಿದ್ದಾರೆ.ಈಗಾಗಲೇ ಪ್ರಕರಣದಲ್ಲಿ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಮೊಹಮ್ಮದ್ ಅಲ್ತಾಫ್ (28), ಉಜಿರೆ ಹಳೆಪೇಟೆಯ ಮೊಹಮ್ಮದ್ ಮುಸ್ತಫಾ (28), ಇಂದಬೆಟ್ಟು ಗ್ರಾಮದ ದೇವನಾರಿ ನಿವಾಸಿ ಅಲ್ಫಾಜ್ ಮತ್ತು ಅಣ್ಣಪ್ಪ ಸ್ವಾಮಿ ಅಲಿಯಾಸ್ ಮನು ಎಂಬವರ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ.

ಈ ಪೈಕಿ ಅಣ್ಣಪ್ಪ ಸ್ವಾಮಿ ಎಂಬವನನ್ನು ಆರಂಭದಲ್ಲೇ ಜೈಲಿಗಟ್ಟಲಾಗಿದ್ದು ಉಳಿದ ಆರೋಪಿಗಳ ವಿರುದ್ಧವೂ ಕ್ರಮ ಜರುಗಿಸಲಾಗಿದೆ. ಅದೇ ಪ್ರಕರಣದಲ್ಲಿ ಜಲೀಲ್ ಬಾಬಾ ಬೆಳ್ತಂಗಡಿ ಎಂಬಾತನೂ ಇದೀಗ ಆರೋಪಿ ಎಂದು ದಾಖಲಾಗಿದೆ. ಸಿಸಿಬಿ ಪೊಲೀಸರು ಕುಳಾಯಿಗುಡ್ಡೆ ವಾಟರ್ ಟ್ಯಾಂಕ್ ಸಮೀಪದ ಮನೆಯಲ್ಲಿ ನಡೆಸಿದ ದಾಳಿಯಲ್ಲಿ ಅಣ್ಣಪ್ಪ ಸ್ವಾಮಿ ಅಲಿಯಾಸ್ ಮನು ಎಂಬಾತನಿಂದ ₹1.50 ಲಕ್ಷ ಮೌಲ್ಯದ 15.17 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದರು. ಈ ಪ್ರಕರಣದ ತನಿಖೆ ವೇಳೆ ಮಾದಕ ವಸ್ತು ಪೂರೈಕೆ ಜಾಲದ ಬಗ್ಗೆ ಮಾಹಿತಿ ಪಡೆದ ಪೊಲೀಸರು, ದೆಹಲಿಯಿಂದ ಎಂಡಿಎಂಎ ಖರೀದಿಸಿಕೊಂಡು ಬೆಂಗಳೂರಿಗೆ ಸಾಗಿಸುತ್ತಿದ್ದ ಜಾಲದ ಬಗ್ಗೆ ಸುಳಿವು ಪಡೆದರು.

ಜುಲೈ 15 ರಂದು ಬಾಗಲಕೋಟೆ ಜಿಲ್ಲೆಯ ಹುನಗುಂದ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ರಾಯಲ್ ಇನ್ ಲಾಡ್ಜ್ ಮೇಲೆ ದಾಳಿ ನಡೆಸಿ ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಅವರಿಂದ ಅಂದಾಜು ಐದೂವರೆ ಕೋಟಿ ರೂ. ಮೌಲ್ಯದ ಒಟ್ಟು 5 ಕೆಜಿ 196 ಗ್ರಾಂ ಎಂಡಿಎಂಎ, ಕಾರು, ಬ್ಯಾಗ್ ಮತ್ತು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿತ್ತು.ಪೊಲೀಸರ ಮಾಹಿತಿ ಪ್ರಕಾರ, ಪ್ರಮುಖ ಆರೋಪಿ ಮೊಹಮ್ಮದ್ ಅಲ್ತಾಫ್ ವಿರುದ್ಧ ಈ ಹಿಂದೆ 2024 ರಲ್ಲಿ ಕೊಣಾಜೆ ಪೊಲೀಸ್ ಠಾಣೆ ಮತ್ತು 2026 ರಲ್ಲಿ ಉರ್ವ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣಗಳು ದಾಖಲಾಗಿವೆ.

ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ಕಾರಿನ ಮೂಲಕ ದೆಹಲಿಯಿಂದ ಎಂಡಿಎಂಎ ತಂದು, ಬೆಂಗಳೂರನ್ನು ಕೇಂದ್ರವಾಗಿಸಿಕೊಂಡು ದಕ್ಷಿಣ ಕನ್ನಡ, ಉಡುಪಿ ಹಾಗೂ ಕೇರಳದ ವಿವಿಧ ಭಾಗಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದರು ಎಂದು ಬಹಿರಂಗವಾಗಿದೆ. ಈ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆಯಲ್ಲಿ, ತನಿಖೆ ಮುಂದುವರಿದಿತ್ತು.ಪೊಲೀಸ್ ವಿಚಾರಣೆಯ ವೇಳೆ ಆರೋಪಿಗಳು ಜಲೀಲ್ ಬಾಬಾ ಎಂಬಾತ ಹೆಸರನ್ನು ಬಾಯಿ ಬಿಟ್ಟಿದ್ದಾರೆ ಎನ್ನಲಾಗಿದೆ. ಖರೀದಿಗೆ ಹೋಗಿದ್ದ ಮೂವರು ಆರೋಪಿಗಳ‌ ಜೊತೆ ನೇರ ನಂಟು, ಇತ್ತೆಂದು ಹೇಳಲಾಗುತ್ತಿದೆ.

ಜಲೀಲ್ ಬಾಬಾ ನಾಪತ್ತೆ:- ಪ್ರಕರಣದಲ್ಲಿ ಕಾಣಿಸಿಕೊಂಡಂತೆ‌ ಇದೀಗ ಬೆಳ್ತಂಗಡಿಯ ಅಂಬುಲೆನ್ಸ್ ಚಾಲಕ ಜಲೀಲ್ ಬಾಬಾ ಕಳೆದ 6 ದಿನಗಳಿಂದ ತಲೆಮರೆಸಿಕೊಂಡಿದ್ದಾನೆ. ಮೊಬೈಲ್ ಪೋನ್ ಸ್ವಿಚ್ಚ್ ಆಫ್ ಮಾಡಲಾಗಿದ್ದು ಆತನ ಪತ್ತೆಗಾಗಿ ಜಿಲ್ಲಾ ಪೊಲೀಸ್ ಎಸ್.ಪಿ ಮತ್ತು ಕಮಿಷನರ್ ಅವರ ಮಾರ್ಗದರ್ಶನದ ತಂಡ ಕಾರ್ಯಾಚರಣೆ ಆರಂಭಿಸಿದೆ ಎಂದು ವರದಿಯಾಗಿದೆ.

Related posts

ಸಂತ ತೆರೇಸಾ ಶಿಕ್ಷಣ ಸಂಸ್ಥೆಗಳಲ್ಲಿ ಅಗ್ನಿಶಾಮಕ ದಳ ಹಾಗೂ ವರ್ತಕರ ಸಂಘದ ಸಂಯುಕ್ತ ಆಶ್ರಯದಲ್ಲಿ ಪ್ರಕೃತಿ ವಿಕೋಪಗಳ ಬಗ್ಗೆ ಜಾಗೃತಿ ಮೂಡಿಸುವ ಪ್ರಾತ್ಯಕ್ಷಿಕೆ

Suddi Udaya

ಉಜಿರೆ ರತ್ನಮಾನಸದಲ್ಲಿ ಆಟಿದ ಅಟಿಲ್ ಕಾರ್ಯಕ್ರಮ

Suddi Udaya

ಉಜಿರೆ ಪ್ರಾ.ಕೃ.ಪ. ಸಹಕಾರಿ ಸೇವಾ ಸಂಘದ ನೂತನ ಕಟ್ಟಡ ‘ಉತ್ಥಾನ’ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುರಿಯ ಪ್ರತಿಷ್ಠಾನದಿಂದ ಬಲಿಪ ಸ್ಮೃತಿ ಗೌರವಾರ್ಥ ತೆಂಕುತಿಟ್ಟು ಭಾಗವತಿಕೆ ಸ್ಪರ್ಧೆಗೆ ಆಹ್ವಾನ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್ನಲ್ಲಿ ಮಳೆಗಾಲದ ವಿಶೇಷ ಮಾನ್ಸೂನ್ ಆಫರ್

Suddi Udaya

ಬೆಳ್ತಂಗಡಿ, ಪುತ್ತೂರು ಮತ್ತು ಬಂಟ್ವಾಳದ ಹಲವು ಕಡೆ ಎನ್‌ಐಎ ದಾಳಿ

Suddi Udaya
error: Content is protected !!