26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಕ್ಷಕಿ ಪವಿತ್ರಾ ದಿನೇಶ್ ಕೊಕ್ಕಡ ರವರಿಗೆ ‘ಕನ್ನಡ ಪಯಸ್ವಿನಿ ಶಿಕ್ಷಣ ರತ್ನ ಅಚೀವ್ಮೆಂಟ್ ಅವಾರ್ಡ್’ ಪ್ರದಾನ

ಬೆಳ್ತಂಗಡಿ: ಕವಯತ್ರಿ, ಲೇಖಕಿ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ವಿಶಿಷ್ಟ ಸೇವೆಯನ್ನು ಗುರುತಿಸಿ, ಬೆಳ್ತಂಗಡಿ ತಾಲೂಕಿನ ಪವಿತ್ರಾ ದಿನೇಶ್ ಕೊಕ್ಕಡ ಅವರಿಗೆ ಕನ್ನಡ ಭವನದ ಪ್ರತಿಷ್ಠಿತ `ಕನ್ನಡ ಪಯಸ್ವಿನಿ ಶಿಕ್ಷಣ ರತ್ನ ಅಚೀವ್ಮೆಂಟ್ ಅವಾರ್ಡ್’ ನ್ನು ಜು.26ರಂದು ಪ್ರದಾನ ಮಾಡಲಾಯಿತು.

ಕಾಸರಗೋಡಿನ ಕನ್ನಡ ಭವನದ ರಜತ ಸಂಭ್ರಮ ಸಮಾರೋಪದ ಅಂಗವಾಗಿ, ಕನ್ನಡ ಭವನ ಗ್ರಂಥಾಲಯ, ಕನ್ನಡ ಭವನ ಪ್ರಕಾಶನ ಹಾಗೂ ಡಾ. ಕೆ. ವಾಮನ್ ರಾವ್ ಬೇಕಲ್ ಸ್ಥಾಪಿತ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿಗಳ ಸಂಯುಕ್ತ ಆಶ್ರಯದಲ್ಲಿ “ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ”ದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಐಎಎಸ್ ಅಧಿಕಾರಿ ಡಾ. ಸಿ. ಸೋಮಶೇಖರ್ ಭಾಗವಹಿಸಿ ಶುಭಹಾರೈಸಿದರು.

ಶೈಕ್ಷಣಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ, ಸಾಹಿತ್ಯ ಕ್ಷೇತ್ರದಲ್ಲಿನ ಸಾಧನೆ ಹಾಗೂ ಕನ್ನಡ ಭಾಷೆಯ ಬೆಳವಣಿಗೆಗೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಪವಿತ್ರಾ ದಿನೇಶ್ ಕೊಕ್ಕಡ ಅವರನ್ನು ಈ ಅಂತರ್ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಿ ಪ್ರಶಸ್ತಿ ಪ್ರದಾನ ಮಾಡಿಸನ್ಮಾನಿಸಲಾಯಿತು. ಈ ಸಂದರ್ಭ ಸÀಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ಕೆ. ವಾಮನ್ ರಾವ್ ಬೇಕಲ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಪ್ರಸ್ತುತ ಇವರು ಪುತ್ತೂರು ತಾಲೂಕಿನ ಬಜತ್ತೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ಸಲ್ಲಿಸುತ್ತಿದ್ದಾರೆ.

Related posts

ರಾಷ್ಟ್ರ ಪ್ರಶಸ್ತಿ ವಿಜೇತ, ನಿರ್ದೇಶಕ ಚೇತನ್ ಮುಂಡಾಡಿ ರವರ ಬಹುಭಾಷಾ ಚಿತ್ರಕ್ಕೆ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಭವನದಲ್ಲಿ ಆಡಿಷನ್

Suddi Udaya

ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ.ಯು.ಪಿ.ಶಿವಾನಂದರಿಗೆ ಮೊಹರೆ ಹನುಮಂತರಾಯ ಪ್ರಶಸ್ತಿ

Suddi Udaya

ಉಜಿರೆ ದುರ್ಗಾ ಮೊಬೈಲ್‌ಗೆ ಧರ್ಮದರ್ಶಿ ಹರೀಶ್ ಆರಿಕೋಡಿ ಭೇಟಿ

Suddi Udaya

ಪಾರೆoಕಿ ಗ್ರಾಮದ ಹಾರಬೆ ಶ್ರೀ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳರೋಗ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳ ಲಕ್ಷ ದೀಪೋತ್ಸವದ ಪ್ರಯುಕ್ತ 12ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!