28.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಕಾರ್ಗಿಲ್ ವಿಜಯ ದಿನ: ಉಜಿರೆ ಎಸ್‌ಡಿಎಂ ಪದವಿ ಪೂರ್ವ ಕಾಲೇಜಿನ ಎನ್‌ಎಸ್‌ಎಸ್ ಘಟಕದಿಂದ ಕಾರ್ಗಿಲ್ ವನಕ್ಕೆ ಭೇಟಿ


ಉಜಿರೆ: ಕಾರ್ಗಿಲ್ ವಿಜಯ ದಿನದ ಅಂಗವಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರಸೈನಿಕರ ಸ್ಮರಣಾರ್ಥ ನಿರ್ಮಿಸಲಾದ ಕಾರ್ಗಿಲ್ ವನಕ್ಕೆ ಭೇಟಿ ನೀಡಿ ಗೌರವ ನಮನ ಸಲ್ಲಿಸಲಾಯಿತು.

ಕಾರ್ಗಿಲ್ ವನದ ರೂವಾರಿ ಸಚಿನ್ ಭಿಡೆ ಮಾತನಾಡಿ, “ನಾವೆಲ್ಲರೂ ಇಂದು ನೆಮ್ಮದಿಯಿಂದ ಬದುಕುತ್ತಿದ್ದೇವೆ ಎಂದರೆ ಅದಕ್ಕೆ ನಮ್ಮ ಸೈನಿಕರ ತ್ಯಾಗವೇ ಕಾರಣ. ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ 527 ವೀರಸೈನಿಕರ ನೆನಪಿಗಾಗಿ ಇಲ್ಲಿ 527 ಗಿಡಗಳನ್ನು ನೆಡಲಾಗಿದೆ. ಪ್ರತಿಯೊಂದು ಗಿಡವೂ ಒಬ್ಬೊಬ್ಬ ವೀರಸೈನಿಕರ ಅಮರ ತ್ಯಾಗದ ಸಂಕೇತವಾಗಿದೆ. ಈ ವನವು ದೇಶಭಕ್ತಿಯ ಸಂದೇಶವನ್ನು ಮುಂದಿನ ಪೀಳಿಗೆಗೆ ಸಾರುವ ಪವಿತ್ರ ತಾಣವಾಗಿದೆ,” ಎಂದು ಹೇಳಿದರು.

ಎನ್‌ಎಸ್‌ಎಸ್ ಯೋಜನಾಧಿಕಾರಿ ವಿಶ್ವನಾಥ್ ಎಸ್. ಮಾತನಾಡಿ, “ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟ ವೀರ ಯೋಧರನ್ನು ಸ್ಮರಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ. ಕಾರ್ಗಿಲ್ ವನವು ಹುತಾತ್ಮರ ತ್ಯಾಗವನ್ನು ನೆನಪಿಸುವುದರ ಜೊತೆಗೆ ಯುವಜನರಲ್ಲಿ ದೇಶಪ್ರೇಮವನ್ನು ಬೆಳೆಸುವ ಕಾರ್ಯವನ್ನು ಮಾಡುತ್ತಿದೆ,” ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಎನ್‌ಎಸ್‌ಎಸ್ ಸ್ವಯಂಸೇವಕರು ಗಿಡಗಳನ್ನು ನೆಡುವ ಮೂಲಕ ವೀರಸೈನಿಕರಿಗೆ ಗೌರವ ನಮನ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಸಹಯೋಜನಾಧಿಕಾರಿ ಶೋಭಾ ಪಿ. ಉಪಸ್ಥಿತರಿದ್ದರು. ಎನ್‌ಎಸ್‌ಎಸ್ ಸ್ವಯಂಸೇವಕಿ ಸುಪೇಕ್ಷಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳ ದೊಂಡೋಲೆ ನಿವಾಸಿ ಸಂತೋಷ್ ಶೆಟ್ಟಿ ನಿಧನ

Suddi Udaya

ಇಂದು (ಆ.28) ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ರಾಜ್ಯಪಾಲರ ಮೇಲೆ ಪ್ರಚೋದನಕಾರಿ ಹೇಳಿಕೆ ನೀಡಿರುವ ಐವನ್ ಡಿ ಸೋಜಾ ಮೇಲೆ ದೂರು ದಾಖಲಿಸಲು ಒತ್ತಾಯಿಸಿ ರಸ್ತೆ ತಡೆ- ಬೃಹತ್ ಪ್ರತಿಭಟನೆ

Suddi Udaya

ಇಂದಬೆಟ್ಟು: ಕೃಷಿ ಮತ್ತು ಕುಡಿಯುವ ನೀರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವ ಬಗ್ಗೆ ಮೆಸ್ಕಾಂ ಅಧಿಕಾರಿಗೆ ಗ್ರಾಮಸ್ಥರಿಂದ ಮನವಿ

Suddi Udaya

ಹೊಸಂಗಡಿ ಇಂದಿರಾ ವಸತಿ ಶಾಲೆಯಲ್ಲಿ ವನಮಹೋತ್ಸವ

Suddi Udaya

ಸೌಜನ್ಯ ಪ್ರಕರಣ ವಿಚಾರಣೆ ಜು.21 ಕ್ಕೆ ಮುಂದೂಡಿಕೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕ ಹಾಗೂ ಗ್ರಾಮಾಭ್ಯುದಯ ಅನುಷ್ಠಾನ ಸಮಿತಿಯಿಂದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೆರಿಯಲ್ ರವರಿಗೆ ಗೌರವಾರ್ಪಣೆ

Suddi Udaya
error: Content is protected !!