28.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ನಡುಗುಡ್ಡೆ ಪ್ರದೇಶದ ಮರದ ಕಾಲುಸಂಕ ಮತ್ತು ಸವಣಾಲು ಹಿತ್ತಿಲಪೇಲ ನದಿಗೆ ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ವಿಸ್ತೃತ ವರದಿ ಸಲ್ಲಿಕೆ

ಲಾಯಿಲ ಗ್ರಾಮದ ಬರೆಮೇಲು ನಡುಗುಡ್ಡೆ ಪ್ರದೇಶದ ಮರದ ಕಾಲುಸಂಕ ಮತ್ತು ಸವಣಾಲು ಗ್ರಾಮದ ಹಿತ್ತಿಲಪೇಲ ನದಿಗೆ ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿಸ್ತೃತ ವರದಿಗಳನ್ನು ಲಾಯಿಲ ಮತ್ತು ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗಳು ಬೆಳ್ತಂಗಡಿ ತಾಲೂಕು ಕಾನೂನು ಸೇವೆಗಳ ಸಮಿತಿಗೆ ಸೋಮವಾರ ಸಲ್ಲಿಸಿದೆ.

ಲಾಯಿಲ ಗ್ರಾಮದ ಬರಮೇಲು ನಡುಗುಡ್ಡೆ ಪ್ರದೇಶದ ಮರದ ಕಾಲುಸಂಕವನ್ನು ಬೆಳ್ತಂಗಡಿ ನ್ಯಾಯಾಲಯದ ನ್ಯಾಯಾಧೀಶರುಗಳಾದ ಹಿರಿಯ ಸಿವಿಲ್ ನ್ಯಾಯಧೀಶ , ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಮನು ಬಿ.ಕೆ ಹಾಗೂ ಪ್ರಧಾನ ಸಿವಿಲ್ ನ್ಯಾಯಧೀಶ , ತಾಲೂಕು ಕಾನೂನು ಸೇವೆಗಳ ಸಮಿತಿ ಸದಸ್ಯ ಕಾರ್ಯದರ್ಶಿ ರಾಮಲಿಂಗಪ್ಪರವರು ಅದಿತ್ಯವಾರ ಭೇಟಿ ನೀಡಿ ಪರಿಶೀಲಿಸಿ ವರದಿ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಆದೇಶಿಸಿದ್ದರು.

ನ್ಯಾಯಧೀಶರ ಆದೇಶದಂತೆ ಇಂದು ಲಾಯಿಲ ಗ್ರಾಮ ಪಂಚಾಯತ್ ಬರೆಮೇಲು ನಡುಗಡ್ಡೆ ಪ್ರದೇಶದ ವಿಸ್ತೃತ ವರದಿಯನ್ನು , ಮೇಲಂತಬೆಟ್ಟು ಗ್ರಾಮ ಪಂಚಾಯತ್ ಸವಣಾಲು ಗ್ರಾಮದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಹಿತ್ತಿಲಪೇಲ ಮಲೆಕುಡಿಯ ಪ್ರದೇಶದ ಸೇತುವೆ ನಿರ್ಮಾಣದ ಬಗ್ಗೆ ವಿಸ್ತೃತ ವರದಿಯನ್ನು ತಾಲೂಕು ಕಾನೂನು ಸೇವೆಗಳ ಸಮಿತಿಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

Related posts

ರಾಜಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ. ರವರಿಗೆ ಕರ್ನಾಟಕ ಜ್ಯೋತಿ ಅವಾರ್ಡ್

Suddi Udaya

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಅಪ್ರಾಪ್ತ ಬಾಲಕರ ಮೇಲೆ ಪ್ರಕರಣ ದಾಖಲು

Suddi Udaya

ಪಿಯು ಮರುಮೌಲ್ಯಮಾಪನ: ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಿತೀಷ ರಾಜ್ಯಕ್ಕೆ 10ನೇ ಸ್ಥಾನ

Suddi Udaya

ಕಳೆಂಜ: ಭಾರಿ ಗಾಳಿ ಮಳೆಯಿಂದಾಗಿ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ನಡ ಸ.ಹಿ.ಪ್ರಾ. ಶಾಲಾ ಶತಮಾನೋತ್ಸವ ಸಮಿತಿಯಿಂದ ಡಾ|| ಹೆಗ್ಗಡೆಯವರ ಭೇಟಿ

Suddi Udaya

ಸೆ.12: ಬೆಳ್ತಂಗಡಿಯಲ್ಲಿ ಮುಳಿಯ ಜ್ಯುವೆಲ್ಸ್ ವತಿಯಿಂದ ಕೃಷ್ಣ ವೇಷ ಸ್ಪರ್ಧೆ

Suddi Udaya
error: Content is protected !!