28.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ಅರಿವು ಕಾರ್ಯಕ್ರಮ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ರೋವರ್ಸ್ & ರೇಂಜರ್ಸ್ ಘಟಕದ ವತಿಯಿಂದ ಪ್ರಥಮ ಚಿಕಿತ್ಸೆ ಅರಿವು ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ. ವಹಿಸಿದ್ದರು.

ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಸಚೇತ್ ಸುವರ್ಣ, RSL (Advanced), ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ದಕ್ಷಿಣ ಕನ್ನಡ ಜಿಲ್ಲೆ ಹಾಗೂ First Aid Master Trainer ಭಾಗವಹಿಸಿ, ಅಪಘಾತ ಅಥವಾ ತುರ್ತು ಸಂದರ್ಭಗಳಲ್ಲಿ ಪ್ರಥಮ ಚಿಕಿತ್ಸೆ ನೀಡುವ ವಿಧಾನಗಳು, ರಕ್ತಸ್ರಾವ ನಿಯಂತ್ರಣ, ಗಾಯಗಳಿಗೆ ಸೂಕ್ತ ಚಿಕಿತ್ಸೆ, ತುರ್ತು ಪರಿಸ್ಥಿತಿಯಲ್ಲಿ ಅನುಸರಿಸಬೇಕಾದ ಕ್ರಮಗಳು ಹಾಗೂ ಪ್ರಥಮ ಚಿಕಿತ್ಸೆಯ ಮಹತ್ವವನ್ನು ಪ್ರಾತ್ಯಕ್ಷಿಕೆಯೊಂದಿಗೆ ವಿವರಿಸಿದರು.

ವಿದ್ಯಾರ್ಥಿಗಳು ಆಸಕ್ತಿಯಿಂದ ಭಾಗವಹಿಸಿ ವಿವಿಧ ಪ್ರಶ್ನೆಗಳನ್ನು ಕೇಳಿ ಮಾಹಿತಿ ಪಡೆದರು.

ಕಾರ್ಯಕ್ರಮದಲ್ಲಿ ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ಬೆಳಿಯಪ್ಪ ಕೆ. (RSL) ಹಾಗೂ ಶ್ರೀಮತಿ ರಕ್ಷಾ ಎ. (RL) ಉಪಸ್ಥಿತರಿದ್ದರು.
ಕಾರ್ಯಕ್ರಮದ ಆರಂಭದಲ್ಲಿ ಬೆಳಿಯಪ್ಪ ಕೆ. (RSL) ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯರಾದ ತನ್ವಿ ಮತ್ತು ಶ್ರೀಜ ಕಾರ್ಯಕ್ರಮವನ್ನು ನಿರೂಪಿಸಿದರು.

ಶ್ರೀಮತಿ ರಕ್ಷಾ ಎ. (RL) ವಂದಿಸಿದರು. ರೋವರ್ಸ್ & ರೇಂಜರ್ಸ್ ಘಟಕದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಇಂದಬೆಟ್ಟು : ಬಂಗಾಡಿ ನಿವಾಸಿ ಪ್ರದೀಪ್ ದೇವಾಡಿಗ ನಿಧನ

Suddi Udaya

ಪಟ್ರಮೆ : ಪುರುಷೋತ್ತಮ ದಾಸ್ ಹೃದಯಾಘಾತದಿಂದ ನಿಧನ

Suddi Udaya

ನಾಳ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ರಾಸುಗಳ ಅಭಿಯಾನ ಶಿಬಿರ

Suddi Udaya

ಬಿ.ಎಡ್. ಪರೀಕ್ಷೆ: ಉಜಿರೆ ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯಕ್ಕೆ ಶೇ.100 ಫಲಿತಾಂಶ

Suddi Udaya

ಕಡಿರುದ್ಯಾವರ : ಮಾರಿಯಮ್ಮ ಸೇವಾ ಸಮಿತಿ ಶ್ರೀ ಮಾರಿಯಮ್ಮ ದೇವಿ ಮತ್ತು ಗುಳಿಗ ದೈವದ ಪುನರ್ ಪ್ರತಿಷ್ಠೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಹನ್ನೆರಡನೇ ಸುತ್ತಿನಲ್ಲಿ 11360 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya
error: Content is protected !!