September 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸವಣಾಲು: ಹಿತ್ತಿಲಪೇಲ ಪ್ರದೇಶಕ್ಕೆ ಶಾಶ್ವತ ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸೂಕ್ತ ವರದಿ ನೀಡುವಂತೆ ಮೇಲಂತಬೆಟ್ಟು ಗ್ರಾ.ಪಂ.ಗೆ ಮೌಖಿಕ ಆದೇಶ ನೀಡಿದ ಬೆಳ್ತಂಗಡಿ ನ್ಯಾಯಾಧೀಶರು

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಸವಣಾಲು ಗ್ರಾಮದ ಹಿತ್ತಿಲಪೇಲ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಅಪಾಯಕಾರಿ ನದಿಗೆ ಶಾಶ್ವತ ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸೂಕ್ತ ವರದಿ ನೀಡುವಂತೆ ಬೆಳ್ತಂಗಡಿ ತಾಲೂಕು ಕಾನೂನು ಸೇವೆಗಳ ಸಮಿತಿಯ ನ್ಯಾಯಾಧೀಶರು ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗೆ ಮೌಖಿಕ ಆದೇಶ ನೀಡಿದ್ದಾರೆ.

ಲಾಯಿಲ ಗ್ರಾಮದ ಬರಮೇಲು ನಡುಗುಡ್ಡೆ ಮರದ ಕಾಲುಸಂಕ ಪ್ರದೇಶಕ್ಕೆ ಭೇಟಿ ನೀಡಿದ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ , ಬೆಳ್ತಂಗಡಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಮನು ಬಿ.ಕೆ ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿಯ ಸದಸ್ಯ ಕಾರ್ಯದರ್ಶಿ , ಪ್ರಧಾನ ಸಿವಿಲ್ ನ್ಯಾಯಧೀಶ ರಾಮಲಿಂಗಪ್ಪರವರು ಬೆಳ್ತಂಗಡಿ ತಾಲೂಕಿನಲ್ಲಿ ಅಪಾಯಕಾರಿ ನದಿ , ತೊರೆ ದಾಟಲು ಸೇತುವೆ ಇಲ್ಲದಿರುವ ಬಗ್ಗೆ ಮಾಹಿತಿಯನ್ನು ಸಾರ್ವಜನಿಕರಲ್ಲಿ , ಅಧಿಕಾರಿಗಳಲ್ಲಿ ಕೇಳಿದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕ ಶೇಖರ್ ಲಾಯಿಲ ಮಾಹಿತಿ ನೀಡಿ ಸವಣಾಲು ಗ್ರಾಮದ ಹಿತ್ತಿಲಪೇಲ ಪ್ರದೇಶದಲ್ಲಿ ಅಪಾಯಕಾರಿ ನದಿಯನ್ನು ದಾಟಲು ಸೇತುವೆ ಇಲ್ಲದೆ ಕಳೆದ ವರ್ಷ ಯುವಕರಿಬ್ಬರು ದ್ವಿಚಕ್ರ ವಾಹನ ಸಮೇತ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಪ್ರಾಣಾಪಾಯದಿಂದ ಪಾರಗಿರುವ ಬಗ್ಗೆ ಮತ್ತು ಇಂದಿಗೂ ಸೇತುವೆ ನಿರ್ಮಾಣ ಮಾಡದ ವ್ಯವಸ್ಥೆಯ ಬಗ್ಗೆ ಹಾಗೂ ರಸ್ತೆ , ವಿದ್ಯುತ್ ವಂಚಿತ ಅಲ್ಲಿನ ಮಲೆಕುಡಿಯ ಕುಟುಂಬಗಳ ಬಗ್ಗೆ ಮಾಹಿತಿ ನೀಡಿದರು. ಇಲ್ಲಿ ಈ ವರ್ಷ ಯಾವುದೇ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ನದಿ ದಾಟುವುದನ್ನೆ ನಿರ್ಭಂಧಿಸಿ ಬ್ಯಾನರ್ ಅಳವಡಿಸಿ 9 ಆದಿವಾಸಿ ಮಲೆಕುಡಿಯ ಸಮುದಾಯದ ಕುಟುಂಬಗಳಿಗೆ ಸರ್ಕಾರಿ ದಿಗ್ಬಂಧನ ವಿಧಿಸಿರುವ ಬಗ್ಗೆ ನ್ಯಾಯಧೀಶರ ಗಮನ ಸೆಳೆದರು. ಆಗ ಸ್ಥಳದಲ್ಲಿದ್ದ ಉಪ ತಹಶೀಲ್ದಾರ್ ಮಲ್ಲಪ್ಪ ನಡುಗುಡ್ಡೆ ಯವರಿಗೆ ಈ ಬಗ್ಗೆ ವಿಸ್ತೃತ ವರದಿಯನ್ನು ಸೋಮವಾರ ಮಧ್ಯಾಹ್ನದೊಳಗೆ ನೀಡುವಂತೆ ಮೇಲಂತಬೆಟ್ಟು ಗ್ರಾಮ ಪಂಚಾಯತ್ ಮತ್ತು ಗ್ರಾಮಾಡಳಿತಾಧಿಕಾರಿಗೆ ಸೂಚಿಸುವಂತೆ ತಿಳಿಸಿದರು. ‌

Related posts

ಸೇವಾ ನಿವೃತ್ತಿಗೊಳ್ಳುತ್ತಿರುವ ಕಳಿಯ ಪ್ರಾ.ಕೃ.ಪ.ಸ.ಸಂಘದ ಮಾರಾಟ ಸಹಾಯಕ ಶಿವರಾಮ್ ನಾಯ್ಕ್ ರಿಗೆ ಬೀಳ್ಕೊಡುಗೆ

Suddi Udaya

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.97 ಫಲಿತಾಂಶ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆ ಮತ್ತು ಪ.ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ನ.26- ನ.30: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

Suddi Udaya

ಮಡಂತ್ಯಾರು : ಕುಕ್ಕಳದಲ್ಲಿ ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

Suddi Udaya

ಮರುಮೌಲ್ಯ ಮಾಪನದಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಕು. ಅನನ್ಯ ರಾಜ್ಯಕ್ಕೆ 9ನೇ ರ‍್ಯಾಂಕ್

Suddi Udaya
error: Content is protected !!