July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 15ನೇ ವಾರ್ಷಿಕ ಸಾಮಾನ್ಯ ಸಭೆ: ರೂ. 308.58 ಲಕ್ಷ ನಿವ್ವಳ ಲಾಭ : ಆತ್ಮಶಕ್ತಿಯ ನಿರಂತರ ಸಾಧನೆಗೆ ಸದಸ್ಯರ ಶ್ಲಾಘನೆ

ಬೆಳ್ತಂಗಡಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಇದರ 2025-26 ನೇ ಸಾಲಿನ 15ನೇ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಜು.26 ರಂದು ಪಡೀಲಿನ ಬೈರಾಡಿಕೆರೆ ಹತ್ತಿರದ ಸಂಘದ ಪ್ರಧಾನ ಕಛೇರಿ “ಆತ್ಮಶಕ್ತಿ ಸೌಧ”ದ ಸಭಾಂಗಣದಲ್ಲಿ ಜರುಗಿತು.

ಸಂಘದ 2025-26ನೇ ಸಾಲಿನ ವಾರ್ಷಿಕ ವರದಿ ಲೆಕ್ಕಪತ್ರವನ್ನು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಶ್ರೀಮತಿ ಸೌಮ್ಯ ವಿಜಯ್‌ರವರು ಸಭೆಯಲ್ಲಿ ಮಂಡಿಸಿದರು. ಸಂಘದ ಅಧ್ಯಕ್ಷ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರು ಮಾತನಾಡಿ ಸಂಘವು ಪ್ರಸ್ತುತ ಅವಿಭಜಿತ ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ಒಟ್ಟು 35 ಶಾಖೆಗಳನ್ನು ಹೊಂದಿದ್ದು, 2026-27ನೇ ಸಾಲಿನಲ್ಲಿ ಸಂಘದ ಕಾರ್ಯವ್ಯಾಪ್ತಿಯಲ್ಲಿ ಇನ್ನೂ ಹೆಚ್ಚಿನ ಹೊಸ ಶಾಖೆಗಳನ್ನು ತೆರೆದು, ಹೆಚ್ಚಿನ ಸದಸ್ಯರನ್ನು ಸೇರ್ಪಡೆಗೊಳಿಸಿ ಪಾಲು ಬಂಡವಾಳವನ್ನು ರೂ. 3 ಕೋಟಿಗೆ ಹೆಚ್ಚಿಸಿ, ವಿವಿಧ ಯೋಜನೆಗಳ ಮೂಲಕ ಸದಸ್ಯರಿಂದ ರೂ.375 ಕೋಟಿಗೂ ಮಿಕ್ಕಿ ಠೇವಣಿಗಳನ್ನು ಸಂಗ್ರಹಿಸಿ, ರೂ. 325 ಕೋಟಿಗೂ ಮಿಕ್ಕಿ ಸಾಲ ನೀಡುವ ಗುರಿಯನ್ನು ಹೊಂದಿದೆ. ಮುಂದಿನ ದಿನಗಳಲ್ಲಿ ಸಂಘದ ವತಿಯಿಂದ ಸದಸ್ಯರಿಗೆ ಉಚಿತ ವಿಮಾ ಸೌಲಭ್ಯವನ್ನು ಒದಗಿಸಲಾಗುವುದು ಎಂದರು.

ಇಂದು ನಮ್ಮ ಸಂಘದ ಪ್ರಗತಿಗೆ ಸದಸ್ಯರಾದ ತಾವುಗಳು ಕಾರಣ ನಿಮ್ಮ ಸಂಪೂರ್ಣ ಸಹಕಾರಕ್ಕೆ ನಾವುಗಳು ಸದಾ ಋಣಿಯಾಗಿ ಇರುತ್ತೇವೆ. ಅದೇ ರೀತಿ ಸಂಸ್ಥೆಯ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸಿದ ಎಲ್ಲಾ ಸಿಬ್ಬಂದಿವರ್ಗದ ಕಾರ್ಯವೈಖರಿಯನ್ನು ಮುಕ್ತ ಕಂಠದಿ0ದ ಶ್ಲಾಘನೆ ಮಾಡಿದರು. ಮುಂದಕ್ಕೆ ಸಂಘವು ಹಾಕಿಕೊಂಡಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಎಲ್ಲಾ ಸದಸ್ಯರ ಸಹಕಾರ ಕೋರಿದರು. ಸಂಘದ ಅಭೂತಪೂರ್ವ ಪ್ರಗತಿಗೆ ಸಹಕಾರ ನೀಡಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದರು.
ಸಂಘವು ವರದಿ ಸಾಲಿನಲ್ಲಿ ಸದಸ್ಯರಿಂದ ಒಟ್ಟು ರೂ. 179.28 ಲಕ್ಷ ಷೇರು ಬಂಡವಾಳ, ರೂ. 30,531.54 ಲಕ್ಷ ಠೇವಣಿಯನ್ನು ಸಂಗ್ರಹಿಸಿದೆ. ವರ್ಷಾಂತ್ಯಕ್ಕೆ ರೂ. 27884.33 ಲಕ್ಷ ಸಾಲ ನೀಡಲಾಗಿದೆ. ಸಂಘದ ದುಡಿಯುವ ಬಂಡವಾಳ ರೂ. 32,317.19 ಲಕ್ಷ ಹೊಂದಿದೆ. ಸಂಘದ ಸದಸ್ಯರಿಗೆ ವರದಿ ಸಾಲಿನಲ್ಲಿ ಶೇ. 15 ಡಿವಿಡೆಂಡ್ ಘೋಷಿಸಲಾಯಿತು.

ಸಂಘವು 72ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ “ಉತ್ತಮ ಆಡಳಿತಾತ್ಮಕ ಸಹಕಾರಿ ಸಂಘ” ಪ್ರಶಸ್ತಿ ಹಾಗೂ ಸದಸ್ಯರ ಬೇಡಿಕೆಗಳನ್ನು ಸಮರ್ಪಕವಾಗಿ ಪೂರೈಸುವುದರ ಜೊತೆಗೆ ಸಂಘದ ಕಾರ್ಯವೈಖರಿಯನ್ನು ಗುರುತಿಸಿ ಸತತ 10 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿಯನ್ನು ನೀಡಿ ಗೌರವಿಸಿರುವುದಕ್ಕೆ, ಶಾಖೆಗಳ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸಂಘದ ಸದಸ್ಯರ ಆರೋಗ್ಯದ ಕಾಳಜಿಯಿಂದ ಸತತವಾಗಿ ಆರೋಗ್ಯ ಶಿಬಿರಗಳನ್ನು ಆಯೋಜಿಸುತ್ತಿರುವುಕ್ಕೆ ಹಾಗೂ ಸಿಬ್ಬಂದಿಗಳ ನಗುಮೊಗದ ಗುಣಮಟ್ಟದ ಸೇವೆಗಳಿಗೆ ಸಭೆಯಲ್ಲಿ ಸದಸ್ಯರು ಹರ್ಷ ವ್ಯಕ್ತಪಡಿಸಿದರು.

ಪ್ರತಿಭಾ ಪುರಸ್ಕಾರ:
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಾಗೂ ಗೌರವಾನ್ವಿತ ಸ್ಥಾನ ಅಲಂಕರಿಸಿದ ಸಂಘದ ಸದಸ್ಯರಾದ ಜಯಶೀಲ ಅಡ್ಯಂತಾಯ, ಆನಂದ ಕೆ ಅಸೈಗೋಳಿ, ಸೇಸಪ್ಪ ಪೂಜಾರಿ, ಅಶೋಕ್, ರಕ್ಷಿತ್ ಕುಮಾರ್, ಶ್ರೀಮತಿ ಸುಚಿತ್ರ, ಸುಂದರ ಹೆಗ್ಡೆ, ಟೀಪೇಶ್ ಎಸ್. ಅಮೀನ್, ಸುದೀರ್, ಸದಾನಂದ ಆಚಾರ್ಯ, ಶ್ರೀಮತಿ ರೇವತಿ, ವೆಂಕಟೇಶ್ ಎಸ್ ಪೂಜಾರಿ, ಮನೋಜ್ ಎಸ್ ಸಾಲ್ಯಾನ್ ರವರನ್ನು ಸಂಘದ ಪರವಾಗಿ ಗೌರವಿಸಲಾಯಿತು.

ವಿವಿಧ ಕ್ಷೇತ್ರಗಳಲ್ಲಿಸಾಧನೆ ಮಾಡಿದ ಬಹುಮುಖ ಪ್ರತಿಭೆಯಾಗಿರುವ ಸಂಘದ ಸದಸ್ಯರ ಮಕ್ಕಳನ್ನು, ಎಸ್.ಎಸ್.ಎಲ್.ಸಿ ಪರೀಕ್ಷೆ ಹಾಗೂ ಪಿ.ಯು.ಸಿ ಪರೀಕ್ಷೆಯಲ್ಲಿ ಸಾಧನೆಗೈದ ಸಂಘದ ಸದಸ್ಯರ ಮಕ್ಕಳನ್ನು ಈ ಸಂದರ್ಭದಲ್ಲಿ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಯಿತು.

ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಸಂಘದ ನಿರ್ದೇಶಕರಾದ ಜಿ. ಪರಮೇಶ್ವರ ಪೂಜಾರಿ ಆನಂದ್ ಎಸ್ ಕೊಂಡಾಣ, ಸೀತಾರಾಮ್ ಎನ್, ರಮಾನಾಥ್ ಸನಿಲ್, ಬಿ.ಪಿ. ದಿವಾಕರ್, ಗೋಪಾಲ್ ಎಮ್. ಶ್ರೀಮತಿ ಚಂದ್ರಾವತಿ, ಶ್ರೀಮತಿ ಉಮಾವತಿ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ರವರು ಸ್ವಾಗತಿಸಿ, ಉಪಾಧ್ಯಕ್ಷ ನೇಮಿರಾಜ್ ಪಿ. ವಂದಿಸಿದರು. ಅಭಿನಂದನಾ ಪುರಸ್ಕಾರ ಕಾರ್ಯಕ್ರಮವನ್ನು ಸಹಾಯಕ ಪ್ರಬಂದಕರಾದ ವಿಶ್ವನಾಥ ಹಾಗೂ ಶಾಖಾಧಿಕಾರಿಯಾದ ಶ್ರೀಮತಿ ಧನಲಕ್ಷಿ ನಿರೂಪಿಸಿದರು.

Related posts

ಪಣಕಜೆ: ಶ್ರೀ ಕೃಷ್ಣ ಜನ್ಮಾಷ್ಟಮಿಯ ನೂತನ ಸಮಿತಿ ರಚನೆ

Suddi Udaya

ಕರ್ನೋಡಿ ಸ.ಉ.ಪ್ರಾ. ಶಾಲಾ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ನೋಟ್ ಬುಕ್-ಲೇಖನ ಸಾಮಗ್ರಿಗಳ ವಿತರಣೆ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೆಂಪೇಗೌಡರ ಜಯಂತಿ ಆಚರಣೆ

Suddi Udaya

ಸುದ್ದಿ ಉದಯ ವಾರಪತ್ರಿಕೆ ಲೋಕಾರ್ಪಣೆ ನೂತನ ಕಚೇರಿಯ ಉದ್ಘಾಟನೆ
ಯೂಟ್ಯೂಬ್ ಮತ್ತು ವೆಬ್‌ಸೈಟ್‌ಗೆ ಚಾಲನೆ

Suddi Udaya

ವಾಣಿ ಆಂ.ಮಾ. ಶಾಲೆಯ ಕು. ಶಾನ್ವಿ ಕುಲಾಲ್ ಕರಾಟೆ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya

ಅಂಡಿಂಜೆ: ಯುವಕ ಮಂಡಲದಿಂದ ಮೊಸರು ಕುಡಿಕೆ ಉತ್ಸವ, ವಿವಿಧ ಆಟೋಟ ಸ್ಪರ್ಧೆಗಳು

Suddi Udaya
error: Content is protected !!