27.8 C
ಪುತ್ತೂರು, ಬೆಳ್ತಂಗಡಿ
September 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕಿನ 212 ಫಲಾಭನುವಿಗಳಿಗೆ ವಿದ್ಯುತ್ ಚಾಲಿತ: ಹೊಲಿಗೆ ಯಂತ್ರ ಹಾಗೂ ಉಪಕರಣಗಳ ವಿತರಣೆ

ಬೆಳ್ತಂಗಡಿ: ದ.ಕ ಜಿಲ್ಲಾ ಪಂಚಾಯತ್, ಗ್ರಾಮೀಣ ಕೈಗಾರಿಕಾ ವಿಭಾಗ ಮಂಗಳೂರು ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಇದರ ವತಿಯಿಂದ ಬೆಳ್ತಂಗಡಿ ತಾಲೂಕಿನ ಅರ್ಹ 212 ಫಲಾನುಭವಿಗಳಿಗೆ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ಹಾಗೂ ಉಚಿತ ಸುಧಾರಿತ ಉಪಕರಣಗಳನ್ನು ಜು.28ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನದಲ್ಲಿ ನಡೆದ ಸಮಾರಂಭದಲ್ಲಿ ಶಾಸಕ ಹರೀಶ್ ಪೂಂಜ ಅವರು ಫಲಾನುಭವಿಗಳಿಗೆ ವಿತರಿಸಿದರು.

ನಂತರ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜ ಅವರು ವೃತ್ತಿ ಬದುಕು ನಡೆಸುತ್ತಿರುವವರನ್ನು ಗುರುತಿಸಿ, ಅವರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ತಲುಪಿಸುವ ಕಾರ್ಯವನ್ನು ಬೆಳ್ತಂಗಡಿಯಲ್ಲಿ ನಿರಂತರವಾಗಿ ಮಾಡಲಾಗುತ್ತಿದೆ. ಸರ್ಕಾರದ ಎಲ್ಲ ಯೋಜನೆಗಳನ್ನು ಪಾರದರ್ಶಕವಾಗಿ ಫಲಾನುಭವಿಗಳಿಗೆ ತಲುಪಿಸುವ ಕೆಲಸವನ್ನು ಮುಂದುವರಿಸಲಾಗುವುದು. ವಿತರಿಸಲಾದ ಸಲಕರಣೆಗಳು ಫಲಾನುಭವಿಗಳ ಬದುಕಿಗೆ ಶಕ್ತಿಯಾಗಿ, ಆರ್ಥಿಕವಾಗಿ ಸ್ವಾವಲಂಬಿಗಳಾಗಲು ನೆರವಾಗಲಿ ಎಂದು ಹೇಳಿದರು.


ಜಿಲ್ಲಾ ಪಂಚಾಯತ್ ಕೈಗಾರಿಕಾ ವಿಭಾಗದ ಉಪನಿರ್ದೇಶಕ ಮಂಜುನಾಥ ಹೆಗ್ಡೆ ಅವರು ಸರಕಾರದಿಂದ ದೊರೆಯುವ ವಿವಿಧ ಸೌಲಭ್ಯಗಳ ಮಾಹಿತಿ ನೀಡಿದರು. ವೇದಿಕೆಯಲ್ಲಿ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಂಜು ಅವರು ಉಪಸ್ಥಿತರಿದ್ದರು. ಜಿಲ್ಲಾ ಪಂಚಾಯತ್ ಕೈಗಾರಿಕಾ ವಿಭಾಗದ ಉಪನಿರ್ದೇಶಕ ಮಂಜುನಾಥ ಹೆಗ್ಡೆ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.

Related posts

ಮೇ 20-23: ಬಡಕೋಡಿ ದಂದ್ಯೊಟ್ಟು ಬ್ರಹ್ಮಶ್ರೀ ಮುಗೇರ ದೈವಸ್ಥಾನ, ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಭ್ರಮ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ಅಧ್ಯಕ್ಷರಾಗಿ ವಾಲ್ಟರ್ ಸಿಕ್ವೇರಾ ಆಯ್ಕೆ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ವೇಣೂರು ಸ. ಪ.ಪೂ. ಕಾಲೇಜಿಗೆ ಹಳೆವಿದ್ಯಾರ್ಥಿಗಳಿಂದ ಹೊಸ ಪ್ರೊಜೆಕ್ಟರ್ ಕೊಡುಗೆ

Suddi Udaya

ಕೊಕ್ಕಡ ಶ್ರೀ ಶಿವಶಕ್ತಿ ಭಜನಾ ಮಂದಿರದ ಲೋಕಾರ್ಪಣೆ ಹಾಗೂ ಭಜನೋತ್ಸವ

Suddi Udaya

ಶಾಸಕ ಹರೀಶ್ ಪೂಂಜರಿಗೆ ಕರ್ನಾಟಕ ಟಿವಿ “ಲೀಡರ್ ಅವಾರ್ಡ್ಸ್”

Suddi Udaya
error: Content is protected !!