25 C
ಪುತ್ತೂರು, ಬೆಳ್ತಂಗಡಿ
September 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆ ವತಿಯಿಂದ ಪರಿಸರ ಜಾಗೃತಿ ಹಾಗೂ ಗಿಡನಾಟಿ ಕಾರ್ಯಕ್ರಮ

ಬೆಳ್ತಂಗಡಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರಿಯಡ್ಕದಲ್ಲಿ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಪೆರಿಯಡ್ಕ,ಮತ್ತು ಶಾಲಾಭಿವೃದ್ಧಿ ಸಮಿತಿ ಪೆರಿಯಡ್ಕ ಇವರ ಸಹಕಾರದೊಂದಿಗೆ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ ನಡೆಯಿತು..

ಶಾಲಾ ಮಕ್ಕಳಿಗೆ ಪರಿಸರದ ಬಗ್ಗೆ ಭಾಷಣ, ಪ್ರಬಂಧ ಸ್ಪರ್ಧೆ, ಎಲೆ ಗುರುತಿಸುವಿಕೆ, ಚಿತ್ರಕಲೆ ಸ್ಪರ್ಧೆ ಏರ್ಪಡಿಸಿ ಬಹುಮಾನವನ್ನು ನೀಡಲಾಯಿತು. ಶಾಲೆಯಲ್ಲಿ ಹಣ್ಣಿನ ಗಿಡಗಳ ನಾಟಿಯನ್ನು ಮಾಡಿದ್ದು, ಶಾಲಾ ಪೋಷಕರಿಗೆ ಮತ್ತು ಒಕ್ಕೂಟದ ಸದಸ್ಯರಿಗೆ ಗಿಡಗಳನ್ನು ವಿತರಿಸಿದರು.

ಕೃಷಿ ಮೇಲ್ವಿಚಾರಕ ರಾಮ್ ಕುಮಾರ್ ರವರು, ಪರಿಸರದ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ, ನಮ್ಮಿಂದ ಪರಿಸರವಲ್ಲ ಪರಿಸರದಿಂದ ನಾವು,, ಹಿಂದಿನ ತಲೆಮಾರು ನಮಗೆ ಸ್ವಚ್ಛಂದವಾದ ಗಿಡಮರಗಳ ಪರಿಸರವನ್ನು ನಮಗೆ ಹತ್ತಾಂತರಿಸಿದ್ದಾರೆ, ಇದನ್ನು ಉಳಿಸಿಕೊಂಡು ಮುಂದಿನ ಪೀಳಿಗೆಗೆ ಹಾಗೆಯೇ ಉಳಿಸಿ, ಕೊಡುವುದು ನಮ್ಮ ಜವಾಬ್ದಾರಿಯಾಗಿದೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ರಾಜ್ಯಾದ್ಯಂತ ಪರಿಸರ ಕಾರ್ಯಕ್ರಮವನ್ನು ಆಯೋಜಿಸಿ ಜಾಗೃತಿಯನ್ನು ಮೂಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಸೋಮನಾಥ ಗೌಡ, ಪ್ರಗತಿ ಬಂದು ಸ್ವಸಹಾಯ ಸಂಘಗಳ ಪೆರಿಯಡ್ಕ ಒಕ್ಕೂಟದ ಕಾರ್ಯದರ್ಶಿ, ರವಿತ್ ಕುಮಾರ್, ಶಾಲಾ ಸಹ ಶಿಕ್ಷಕರಾದ ಮಲ್ಲಿಕಾರ್ಜುನ ಎನ್, ಅತಿಥಿ ಶಿಕ್ಷಕರಾದ ಜೋಶ್ಣ, ವಲಯ ಮೇಲ್ವಿಚಾರಕರಾದ ಗಣೇಶ್, ಸೇವಾಪ್ರತಿನಿಧಿ ಶ್ರೀಮತಿ ದಿವ್ಯ, ಒಕ್ಕೂಟದ ಹಾಗೂ ಎಸ್.ಡಿ.ಎಮ್.ಸಿ ಸದಸ್ಯರು, ಉಪಸ್ಥಿತರಿದ್ದು ಗಿಡ ನಾಟಿಯನ್ನು ಮಾಡಿದರು. ಶಾಲಾ ಮಕ್ಕಳು ಉಪಸ್ಥಿತರಿದ್ದು ಮಾಹಿತಿಯನ್ನು ಪಡೆದರು.
ಶಾಲಾ ಮುಖ್ಯೋಪಾಧ್ಯಾಯರಾದ ಮೇರಿ ಎನ್.ಜೆ ನಿರೂಪಿಸಿ ಸ್ವಾಗತಿಸಿದರು..

Related posts

ವೇಣೂರು ಸರಕಾರಿ ಪ್ರೌಢಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಫೆ 27- ಮಾ 2, ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ ಜೀರ್ಣೋದ್ಧಾರ ಹಾಗೂ ಪುನರ್ ಪ್ರತಿಷ್ಠಾ ಮಹೋತ್ಸವ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಸ್ಟಾರ್ಲೈನ್ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಪಾರೆಂಕಿ ಶ್ರೀ ವಿದ್ಯಾಸರಸ್ವತಿ ಭಜನಾ ಮಂಡಳಿಯಿಂದ ಭಜಕ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಧರ್ಮಸ್ಥಳದಲ್ಲಿ ನವಜೀವನ ಸದಸ್ಯರ ಶತದಿನೋತ್ಸವ: ಕಾರ್ಯಕ್ರಮದ ಅಂಗವಾಗಿ ವ್ಯಸನಮುಕ್ತ ಸಾಧಕರ ಸಮಾವೇಶ

Suddi Udaya

ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ಅನಾರೋಗ್ಯದಲ್ಲಿರುವ ಗ್ರಾಮ ಪಂಚಾಯತ್ ನೌಕರರಿಗೆ ರೂ.35 ಸಾವಿರ ಆರ್ಥಿಕ ನೆರವು ಹಾಗೂ ಪಡಿತರ ವಿತರಣೆ

Suddi Udaya
error: Content is protected !!