28.3 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ವೇಣೂರಿನ ನವಚೇತನ ಶಾಲೆಯಲ್ಲಿ ತಾಲೂಕು ಮಟ್ಟದ ಕರಾಟೆ ಪಂದ್ಯಾಟ: ಶರ್ವಿನ್ ಮೋನಿಸ್, ಸಾನ್ವಿ ಎಂ ಜಿಲ್ಲಾ ಮಟ್ಟಕ್ಕೆ ಆಯ್ಕೆ

ವೇಣೂರು:ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಹಾಗೂ ನವಚೇತನ ಆಂಗ್ಲ ಮಾಧ್ಯಮ ಪ್ರೌಢಶಾಲೆ ವೇಣೂರು ಇವರ ಸಂಯುಕ್ತ ಆಶ್ರಯದಲ್ಲಿ 17 ವರ್ಷದೊಳಗಿನ ಬಾಲಕ-ಬಾಲಕಿಯರ ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಪಂದ್ಯಾಟ ಸೋಮವಾರ ನವಚೇತನ ಶಾಲೆಯಲ್ಲಿ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದಲ್ಲಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಪ್ರಭಾಕರ್, ಗ್ರೇಡ್-2 ಪ್ರಾಥಮಿಕ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ದೇವಸ್ಯ, ಗ್ರೇಡ್-2 ಸಂಘದ ಜಿಲ್ಲಾಧ್ಯಕ್ಷ ರವಿರಾಜ್ ಗೌಡ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಜಯರಾಜ್ ಜೈನ್, ನಾರಾವಿ ವಲಯದ ಕ್ರೀಡಾ ಮೇಲ್ವಿಚಾರಕ ಲೋಕಯ್ಯ, ಬಿಐಇಆರ್‌ಟಿ ಜಗದೀಶ್,ಬಜಿರೆ-ಪಡ್ಡಂದಡ್ಕ-ನಿಟ್ಟಡೆ ವಲಯದ ಕ್ರೀಡಾ ಮೇಲ್ವಿಚಾರಕಿ ಆರತಿ, ಕರಾಟೆ ತರಬೇತುದಾರ ಅಶೋಕ್, ನವಚೇತನ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕಿ ಸಿಸ್ಟರ್ ಲಿಲ್ಲಿ ಗೋಮ್ಸ್, ಮುಖ್ಯೋಪಾಧ್ಯಾಯಿನಿ ಸಿಸ್ಟರ್ ವೀರಾ ಡಿಸೋಜಾ ಹಾಗೂ ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷೆ ದಿವ್ಯ ಮಹೇಶ್ ಉಪಸ್ಥಿತರಿದ್ದರು.

ತಾಲೂಕಿನ ಒಟ್ಟು 22 ಶಾಲೆಗಳ ವಿದ್ಯಾರ್ಥಿಗಳು ಪಂದ್ಯಾಟದಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.ಪಂದ್ಯಾಟದಲ್ಲಿ 82+ ವಿಭಾಗದಲ್ಲಿ ನವಚೇತನ ಶಾಲೆಯ ಶರ್ವಿನ್ ಮೋನಿಸ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು.

17 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಸಾನ್ವಿ ಎಂ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಅರ್ಹತೆ ಗಳಿಸಿದರು.
ಇದೇ ವೇಳೆ ಬಾಲಕರ ವಿಭಾಗದಲ್ಲಿ ಸಂಚಿತ್ ಕೆ. ದ್ವಿತೀಯ ಸ್ಥಾನ, ಆತ್ಮಿಕ್ ಹಾಗೂ ಶಮಿತ್ ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದರು.

ವಿಜೇತ ವಿದ್ಯಾರ್ಥಿಗಳಿಗೆ ಅತಿಥಿಗಳು ಅಭಿನಂದನೆ ಸಲ್ಲಿಸಿ, ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದರು.

Related posts

ನಾವೂರು ಶ್ರೀ ಗೋಪಾಲಕೃಷ್ಣ ಸೇವಾ ಟ್ರಸ್ಟ್ ವತಿಯಿಂದ ಭಗವದ್ಗೀತಾ ತರಬೇತಿ ಪ್ರಾರಂಭೋತ್ಸವ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಯಕ್ಷಗಾನ ತರಗತಿ – “ಯಕ್ಷ ಭಾರತೀ” ಉದ್ಘಾಟನೆ

Suddi Udaya

ಆದಿವಾಸಿ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ರವರಿಗೆ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕಶೇಖರ್ ಲಾಯಿಲ ಅವರಿಂದಮನವಿ

Suddi Udaya

ಅಳದಂಗಡಿ: ಕೆದ್ದುವಿನಲ್ಲಿ ಕಾರುಗಳ ನಡುವೆ ಭೀಕರ ರಸ್ತೆ ಅಪಘಾತ, ಹಲವರಿಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ನವಜೀವನ ಆರೈಕೆ ಹಾಗೂ ಬೆಂಬಲ ಕಾರ್ಯಕ್ರಮ ಮತ್ತು ಕ್ರಿಸ್ಮಸ್ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಪರಿಸರ ದಿನಾಚರಣೆ

Suddi Udaya
error: Content is protected !!