27.8 C
ಪುತ್ತೂರು, ಬೆಳ್ತಂಗಡಿ
September 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಅಂಡಿಂಜೆ ನಿಸರ್ಗ ಸಂಜೀವಿನಿ ಒಕ್ಕೂಟದಲ್ಲಿ ಸ್ವಉದ್ಯೋಗ ಆರಿವರ್ಕ್ ತರಬೇತಿ ಕಾರ್ಯಗಾರ ಉದ್ಘಾಟನೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಬೆಳ್ತಂಗಡಿ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಮತ್ತು ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ 15 ದಿನದ ಸ್ವಉದ್ಯೋಗ ಆರಿವರ್ಕ್ ತರಬೇತಿ ಕಾರ್ಯಗಾರದ ಉದ್ಘಾಟನಾ ಸಭೆಯು ಒಕ್ಕೂಟದ ಅಧ್ಯಕ್ಷೆ ಸುದರ್ಶಿನಿ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ್ ಕಾರ್ಯಗಾರವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಪ್ರತಿಮಾ ಆಚಾರ್ಯ., ಸಂಪನ್ಮೂಲ ವ್ಯಕ್ತಿ ವೀಚೀಸ್ ತರಬೇತಿ ಕೇಂದ್ರ ಇದರ ಮಾಲಕಿ ಶುಭಲಕ್ಷ್ಮಿ ಮತ್ತು ಒಕ್ಕೂಟದ ಅಧ್ಯಕ್ಷರು ಕಾರ್ಯಾಗಾರಕ್ಕೆ ಶುಭ ಹಾರೈಸಿದರು

ಸಮಾರಂಭದಲ್ಲಿ ತಾಲೂಕು ಕೃಷಿಯೇತರ ವ್ಯವಸ್ಥಾಪಕ ನಿತೀಶ್ ಕುಮಾರ್ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಇದರ ಸದಸ್ಯರಾದ ಪಂಡರಿನಾಥ, ವಲಯ ಮೇಲ್ವಿಚಾರಕ ಸ್ವಸ್ತಿಕ್ ಜೈನ್, ನಿಶ್ಚಿತ ಜೈನ್, ಮಮತಾ ಉಪಸ್ಥಿತರಿದ್ದರು.

ಜಯಮಾಲ ಪ್ರಾರ್ಥಿಸಿ, ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರಾದ ಮಲ್ಲಿಕಾ ಎನ್ ಸ್ವಾಗತಿಸಿದರು. ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಕಾರ್ಯಕ್ರಮ ವ್ಯವಸ್ಥಾಪಕ ಜೀವನ್ ಕೊಲ್ಯ ಪ್ರಾಸ್ತಾವಿಸಿದರು. ಸುರೇಖಾ ವಂದಿಸಿದರು. ವಸಂತ ಮತ್ತು ಶ್ವೇತಾ ಸಹಕರಿಸಿದರು.

Related posts

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿ, ಶಾಲೆಗಳಿಗೆ ಸಾವಯವ ಗೊಬ್ಬರ ವಿತರಣೆ

Suddi Udaya

ಮಲವಂತಿಗೆ : ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಮನೆ ಬೆಂಕಿಗಾಹುತಿ: ಅಪಾರ ನಷ್ಟ

Suddi Udaya

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ವಾಣಿ ಆಂ.ಮಾ. ಶಾಲಾ ಬಾಲಕ-ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಹೊಸಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ ಗುಲಾಬಿ ಪೂಜಾರ್ತಿ, ಹರೀಶ್ ಕುಲಾಲ್ ಮನೆಗೆ ಶಾಸಕ ಹರೀಶ್ ಪೂಂಜಾ ಭೇಟಿ

Suddi Udaya

ಗಂಡಿಬಾಗಿಲು ಧರ್ಮೋಪದೇಶ ಶಾಲೆಯ ಮುಖ್ಯೋಪಾಧ್ಯಾಯ ಶಿಜು ಸಿ.ವಿ. ಗೆ ಸನ್ಮಾನ ಮತ್ತು ಬೀಳ್ಕೊಡುಗೆ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಮತದಾನ

Suddi Udaya
error: Content is protected !!