25.6 C
ಪುತ್ತೂರು, ಬೆಳ್ತಂಗಡಿ
September 13, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಸತತ 2ನೇ ಬಾರಿಗೆ ಸುರಕ್ಷಿತ ಹೆರಿಗೆಯನ್ನು ಖಾತ್ರಿಪಡಿಸುವ ಮಾನ್ಯತಾ ಪ್ರಮಾಣಪತ್ರ

ಉಜಿರೆ: ಭಾರತದ ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರದ ವೈದ್ಯರನ್ನು ಪ್ರತಿನಿಧಿಸುವ ವೃತ್ತಿಪರ ಸಂಸ್ಥೆಯಾದ ಭಾರತದ ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರದ ಸೊಸೈಟಿಗಳ ಒಕ್ಕೂಟ (FOGSI) ಸಂಸ್ಥೆಯಿಂದ ಸುರಕ್ಷಿತ ಹೆರಿಗೆಯನ್ನು ಖಾತ್ರಿಪಡಿಸುವ ಗುಣಮಟ್ಟದ ಮಾನದಂಡ ಅನುಸರಿಸುತ್ತಿರುವ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಸತತ 2ನೇ ಬಾರಿ ಮಾನ್ಯತಾ ಪ್ರಮಾಣಪತ್ರ ದೊರೆತಿದೆ.

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಪ್ರಸೂತಿ ವಿಭಾಗದ ಸಿಬ್ಬಂದಿ ವೈದ್ಯರ ಅನುಪಸ್ಥಿಯಲ್ಲಿ ತುರ್ತು ಸಂದರ್ಭದಲ್ಲಿ ಗರ್ಭಿಣಿಯ ಸುರಕ್ಷಿತ ಆರೈಕೆ ಮಾಡಲು ಇಲ್ಲಿನ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ| ಸ್ವರ್ಣಲತಾ ಮತ್ತು ಡಾ| ಪ್ರಿಯಾಂಕ ಜಯದೇವ್, ನರ್ಸಿಂಗ್ ಅಧೀಕ್ಷಕಿ ಶೆರ್ಲಿ ಇವರಿಂದ ವಿಶೇಷ ತರಬೇತಿ ಪಡೆದುಕೊಂಡಿದ್ದು, ಭಾರತದ ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರದ ಸೊಸೈಟಿಗಳ ಒಕ್ಕೂಟ ನಡೆಸುವ ಪರೀಕ್ಷೆಯಲ್ಲಿ 2ರಲ್ಲಿ 19 ಅಂಕ ಪಡೆಯುವ ಮೂಲಕ ಮಾನ್ಯತಾ ಪ್ರಮಾಣಪತ್ರ ಪಡೆದುಕೊಂಡಿದೆ.

ಗರ್ಭಿಣಿ, ಬಾಣಂತಿ ಹಾಗೂ ಮಗುವಿನ ಸುರಕ್ಷತೆಗೆ ಹೆಚ್ಚಿನ ಆಧ್ಯತೆ ನೀಡುತ್ತಿರುವ ಆಸ್ಪತ್ರೆಗಳಿಗೆ ಈ ಪ್ರಮಾಣಪತ್ರ ನೀಡಲಾಗುತ್ತಿದೆ. ಮಾನ್ಯತಾ ಪ್ರಮಾಣಪತ್ರ ದೊರೆತ ಕರ್ನಾಟಕದ ಕೆಲವೇ ಕೆಲವು ಆಸ್ಪತ್ರೆಗಳಲ್ಲಿ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯು ಒಂದಾಗಿದೆ. ಸತತ 2ನೇ ಬಾರಿ ಮಾನ್ಯತಾ ಪತ್ರ ಪಡೆಯುವಲ್ಲಿ ಯಶಸ್ವಿಯಾದ ಪ್ರಸೂತಿ ವಿಭಾಗದ ಸಿಬ್ಬಂದಿ ಮತ್ತು ನರ್ಸಿಂಗ್ ಅಧೀಕ್ಷಕಿ ಶೆರ್ಲಿ ಇವರ ಕಾರ್ಯವನ್ನು ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಡಾ. ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇವರು ಶ್ಲಾಘಿಸಿದ್ದಾರೆ ಎಂದು ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ತಿಳಿಸಿದರು.

ಮುಂಬೈನ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈ .ಲಿ ಇದರ ಪ್ರಾದೇಶಿಕ ವ್ಯವಸ್ಥಾಪಕ ನರಸಿಂಹಮೂರ್ತಿ. ಎನ್ ಮಾನ್ಯತಾ ಪತ್ರವನ್ನು ಹಸ್ತಾಂತರಿಸಿದರು. ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ| ಸ್ವರ್ಣಲತಾ ಮತ್ತು ಡಾ| ಪ್ರಿಯಾಂಕ ಜಯದೇವ್, ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್ ಪಿ, ನರ್ಸಿಂಗ್ ಅಧೀಕ್ಷಕಿ ಶೆರ್ಲಿ, ಪ್ರಸೂತಿ ವಿಭಾಗದ ನರ್ಸಿಂಗ್ ಸಿಬ್ಬಂದಿಗಳಾದ ಮರಿಯಮ್ಮ ಚಾಕೋ ಮತ್ತು ಸೆಲೆಸ್ಟಿನ್ ಜ್ಯೋತಿ ಉಪಸ್ಥಿತರಿದ್ದರು. ವರದಿ: ನಾರಾಯಣ. ಬಿ

Related posts

ಶಿಬಾಜೆ : ಅರಂಪಾದೆಯಲ್ಲಿ ಕೃಷಿ ತೋಟವನ್ನು ಅರಣ್ಯ ಇಲಾಖೆಯವರು ತೆರವುಗೊಳಿಸಿದ ಹಿನ್ನೆಲೆ, ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ನಾರಾವಿ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಗರ್ಭಕಂಠದ ಕ್ಯಾನ್ಸರ್ ತಡೆಯುವ ಹೆಚ್.ಪಿ.ವಿ ವ್ಯಾಕ್ಷಿನೇಷನ್ ಲಸಿಕಾ ಶಿಬಿರ

Suddi Udaya

ಸಿರಿ ಸಂಸ್ಥೆಯ ವತಿಯಿಂದ ಧರ್ಮಸ್ಥಳದ ಎ.ವಿ. ಶೆಟ್ಟಿ ದಂಪತಿಗಳಿಗೆ ಗೌರವಾರ್ಪಣೆ

Suddi Udaya

ಅಗಳಿ ಪರಿಸರದಲ್ಲಿ ಚಿರತೆ ಓಡಾಟ

Suddi Udaya

ಕೋರಂ ಕೊರತೆ ಹಾಗೂ ಅಧಿಕಾರಿಗಳು ಭಾಗವಹಿಸದ್ದರಿಂದ ಕೊಕ್ಕಡ ಗ್ರಾಮಸಭೆ ಮುಂದೂಡಿಕೆ

Suddi Udaya
error: Content is protected !!