25 C
ಪುತ್ತೂರು, ಬೆಳ್ತಂಗಡಿ
September 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಬೈಂದೂರಿನಲ್ಲಿ ಮಹಾಮಂಡಲೇಶ್ವರ ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜರ ಚಾತುರ್ಮಾಸ್ಯ ವ್ರತಾಚರಣೆಗೆ ವೈಭವದ ಚಾಲನೆ

ಬೆಳ್ತಂಗಡಿ:ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜರವರ ಚಾತುರ್ಮಾಸ್ಯ ವ್ರತಾಚರಣೆಯು ಜುಲೈ 29ರಿಂದ ಸೆಪ್ಟೆಂಬರ್ 14ರವರೆಗೆ ಬೈಂದೂರು ಗೋಳಿಹೊಳೆ ಶ್ರೀ ಬಿಳಿಶಿಲೆ ವಿನಾಯಕ ದೇವಸ್ಥಾನದಲ್ಲಿ ನಡೆಯಲಿದ್ದು, ಬುಧವಾರ ಗುರುಪೂರ್ಣಿಮೆಯ ಶುಭ ಸಂದರ್ಭದಲ್ಲಿ ವಿವಿಧ ವೈದಿಕ ವಿಧಿ-ವಿಧಾನಗಳೊಂದಿಗೆ ಅದ್ದೂರಿಯಾಗಿ ಚಾಲನೆ ದೊರೆಯಿತು.

ಬೆಳಿಗ್ಗೆ ಶ್ರೀ ಬಿಳಿಶಿಲೆ ವಿನಾಯಕ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವ್ರತ ಸಂಕಲ್ಪದ ಅಂಗವಾಗಿ ರಾಮತಾರಕ ಯಜ್ಞ ನೆರವೇರಿತು. ಬಳಿಕ ಬೈಂದೂರು ಶ್ರೀ ಸೇನೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಅಲ್ಲಿಂದ ಶ್ರೀಗಳ ಪುರಪ್ರವೇಶದ ಭವ್ಯ ಮೆರವಣಿಗೆ ನಡೆದು, ನಂತರ ವ್ಯಾಸಪೀಠಾರೋಹಣ, ಧರ್ಮಸಭೆ, ಗುರುಪಾದುಕಾ ಪೂಜೆ ಹಾಗೂ ಶ್ರೀಗಳ ಆಶೀರ್ವಚನ ಕಾರ್ಯಕ್ರಮಗಳು ಭಕ್ತಿಭಾವದಿಂದ ಜರುಗಿದವು.

ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್,ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಹರೀಶ್ ಪೂಂಜ, ಮಾಜಿ ಸಚಿವ ಮಂಕಾಳ ವೈದ್ಯ,ಶಾಸಕರಾದ ಯಶ್‌ಪಾಲ್ ಸುವರ್ಣ, ಡಾ. ವೈ. ಭರತ್ ಕುಮಾರ್ ಶೆಟ್ಟಿ,ಗುರ್ಮೆ ಸುರೇಶ್ ಶೆಟ್ಟಿ,ಮಾಜಿ ಶಾಸಕರಾದ ಸಂಜೀವ ಮಠಂದೂರು,ಸುನಿಲ್ ನಾಯ್ಕ್, ಗೆಜ್ಜೆಗಿರಿ ಕ್ಷೇತ್ರದ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ. ಪುಷ್ಪಗಿರಿ, ಬಿಜೆಪಿ ಪ್ರಭಾರಿ ಜಯಂತ್ ಕೋಟ್ಯಾನ್, ಚಾತುರ್ಮಾಸ್ಯ ವ್ರತಾಚರಣೆ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಗುರುರಾಜ್ ಗಂಟಿಹೊಳೆ, ಗೌರವಾಧ್ಯಕ್ಷ ಕೆ. ಗೋಪಾಲ ಪೂಜಾರಿ, ಸಂಚಾಲಕ ಶಿವರಾಜ್ ಪೂಜಾರಿ, ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಎಲ್. ಪೂಜಾರಿ ಹಾಗೂ ಅಶೋಕ್ ಪೂಜಾರಿ, ಅರ್ಚಕ ವಾಸುದೇವ ಹೊಳ್ಳ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ರಾಜಕೀಯ ನಾಯಕರು, ದೇವಸ್ಥಾನದ ಟ್ರಸ್ಟಿಗಳು, ಶ್ರೀ ರಾಮ ಕ್ಷೇತ್ರ ಸಮಿತಿ ಹಾಗೂ ಚಾತುರ್ಮಾಸ್ಯ ಸಮಿತಿ ಪದಾಧಿಕಾರಿಗಳು, ಸದಸ್ಯರು ಮತ್ತು ಅಪಾರ ಸಂಖ್ಯೆಯ ಭಕ್ತರು ಭಾಗವಹಿಸಿದ್ದರು.

ಕಾರ್ಯಕ್ರಮದ ಪ್ರಾಸ್ತಾವಿಕವನ್ನು ಉಪನ್ಯಾಸಕ ಕೇಶವ ಬಂಗೇರ ಅವರು ನೆರವೇರಿಸಿದರು. ಬಳಿಕ ಮಂತ್ರಾಕ್ಷತೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು.

Related posts

ರಾಜ್ಯ ಮಟ್ಟದ ಪುರುಷರ ನೆಟ್ ಬಾಲ್ ಪಂದ್ಯಾಟ : ಎಸ್.ಡಿ.ಎಂ ತಂಡಕ್ಕೆ ಪ್ರಶಸ್ತಿ

Suddi Udaya

ರೆಖ್ಯ: 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಮತ ಚಲಾವಣೆ

Suddi Udaya

ವೈಬ್ರೆಂಟ್ ಪ.ಪೂ. ಕಾಲೇಜಿನ ಕನ್ನಡ ಉಪನ್ಯಾಸಕ ನಿಕೇತ್ ಮೋಹನ್ ದಾಸ್ ಶೆಟ್ಟಿರವರಿಗೆ ಅತ್ಯುತ್ತಮ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ

Suddi Udaya

ಧರ್ಮಸ್ಥಳ ಯೂನಿಯನ್ ಬ್ಯಾಂಕ್ ಎಟಿಎಂ ಬಳಿ, ನಿಲ್ಲಿಸಿದ್ದ ರೂ.1.50 ಲಕ್ಷ ಮೌಲ್ಯದ ಸ್ಪ್ಲೆಂಡರ್ ಪ್ಲಸ್ ಮೋಟಾರ್‌ ಸೈಕಲ್‌ ಕಳವು

Suddi Udaya

ಕೊಕ್ರಾಡಿ ಶ್ರೀ ಕೊಡಮಣಿತ್ತಾಯ ದೈವಸ್ಥಾನ ಹಾಗೂ ಬ್ರಹ್ಮಬೈದರ್ಕಳ ಗರಡಿ ಇದರ ಪುನರ್ ಪ್ರತಿಷ್ಠೆ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.2ಲಕ್ಷ ದೇಣಿಗೆ ಹಸ್ತಾಂತರ

Suddi Udaya
error: Content is protected !!