25.6 C
ಪುತ್ತೂರು, ಬೆಳ್ತಂಗಡಿ
September 12, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ನವಚೇತನ ಶಾಲೆಯ ದ್ವಿಗುಣ ಸಾಧನೆ

ವೇಣೂರು: ಬಜಿರೆ, ಪಡ್ಡಂದಡ್ಕ ಹಾಗೂ ನಿಟ್ಟಡೆ ವಲಯದ 14 ವರ್ಷದೊಳಗಿನ ಬಾಲಕ-ಬಾಲಕಿಯರ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ಜುಲೈ 28ರಂದು ವೇಣೂರಿನ ನವಚೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಶಾಲೆಯ ಸಂಚಾಲಕಿ ಸಿಸ್ಟರ್ ಲಿಲ್ಲಿ ಗೋಮ್ಸ್ ಉದ್ಘಾಟಿಸಿ, ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.

ವೇದಿಕೆಯಲ್ಲಿ ಬಜಿರೆ, ಪಡ್ಡಂದಡ್ಕ, ನಿಟ್ಟಡೆ ವಲಯದ ಕ್ರೀಡಾ ಮೇಲ್ವಿಚಾರಕಿ ಹಾಗೂ ತಾಲೂಕು ಗ್ರೇಡ್-2 ಸಂಘದ ಕಾರ್ಯದರ್ಶಿ ಶ್ರೀಮತಿ ಆರತಿ, ಪ್ರಾಥಮಿಕ ತಾಲೂಕು ಘಟಕದ ಅಧ್ಯಕ್ಷ ರಾಜೇಶ್ ನೆಲ್ಯಾಡಿ, ನವಚೇತನ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷೆ ಶ್ರೀಮತಿ ದಿವ್ಯ ಮಹೇಶ್ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ವೀರಾ ಡಿಸೋಜಾ ಉಪಸ್ಥಿತರಿದ್ದು ಪಂದ್ಯಾಟಕ್ಕೆ ಶುಭ ಕೋರಿದರು.

ಪಂದ್ಯಾಟದಲ್ಲಿ 14 ವರ್ಷದೊಳಗಿನ ಬಾಲಕರ ಹಾಗೂ ಬಾಲಕಿಯರ ವಿಭಾಗಗಳಲ್ಲಿ ನವಚೇತನ ಆಂಗ್ಲ ಮಾಧ್ಯಮ ಶಾಲೆಯ ತಂಡಗಳು ಅತ್ಯುತ್ತಮ ಪ್ರದರ್ಶನ ನೀಡಿ ಎರಡೂ ವಿಭಾಗಗಳಲ್ಲಿ ಪ್ರಥಮ ಸ್ಥಾನವನ್ನು ತಮ್ಮದಾಗಿಸಿಕೊಂಡವು. ಈ ಸಾಧನೆಯೊಂದಿಗೆ ಬಾಲಕರ ಹಾಗೂ ಬಾಲಕಿಯರ ತಂಡಗಳು ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದು, ಶಾಲೆಗೆ ಹೆಮ್ಮೆಯ ಕೀರ್ತಿ ತಂದಿವೆ.

Related posts

ಲಾಯಿಲ: ಕನ್ನಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಪಂದ್ಯಾಟ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಜೂ. 23ರಂದು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳ ಮುಂದೆ ಪ್ರತಿಭಟನೆ

Suddi Udaya

ಮಲೆಬೆಟ್ಟು ಹಾ.ಉ. ಸಂಘದ ಆಡಳಿತ ಮಂಡಳಿಯನ್ನುವಜಾಗೊಳಿಸಿ ನೀಡಿದ ಆದೇಶ ರದ್ದು: ಮತ್ತೆ ಅಧಿಕಾರದ ಗದ್ದುಗೆಗೆ ಏರಿದ ಪ್ರಮೋದ್ ಕುಮಾರ್ ಅಧ್ಯಕ್ಷತೆಯ ಆಡಳಿತ ಮಂಡಳಿ

Suddi Udaya

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಪ್ರಥಮ

Suddi Udaya

ಬೆಳ್ತಂಗಡಿ: ಬಸ್ಸಿನಲ್ಲಿ ಮಹಿಳೆಯರ ಬಗ್ಗೆ ಅಶ್ಲೀಲ ಪದ ಬಳಕೆ:ಮೂವರ ಮೇಲೆ ಅಪರಿಚಿತರಿಂದ ಹಲ್ಲೆ; ಪ್ರಕರಣ ದಾಖಲು

Suddi Udaya
error: Content is protected !!