September 14, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ (ಇಂಡಿಯಾ) ಬೆಳ್ತಂಗಡಿ ಕೇಂದ್ರಕ್ಕೆ “ಎಕ್ಸಲೆನ್ಸ್ ಇಂಪ್ಯಾಕ್ಟ್ ಅವಾರ್ಡ್ 2026” ಗೌರವ

ಬೆಳ್ತಂಗಡಿ: ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ (ಇಂಡಿಯಾ) (ACCE(I)) ವತಿಯಿಂದ 2025–26ನೇ ಸಾಲಿನ ಕೇಂದ್ರದ ಅತ್ಯುತ್ತಮ ಚಟುವಟಿಕೆಗಳು, ತಾಂತ್ರಿಕ ಕಾರ್ಯಕ್ರಮಗಳು ಹಾಗೂ ವೃತ್ತಿಪರ ಸೇವೆಗಳನ್ನು ಪರಿಗಣಿಸಿ, ACCE(I) ಬೆಳ್ತಂಗಡಿ ಕೇಂದ್ರಕ್ಕೆ ಪ್ರತಿಷ್ಠಿತ “ಎಕ್ಸಲೆನ್ಸ್ ಇಂಪ್ಯಾಕ್ಟ್ ಅವಾರ್ಡ್ 2026 (Centre Activities)” ಪ್ರದಾನ ಮಾಡಲಾಗಿದೆ.

ಈ ಪ್ರಶಸ್ತಿಯನ್ನು ಕೊಯಂಬತ್ತೂರಿನಲ್ಲಿ ನಡೆದ ACCE(I)ಯ 41ನೇ ವಾರ್ಷಿಕ ಮಹಾಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷರು ರಾಜೇಂದ್ರ ಕಲ್ಬಾವಿ ಹಾಗೂ ಗಣ್ಯರ ಸಮ್ಮುಖದಲ್ಲಿ ಬೆಳ್ತಂಗಡಿ ಕೇಂದ್ರದ ಪ್ರತಿನಿಧಿಗಳಿಗೆ ಪ್ರದಾನಿಸಲಾಯಿತು.
2025–26ನೇ ಸಾಲಿನಲ್ಲಿ ಬೆಳ್ತಂಗಡಿ ಕೇಂದ್ರವು ತಾಂತ್ರಿಕ ಉಪನ್ಯಾಸಗಳು, ಕಾರ್ಯಾಗಾರಗಳು, ಇಂಜಿನಿಯರ್ಸ್ ಡೇ ಆಚರಣೆ, ಜಾಗೃತಿ ಕಾರ್ಯಕ್ರಮಗಳು, ಸಾಮಾಜಿಕ ಸೇವಾ ಚಟುವಟಿಕೆಗಳು ಹಾಗೂ ವೃತ್ತಿಪರ ಅಭಿವೃದ್ಧಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಿ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ.

ಈ ಗೌರವವು ಕೇಂದ್ರದ ಎಲ್ಲಾ ಸದಸ್ಯರು, ಪದಾಧಿಕಾರಿಗಳು ಹಾಗೂ ಸಹಕರಿಸಿದ ಪ್ರಾಯೋಜಕರ ತಂಡದ ಸಮರ್ಪಿತ ಸೇವೆಗೆ ಸಂದ ಮಾನ್ಯತೆಯಾಗಿದೆ ಎಂದು ಕೇಂದ್ರದ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಪದಾಧಿಕಾರಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

Related posts

ಮುಳಿಕ್ಕಾರ್ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಉಮಾನಾಥ್, ಕಾರ್ಯದರ್ಶಿ ಶಾಂಭವಿ ಆಯ್ಕೆ

Suddi Udaya

ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಈದ್-ಉಲ್-ಫಿತರ್ ಆಚರಣೆ

Suddi Udaya

ಧರ್ಮಸ್ಥಳದಲ್ಲಿ 53ನೇ ವರ್ಷದ ಪುರಾಣ ಕಾವ್ಯ ವಾಚನ – ಪ್ರವಚನ ಉದ್ಘಾಟನೆ

Suddi Udaya

ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಅರ್ಧ ಏಕಾಹ ಭಜನಾ ಕಾರ್ಯಕ್ರಮ: ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು: ಶ್ರೀ ಧ. ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಶಿಕ್ಷಕ ಸನತ್ ಕುಮಾರ್ ಬೀಳ್ಕೊಡುಗೆ ಸಮಾರಂಭ

Suddi Udaya

ದ.ಕ. ಸಹಕಾರಿ ಹಾಲು ಒಕ್ಕೂಟದಿಂದ ನಂದಿನಿ ಪ್ರಿಮಿಯಮ್ ಪ್ರೊಬಯಾಟಿಕ್ ಮೊಸರು ಬಿಡುಗಡೆ

Suddi Udaya
error: Content is protected !!