24.7 C
ಪುತ್ತೂರು, ಬೆಳ್ತಂಗಡಿ
September 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯ ವಿದ್ಯಾರ್ಥಿಗಳಿಗೆ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಮಾಣಪತ್ರ

ಉಜಿರೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಜುಲೈ 29, 2026ರಂದು ಜಿಲ್ಲಾ ತರಬೇತಿ ಕೇಂದ್ರ, ಶಿವನಗರ, ಪಿಲಿಕುಳದಲ್ಲಿ ನಡೆದ ತೃತೀಯ ಸೋಪಾನ, ಸುವರ್ಣ ಗರಿ, ತೃತೀಯ ಚರಣ ಹಾಗೂ ಚತುರ್ಥ ಚರಣ, ಹೀರಖ್ ಗರಿ ಪ್ರಮಾಣಪತ್ರ ವಿತರಣಾ ಸಮಾರಂಭದಲ್ಲಿ ಉಜಿರೆ ಎಸ್.ಡಿ.ಎಮ್. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯ ಕಬ್, ಬುಲ್‌ಬುಲ್, ಸ್ಕೌಟ್ಸ್ ಹಾಗೂ ಗೈಡ್ಸ್ ವಿದ್ಯಾರ್ಥಿಗಳು ವಿವಿಧ ಹಂತಗಳ ಪ್ರಮಾಣಪತ್ರಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.

ಕಾರ್ಯಕ್ರಮದಲ್ಲಿ ಶ್ರೀಮತಿ ಮೀನಾಕ್ಷಿ ಆರ್ಯ ಆಯುಕ್ತರು ಮಂಗಳೂರು ವಿಭಾಗ, ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರಾದ ಶಶಿಧರ್, ಮೈ ಭಾರತ್‌ನ ಸಹಾಯಕ ಆಯುಕ್ತರಾದ ಶ್ರೀ ಉಲ್ಲಾಸ್, ರಾಮಾಂಜೂರು ಬಂಟರ ಸಂಘದ ಅಧ್ಯಕ್ಷ ಸಂತೋಷ್, ಸುರತ್ಕಲ್ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಶ್ರೀ ದಯಾಕರ್, ಜಿಲ್ಲಾ ಸಂಸ್ಥೆಯ ಉಪಾಧ್ಯಕ್ಷರಾದ ಶ್ರೀನಿವಾಸ್ ಪೂಜಾರಿ, ಶ್ರೀಮತಿ ಸೆಲ್ಫಿ ಜಿನ ಫೆರ್ನಾಂಡಿಸ್, ಜಿಲ್ಲಾ ತರಬೇತಿ ಆಯುಕ್ತೆ (ಗೈಡ್ಸ್) ಶ್ರೀಮತಿ ಜಯಶ್ರೀ, ಜಿಲ್ಲಾ ಸ್ಕೌಟ್ ಆಯುಕ್ತರಾದ ಬಿ.ಎಂ. ತುಂಬೆ, ರಾಜ್ಯ ಸಹ ಸಂಘಟನಾ ಆಯುಕ್ತರಾದ ಶ್ರೀ ಭರತ್ ರಾಜ್, ಗೈಡ್ ಜಿಲ್ಲಾ ಆಯುಕ್ತೆ ಶ್ರೀಮತಿ ವಿಮಲರಂಗಯ್ಯ, ಜಿಲ್ಲಾ ಕಾರ್ಯದರ್ಶಿ ಪ್ರತಿಮ್ ಕುಮಾರ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ್ ಕಿಣಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

ವೇದಿಕೆಯಲ್ಲಿದ್ದ ಗಣ್ಯರು ಉಜಿರೆ ಎಸ್.ಡಿ.ಎಮ್. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯ ವಿದ್ಯಾರ್ಥಿಗಳಿಗೆ ತೃತೀಯ ಸೋಪಾನ, ಸುವರ್ಣ ಗರಿ, ತೃತೀಯ ಚರಣ ಹಾಗೂ ಚತುರ್ಥ ಚರಣ, ಹೀರಖ್ ಗರಿ ಪ್ರಮಾಣಪತ್ರಗಳನ್ನು ವಿತರಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲರು, ಶಿಕ್ಷಕ ವೃಂದ ಹಾಗೂ ಪಾಲಕರು ವಿದ್ಯಾರ್ಥಿಗಳ ಸಾಧನೆಯನ್ನು ಶ್ಲಾಘಿಸಿ ಅಭಿನಂದಿಸಿದರು. ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಇನ್ನಷ್ಟು ಸಾಧನೆ ಮಾಡಿ ಶಾಲೆಗೆ ಕೀರ್ತಿ ತರಲಿ ಎಂದು ಶುಭ ಹಾರೈಸಿದರು.

Related posts

ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

2000 ರೂ ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ ಬಿಐ ಸೂಚನೆ

Suddi Udaya

ಕನ್ಯಾಡಿ ಯಕ್ಷಭಾರತಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಕನ್ನಡ ರಥ ಯಾತ್ರೆಗೆ ಬೆಳ್ತಂಗಡಿ ತಾಲೂಕಿಗೆ ಆದ್ದೂರಿಯ ಸ್ವಾಗತ: ಮುಖ್ಯ ರಸ್ತೆಯ ಮೂಲಕ ಮೆರವಣಿಗೆ- ಬಸ್‌ನಿಲ್ದಾಣದಲ್ಲಿ ಕನ್ನಡ ಮಾತೆಗೆ ಪುಷ್ಪಾರ್ಜನೆ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ಘಟಕ ವತಿಯಿಂದ ದಯಾ ಶಾಲೆಯ ವಿಶೇಷ ಚೇತನ ಮಕ್ಕಳೊಂದಿಗೆ ಮಕ್ಕಳ ದಿನಾಚರಣೆ

Suddi Udaya
error: Content is protected !!