September 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಲ್.ಸಿ. ಆರ್. ಇಂಡಿಯನ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆ.

ಕಕ್ಯಪದವು : ಪಿ.ಎಂ. ಶ್ರೀ ಸರಕಾರಿ ಪ್ರೌಢಶಾಲೆ ದಡ್ಡಲಕಾಡು ಇಲ್ಲಿ ಆಯೋಜಿಸಿದ ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ಎಲ್. ಸಿ. ಆರ್. ಇಂಡಿಯನ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಸ್ಪರ್ಧೆಯಲ್ಲಿ ಆರನೇ ತರಗತಿಯ ತಂಜಿಳ್ ಅಹಮದ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದಿರುತ್ತಾನೆ. ಹಾಗೂ ರಿಷಿಕಾ ಮತ್ತು ದಿಶಾ. ವೈ. ಇವರು ದ್ವಿತೀಯ ಸ್ಥಾನ ಪಡೆದಿರುತ್ತಾರೆ. ವಿದ್ಯಾರ್ಥಿಗಳಿಗೆ ಕರಾಟೆ ತರಬೇತುದಾರರಾದ ಅಶೋಕ್ ಆಚಾರ್ಯ ತರಬೇತಿ ನೀಡಿರುತ್ತಾರೆ.

ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ, ಸಂಯೋಜಕರಾದ ಯಶವಂತ್ ಜಿ ನಾಯಕ್ ಹಾಗೂ ಮುಖ್ಯೋಪಾಧ್ಯಾಯನಿಯಾದ ಶ್ರೀಮತಿ ವಿಜಯ. ಕೆ. ಇವರು ಅಭಿನಂದಿಸಿ, ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲೂ ಇದೇ ರೀತಿ ಸಾಧನೆ ಮಾಡುವಂತೆ ಶುಭ ಹಾರೈಸಿದರು.

Related posts

ಗುರುವಾಯನಕೆರೆ ಶಕ್ತಿನಗರ ಬಳಿ ಅಪಘಾತ- ಬೈಕ್‌ ಸವಾರನಿಗೆ ಗಾಯ

Suddi Udaya

ಉಜಿರೆ: ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಹತ್ವದ ಸಭೆ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನ ಸಮಾಜಕಾರ್ಯ ವಿಭಾಗ ಹಾಗೂ ಸ್ತ್ರೀ ಶಕ್ತಿ ಪಡಂಗಡಿ ಇದರ ಸಹಯೋಗದಿಂದ ಮುಟ್ಟಿನ ಕಪ್ ಬಳಕೆ ಮತ್ತು ಸುರಕ್ಷತೆಯ ಅರಿವು ಕಾರ್ಯಕ್ರಮ

Suddi Udaya

ನ.23 : ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಲಾಯಿಲ ಇದರ ಬೆಳ್ಳಿ ಹಬ್ಬ ಸಂಭ್ರಮ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ನ ಪದಗ್ರಹಣ ಸಮಾರಂಭ

Suddi Udaya

ಧರ್ಮಸ್ಥಳ: ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಅವರ ಕುಟುಂಬಸ್ಥರೊಂದಿಗೆ ಮತದಾನ

Suddi Udaya
error: Content is protected !!