September 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್ ಡಿ ಎಂ ಪ.ಪೂ ಕಾಲೇಜಿನಲ್ಲಿ ಗುರುಪೂರ್ಣಿಮಾ ಕಾರ್ಯಕ್ರಮ

ಉಜಿರೆ: ‘ ಭಾರತೀಯ ಪರಂಪರೆಯಲ್ಲಿ ಪ್ರಾಚೀನ ಕಾಲದಿಂದಲೂ ಗುರುವಿಗೆ ವಿಶೇಷ ಸ್ಥಾನ ನೀಡಲಾಗಿದೆ. ತಂದೆ ತಾಯಿಯನ್ನು ಬಿಟ್ಟರೆ ಗುರುವಿಗೆ ಉನ್ನತ ಸ್ಥಾನ ನೀಡಲಾಗಿದೆ. ಹಿಂದೆ ಗುರುಶಿಷ್ಯ ಪರಂಪರೆಯ ಅವಿಚ್ಛಿನ್ನ ಪದ್ಧತಿ ಇತ್ತು. ಈಗ ಅದು ಇಲ್ಲದಿದ್ದರೂ ವಿದ್ಯಾರ್ಥಿಗಳು ಗುರುಗಳನ್ನು ಸ್ಮರಿಸುವ ಕೆಲಸ ಮಾಡಬೇಕು.

ವೇದವ್ಯಾಸರನ್ನು ಭಾರತದ ಪ್ರಥಮ ಗುರುವೆಂದು ಗುರುಪೂರ್ಣಿಮಾ ದಿನದಂದು ಅವರನ್ನು ಸ್ಮರಿಸುವ ಕಾರ್ಯ ಸ್ತುತ್ಯರ್ಹ ‘ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ. ಹೇಳಿದರು.

ಇವರು ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಂ ಆಯೋಜಿಸಿದ ಗುರುಪೂರ್ಣಿಮಾ ಕಾರ್ಯಕ್ರಮದಲ್ಲಿ ವೇದವ್ಯಾಸರ ಬಗ್ಗೆ ಭಿತ್ತಿಪತ್ರಿಕೆ ಅನಾವರಣಗೊಳಿಸಿ ಶುಭ ಹಾರೈಸಿದರು. ನಂತರ ಸಂಸ್ಕೃತ ಭಾಷಾ ವಿದ್ಯಾರ್ಥಿಗಳು ವಿವಿಧ ತರಗತಿಗಳಲ್ಲಿ ಗುರುಪೂರ್ಣಿಮಾದ ಮಹತ್ವ ಹಾಗೂ ವೇದವ್ಯಾಸರ ಬಗ್ಗೆ ಮಾಹಿತಿಗಳನ್ನು ನೀಡಿದರು. ಹಾಗೆಯೇ ಎಲ್ಲ ಉಪನ್ಯಾಸಕರಿಗೆ ಶುಭಾಶಯ ಪತ್ರದೊಂದಿಗೆ ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನಕುಮಾರ್ ಐತಾಳ್ ಹಾಗೂ ಸಂಸ್ಕೃತ ಸಂಘದ ಅಧ್ಯಕ್ಷೆ ಅಕ್ಷರ , ಪ್ರಧಾನ ಕಾರ್ಯದರ್ಶಿ ಸ್ಪೂರ್ತಿ , ಸಹ ಕಾರ್ಯದರ್ಶಿ ಟಿ.ಪಿ ಹಿತಾ, ಸಂಸ್ಕೃತ ಅಂತರಾಧ್ಯನ ವೃತ್ತಂ ಇದರ ಸಂಯೋಜಕರಾದ ಕವನಾ ಸಿ ಜೈನ್ ಹಾಗೂ ಭೂಮಿಕಾ ಎಸ್.ಕೆ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಅಹಲ್ಯಾ ಬೆಂಡೆ ನಿರೂಪಿಸಿ ವಂದಿಸಿದರು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ ದುರ್ಗಾದೇವಿ ದೇವಸ್ಥಾನದ ನಾಗನ ಕಟ್ಟೆಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ

Suddi Udaya

ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ನಾರಾಯಣ್ ಶೆಟ್ಟಿ ರವರಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ಆರ್ಥಿಕ ನೆರವು

Suddi Udaya

ಕೊಕ್ಕಡ ಸ. ಪ್ರೌಢಶಾಲೆಯಲ್ಲಿ ಅ.3 ರಿಂದ ಅ.9 ರವರೆಗೆ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya

ಭಾರೀ ಮಳೆಗೆ ಶಿಶಿಲ ಸೇತುವೆ ಮುಳುಗಡೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 62.6 ಮತದಾನ

Suddi Udaya
error: Content is protected !!