September 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಶೇಖರ ಕುಕ್ಕೇಡಿ ಅವರಿಂದ ಅರ್ಜಿ ಸಲ್ಲಿಕೆ

ಬೆಳ್ತಂಗಡಿ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಯುವ ಮುಖಂಡ ಮಾಜಿ ಜಿಲ್ಲಾ ಪಂಚಾಯತು ಸದಸ್ಯ ಶೇಖರ ಕುಕ್ಕೇಡಿ ಅವರು ಅರ್ಜಿ ಸಲ್ಲಿಸಿದ್ದು ಅಧ್ಯಕ್ಷ ಆಯ್ಕೆಯ ಓಟದ ಮುಂಚೂಣಿಯಲ್ಲಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಸಮಿತಿಯ ಎಸ್.ಸಿ ಘಟಕದ ಜಿಲ್ಲಾಧ್ಯಕ್ಷರಾಗಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರೂ ಆಗಿರುವ ಶೇಖರ ಕುಕ್ಕೇಡಿ ಅವರು ಜಿಲ್ಲಾ ಪಂಚಾಯತು ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ ಜನಪ್ರಿಯ ನಾಯಕರಾಗಿದ್ದಾರೆ. ಸಾಮಾನ್ಯ ಕಾರ್ಯಕರ್ತನಾಗಿ ಕಾಂಗ್ರೆಸ್ ಪಕ್ಷದಲ್ಲಿ ದುಡಿದು ನಾಯಕತ್ವಕ್ಕೆ ಏರಿದ ಶೇಖರ ಕುಕ್ಕೇಡಿ ಅವರು ಸದಾ ಕಾರ್ಯಕರ್ತರೊಂದಿಗೆ ಗುರುತಿಸಿಕೊಂಡಿರುವ ನಾಯಕ, ಜಿಲ್ಲಾ ಎಸ್.ಸಿ. ಘಟಕದ ಅಧ್ಯಕ್ಷರಾಗಿ ಜಿಲ್ಲೆಯಾದ್ಯಂತ ಓಡಾಟ ನಡೆಸಿ ಪಕ್ಷ ಸಂಘಟನೆ ಮಾಡಿರುವ ಅನುಭವವೂ ಅವರಿಗಿದೆ.

ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಹಲವಾರು ಅರ್ಜಿ ಸಲ್ಲಿಸಿದ್ದು ಪಕ್ಷದ ಹೈಕಮಾಂಡ್ ಅಂತಿಮ ನಿರ್ಧಾರಕೈಗೊಳ್ಳಲಿದೆ. ಈಗ ಜಿಲ್ಲಾ ಅಧ್ಯಕ್ಷರಾಗಿರುವ ಕೆ.ಹರೀಶ್ ಕುಮಾರ್ ಅವರು ಕಳೆದ 9 ವರ್ಷಗಳಿಂದ ಪಕ್ಷದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದು ಇದೀಗ ಹೊಸಅಧ್ಯಕ್ಷರ ಆಯ್ಕೆಗೆ ಪಕ್ಷ ಮುಂದಾಗಿದೆ.

Related posts

ಬೆಳ್ತಂಗಡಿ: ನೇಮಿರಾಜ್ ಬುಣ್ಣು ನಿಧನ

Suddi Udaya

ಭಾರೀ ಮಳೆ: ತೋಟತ್ತಾಡಿ ಸ.ಉ. ಹಿ. ಪ್ರಾ. ಶಾಲೆಯ ತಡೆಗೋಡೆ ಕುಸಿತ

Suddi Udaya

ಬ್ರೈಟ್ ಹೊರೈಝನ್ ಶಾಲೆಯಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಾರಾವಿ ಸೂರ್ಯನಾರಾಯಣ ದೇವಸ್ಥಾನಕ್ಕೆ ದೇಣಿಗೆ ಹಸ್ತಾಂತರ

Suddi Udaya

ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜಾರವರಿಗೆ ಮಡಿವಾಳ ಸಮಾಜ ಸಂಘದಿಂದ ಸನ್ಮಾನ

Suddi Udaya

ಕೊಕ್ಕಡ: ಪದ್ಮನಾಭ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya
error: Content is protected !!