24.7 C
ಪುತ್ತೂರು, ಬೆಳ್ತಂಗಡಿ
September 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನಿಂದ ಕಾರ್ಗಿಲ್ ವಿಜಯ್ ದಿವಸ್ ಆಚರಣೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಶ್ರೀ ಮಂಜುನಾಥ ದಳದ ವತಿಯಿಂದ ಕಾರ್ಗಿಲ್ ವಿಜಯ್ ದಿವಸ್‌ನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾರತೀಯ ಸೇನೆಯ ನಿವೃತ್ತ ಮೇಜರ್ ಜನರಲ್ ಶ್ರೀ ಎಂ. ವಿ. ಭಟ್ ಅವರು ಭಾಗವಹಿಸಿದ್ದರು. ದೀಪ ಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು, ಸ್ಕೌಟ್ಸ್ ಸಂಸ್ಥೆಯ ಸಂಸ್ಥಾಪಕರಾದ ಬೇಡನ್ ಪಾವೆಲ್, ಭಾರತ ಮಾತೆ ಹಾಗೂ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಯೋಧರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಅರ್ಪಿಸಿದರು. ಬಳಿಕ ಕಾರ್ಗಿಲ್ ಯುದ್ಧದಲ್ಲಿ ಪ್ರಾಣತ್ಯಾಗ ಮಾಡಿದ ವೀರ ಯೋಧರ ಸ್ಮರಣಾರ್ಥ ಮೌನಾಚರಣೆ ನಡೆಸಲಾಯಿತು.

ತಮ್ಮ ಪ್ರೇರಣಾದಾಯಕ ಭಾಷಣದಲ್ಲಿ ಕಾರ್ಗಿಲ್ ಯುದ್ಧದ ಮಹತ್ವ, ಭಾರತೀಯ ಸೇನೆಯ ಶಿಸ್ತು, ಸೇವಾ ಮನೋಭಾವ ಹಾಗೂ ದೇಶರಕ್ಷಣೆಯಲ್ಲಿ ಸೈನಿಕರ ಪಾತ್ರವನ್ನು ವಿವರಿಸಿದರು. ವಿದ್ಯಾರ್ಥಿಗಳಲ್ಲಿ ದೇಶಭಕ್ತಿ, ಶಿಸ್ತು ಮತ್ತು ಸೇವಾ ಮನೋಭಾವ ಬೆಳೆಸಿಕೊಳ್ಳುವಂತೆ ಕರೆ ನೀಡಿದ ಅವರು, ಹೆಚ್ಚಿನ ಯುವಕರು ಭಾರತೀಯ ಸೇನೆಗೆ ಸೇರಿ ರಾಷ್ಟ್ರಸೇವೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಪ್ರೇರೇಪಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಎಂ. ಆರ್. ವಹಿಸಿದ್ದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಯೋಜಕ ಶಿಕ್ಷಕಿ ಹಾಗೂ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ ಪೂಜಾರಿ ಕಾರ್ಯಕ್ರಮವನ್ನು ಸಂಘಟಿಸಿ, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಳಗಳಿಗೆ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಸ್ಕಾರ್ಫ್ ಧರಿಸುವ ಮೂಲಕ ಅಧಿಕೃತವಾಗಿ ಸ್ವಾಗತಿಸಿ ಅಭಿನಂದಿಸಲಾಯಿತು.

ಕಾರ್ಯಕ್ರಮವನ್ನು ಗೈಡ್ ವಿದ್ಯಾರ್ಥಿನಿ ಆದ್ಯಾ ಶಣೈ ನಿರೂಪಿಸಿದರು. ಅನಘ ಸ್ವಾಗತಿಸಿ, ಅತಿಥಿಗಳ ಪರಿಚಯವನ್ನು ಗೈಡ್ ವಿಧ್ಯಾರ್ಥಿ ದಿಷಾ ಡಿ ಎ , ಗೈಡ್ ವಿಧ್ಯಾರ್ಥಿ ಧಾತ್ರಿ ವಂದನಾರ್ಪಣೆ ಸಲ್ಲಿಸಿದರು.

ಕಾರ್ಯಕ್ರಮದ ಯಶಸ್ಸಿಗೆ ಸ್ಕೌಟ್ ಮತ್ತು ಗೈಡ್ ಶಿಕ್ಷಕರಾದ ನೀತಾ ಕೆ. ಎಸ್., ಜಯಲಕ್ಷ್ಮಿ, ಪ್ರಮೀಳಾ ಎನ್., ಗೀತಾ ಪಿ., ರಮ್ಯಾ ಬಿ. ಎಸ್., ಸೌಮ್ಯ, ಅಮಿತ್, ಕಾರುಣ್ಯ, ಸಮಾತ, ಪುಷ್ಪಲತಾ, ಮೋಹಿನಿ, ಜಯರಾಮ್ ಹಾಗೂ ಮಂಜುನಾಥ್ ರವರು ಸಹಕರಿಸಿದರು.

Related posts

ಪದ್ಮಂಜ ಸೇವಾ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬಿಕೆ ಹರಿಪ್ರಸಾದ್ ರವರಿಗೆ ಉಪಮುಖ್ಯಮಂತ್ರಿ ಸ್ಥಾನಮಾನ ನೀಡುವಂತೆ ಬೆಳ್ತಂಗಡಿ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷರು,ನಿವೃತ್ತ ಎಸ್.ಪಿ ಪೀತಾಂಬರ ಹೇರಾಜೆ ಒತ್ತಾಯ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ನೀಟ್ ಸಾಧಕ ಆದಿತ್ ಜೈನ್ ಗೆ ಸನ್ಮಾನ

Suddi Udaya

ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಲಾಯಿಲ ಚಂದ್ರಿಕಾ ರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಗುರುವಾಯನಕೆರೆ ವಿದ್ವತ್ ಕಾಲೇಜಿನಲ್ಲಿ ಕಿಚನಾಮಿಕ್ಸ್ ಸಡಗರ

Suddi Udaya

ನಡ ಸ.ಹಿ. ಪ್ರಾ. ಶಾಲೆಯ ಶತಮಾನೋತ್ಸವ ಸಮಿತಿ ವತಿಯಿಂದ ಉದ್ಯಮಿ ಮೋಹನ್ ಕುಮಾರ್ ರವರಿಗೆ ಗೌರವಾರ್ಪಣೆ

Suddi Udaya
error: Content is protected !!