September 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ಎಚ್‌.ಪಿ.ವಿ. ಲಸಿಕೆ ಕುರಿತು ಜಾಗೃತಿ ಕಾರ್ಯಕ್ರಮ

ಉಜಿರೆ: ಶಾಲಾ ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರಿಗೆ ಎಚ್‌.ಪಿ.ವಿ. (HPV) ಲಸಿಕೆಯ ಮಹತ್ವ, ಗರ್ಭಕಂಠದ ಕ್ಯಾನ್ಸರ್ ತಡೆ ಹಾಗೂ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಉಜಿರೆ ಎಸ್.ಡಿ.ಎಮ್. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ “ಎಚ್‌.ಪಿ.ವಿ. ಲಸಿಕೆ ಕುರಿತು ಜಾಗೃತಿ ಕಾರ್ಯಕ್ರಮ” ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಬ್ಲಾಕ್ ಹೆಲ್ತ್ ವಿಭಾಗದ ಆರೋಗ್ಯ ಸಿಬ್ಬಂದಿ ಶ್ರೀಮತಿ ಅಮ್ಮಿ ಎ. ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಬಾಲಕಿಯರಿಗೆ ಎಚ್‌.ಪಿ.ವಿ. ಲಸಿಕೆ ನೀಡುವ ಅಗತ್ಯತೆ, ಲಸಿಕೆಯ ಸುರಕ್ಷತೆ, ಗರ್ಭಕಂಠದ ಕ್ಯಾನ್ಸರ್ ತಡೆ ಹಾಗೂ ಆರೋಗ್ಯ ಸಂರಕ್ಷಣೆಯ ಕುರಿತು ಮಾಹಿತಿ ನೀಡಿದರು. ವಿದ್ಯಾರ್ಥಿನಿಯರು ಹಾಗೂ ಪೋಷಕರು ಕೇಳಿದ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಿ ವೈದ್ಯಕೀಯ ಮಾರ್ಗದರ್ಶನ ನೀಡಿದರು.

ಶಾಲೆಯ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ. ಅವರು ಅಧ್ಯಕ್ಷೀಯ ನುಡಿಗಳನ್ನಾಡಿ, ವಿದ್ಯಾರ್ಥಿನಿಯರ ಆರೋಗ್ಯ ರಕ್ಷಣೆಗೆ ಇಂತಹ ಜಾಗೃತಿ ಕಾರ್ಯಕ್ರಮಗಳು ಅತ್ಯಂತ ಅವಶ್ಯಕವೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜಾಗೃತಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು. ಕಾರ್ಯಕ್ರಮದ ಸಂಯೋಜಕರಾಗಿ ಶಿಕ್ಷಕಿ ಶ್ರೀಮತಿ ಕಲ್ಯಾಣಿ ಎಂ. ರಾವ್ ಕಾರ್ಯನಿರ್ವಹಿಸಿದರು. ಶ್ರೀಮತಿ ಸುಜನಾ ವಾಲ್ತಾಜೆ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಬೆಳ್ತಂಗಡಿ : ಆಡಳಿತ ಸೌಧದಲ್ಲಿ ಸರ್ವಜ್ಞ ಜಯಂತಿ ಆಚರಣೆ

Suddi Udaya

ಅ.17: ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಂಘಟನೆಯ ವತಿಯಿಂದ ಅಂಗಾಂಗ ದಾನ ನೋಂದಣಿ ಕಾರ್ಯಕ್ರಮ ಮತ್ತು ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಹಾಗೂ ಕಾರ್ಗಿಲ್ ವೀರ ಯೋಧರಿಗೆ ಗೌರವ ಸಮರ್ಪಣೆ

Suddi Udaya

ಎಕ್ಸೆಲ್ ಗುರುವಾಯನಕೆರೆಗೆ 15 ಲಕ್ಷ ಲೀಟರ್ ಸಾಮರ್ಥ್ಯದ ಎಸ್ ಟಿ ಪಿ ರಚನೆಗೆ ಭೂಮಿ ಪೂಜೆ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ 137.95 ಕೋಟಿ ವ್ಯವಹಾರ, ರೂ. 53.26 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ 9.50 ಡಿವಿಡೆಂಟ್

Suddi Udaya

ಕಾಂಗ್ರೇಸ್‌ ಆಡಳಿತ ಸರಕಾರ ರೈತಾಪಿ ವರ್ಗವನ್ನು ನಿರ್ಲಕ್ಷಿಸಿದೆ: ಬಿಜೆಪಿ ಸರಕಾರ ತಂದಿದ್ದ ಹಲವಾರು ರೈತ ಕಲ್ಯಾಣ ಯೋಜನೆಗಳನ್ನು ಕೈ ಬಿಟ್ಟಿರುವುದು ಖಂಡನೀಯ: ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya
error: Content is protected !!