24.7 C
ಪುತ್ತೂರು, ಬೆಳ್ತಂಗಡಿ
September 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರಾಟೆ ಕ್ರೀಡಾಕೂಟ: ಬೆಳ್ತಂಗಡಿ ಎಸ್ ಡಿ ಎಮ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಕ್ರೀಡಾಕೂಟ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಂಗಾಡಿಯಲ್ಲಿ ಜರಗಿತ್ತು. ಪ್ರಾಥಮಿಕ ಶಾಲಾ ಬಾಲಕರ ವಿಭಾಗದ ಕರಾಟೆ ಕ್ರೀಡಾಕೂಟದಲ್ಲಿ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿ ಮೊಹಮ್ಮದ್ ಅಫ್ನಾನ್ ಪ್ರಥಮ ಸ್ಥಾನ, ಮೊಹಮ್ಮದ್ ಸಫ್ವಾನ್ ದ್ವಿತೀಯ ಸ್ಥಾನ ಮತ್ತು ಬಾಲಕಿರ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಭೂಮಿಕ ಎನ್ ದ್ವಿತೀಯ ಸ್ಥಾನವನ್ನು ಪಡೆಯುವ ಮೂಲಕ ಅತ್ಯುತ್ತಮ ಪ್ರದರ್ಶನ ನೀಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿ ತಂದಿದ್ದಾರೆ.

ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಮತಿ ಹೇಮಲತಾ ಎಂ. ಆ‌ರ್. ಅವರ ನೇತೃತ್ವದಲ್ಲಿ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಪ್ರವೀಣ್‌ ಎನ್. ಅವರ ಮಾರ್ಗದರ್ಶನ ಹಾಗೂ ಪ್ರೋತ್ಸಾಹದಿಂದ ವಿದ್ಯಾರ್ಥಿಗಳು ಈ ಗಮನಾರ್ಹ ಸಾಧನೆ ಮಾಡಿದ್ದಾರೆ.

Related posts

ಮುಂಡಾಜೆ ವಲಯದ ಕಾನರ್ಪ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಒಡಿಯೂರು ಶ್ರೀ ಸೌಹಾರ್ದ ಸಹಕಾರಿ ಸಂಘದ 22ನೇ ಮಡಂತ್ಯಾರು ಶಾಖೆ ಉದ್ಘಾಟನೆ

Suddi Udaya

ಡೇವಿಡ್ ಜೈಮಿ ಕೊಕ್ಕಡ ರವರಿಗೆ ನೋಬೆಲ್ ವರ್ಲ್ಡ್ ರೆಕಾರ್ಡ್ಸ್ ವಿಶ್ವ ದಾಖಲೆ

Suddi Udaya

ಸವಣಾಲು ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ವಿಜಯ ಭಟ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಪಡಂಗಡಿ: ಅರುಣ್ ಡಿಸೋಜ ಹೃದಯಾಘಾತದಿಂದ ನಿಧನ

Suddi Udaya

ಇತ್ತೀಚೆಗೆ ಸುಟ್ಟು ಕರಕಲಾದ ಸ್ವಸ್ತಿಕ್ ಆಟೋ ಶೋರೂಮ್ ಗೆ ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ವತಿಯಿಂದ ಸಹಾಯಧನ

Suddi Udaya
error: Content is protected !!