24.7 C
ಪುತ್ತೂರು, ಬೆಳ್ತಂಗಡಿ
September 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ: ಪಿಡಿಒ ಗಾಯತ್ರಿಯವರಿಗೆ ಬೀಳ್ಕೊಡುಗೆ- ಕಾರ್ಯವೈಖರಿಗೆ ಗ್ರಾಮಸ್ಥರಿಂದ ಶ್ಲಾಘನೆ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮ ಪಂಚಾಯತ್ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ತೋಟಗಾರಿಕ ಇಲಾಖೆಯ ಅಧಿಕಾರಿ ಮಹಾವೀರ ಶೇಬಣ್ಣ ಅವರ ಅಧ್ಯಕ್ಷತೆಯಲ್ಲಿ ಜು.30 ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಬೆಳ್ತಂಗಡಿ ಪಶು ಸಂಗೋಪನೆ ಇಲಾಖೆಯ ವೈದ್ಯಾಧಿಕಾರಿ ಪ್ರಶಾಂತ್ ಅವರು ನೋಡಲ್ ಅಧಿಕಾರಿಯಾಗಿ ಸಭೆಯನ್ನು ಮುನ್ನಡೆಸಿ ಪಶು ಸಂಗೋಪನ ಇಲಾಖೆಯ ಮಾಹಿತಿ ನೀಡಿದರು.

ಕಳೆದ ಸೆಪ್ಟೆಂಬರ್ ತಿಂಗಳಿಂದ ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ ವರ್ಗಾವಣೆಗೊಳ್ಳುತ್ತಿರುವ ಗಾಯತ್ರಿ ಅವರಿಗೆ ಬೀಳ್ಕೊಡುಗೆ ಸಮಾರಂಭವು ನಡೆಯಿತು. ಗ್ರಾಮಸ್ಥರು ಅವರ ಸೇವಾ ಕಾರ್ಯದ ಬಗ್ಗೆ ಗ್ರಾಮಸಭೆಯಲ್ಲಿ ಶ್ಲಾಘನೆ ವ್ಯಕ್ತ ಪಡಿಸುವ ಮೂಲಕ ಶುಭ ಹಾರೈಸಿದರು.

ಗ್ರಾಮ ಪಂಚಾಯತ್ ನ ಶೇ.25 ಹಣಕಾಸಿನಲ್ಲಿ ಫಲಾನುಭವಿಗಳಿಗೆ ಸಹಾಯ ಧನ ಹಸ್ತಾಂತರಿಸಲಾಯಿತು.

ವಿವಿಧ ಇಲಾಖೆಯ ಅಧಿಕಾರಿಗಳು ಇಲಾಖಾ ಮಾಹಿತಿಯನ್ನು ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಅವರು ವರದಿ ಮಂಡಿಸಿದರು. ಸಿಬ್ಬಂದಿ ವಂದನಾ ಅವರು ವಾರ್ಡ್ ಸಭೆಯ ಬೇಡಿಕೆಯನ್ನು ಮಂಡಿಸಿ ವಂದಿಸಿದರು. ದೇವಿಪ್ರಸಾದ್ ನಿರ್ವಹಿಸಿದರು. ಸಿಬ್ಬಂದಿಗಳು ಸಹಕರಿಸಿದರು.

Related posts

ಪ್ರಸನ್ನ ಕಾಲೇಜ್ ಕ್ಯಾಂಪಸ್‌ನಲ್ಲಿ ಹೋಟೆಲ್ ಸಮಡೈನ್ ಶುಭಾರಂಭ ; ಮಾಜಿ ಸಚಿವ ಗಂಗಾಧರ ಗೌಡರಿಂದ ಉದ್ಘಾಟನೆ

Suddi Udaya

ಓಡಿಲ್ನಾಳ: ಮೈರಲ್ಕೆ ಶ್ರೀ ರಾಮನಗರ ನಿವಾಸಿ ವಸಂತ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಸುಲ್ಕೇರಿಮೊಗ್ರು: ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆಯಿಂದ ಬಿರ್ವೆರೆ ಕೆಸರ್ದ ಗೊಬ್ಬು ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾ.ಪಂ. ಜಮಾಬಂದಿ ಕಾರ್ಯಕ್ರಮ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಲಾಯಿಲ ಸೋಮವತಿ ಸೇತುವೆಯಲ್ಲಿ ಸಿಲುಕಿಕೊಂಡ ಮರಗಳ ತೆರವು ಕಾರ್ಯಾಚರಣೆ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪದವಿ ವಿಭಾಗದ ವಿದ್ಯಾರ್ಥಿ‌‌ಸಂಘ ಉದ್ಘಾಟನಾ ಸಮಾರಂಭದೊಂದಿಗೆ ಸ್ವಾಗತ ಕಾರ್ಯಕ್ರಮ

Suddi Udaya
error: Content is protected !!