24.7 C
ಪುತ್ತೂರು, ಬೆಳ್ತಂಗಡಿ
September 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಗುರು ಪೂರ್ಣಿಮಾ ಆಚರಣೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಶ್ರೀ ಮಂಜುನಾಥ ದಳದ ಬನ್ನಿಸ್, ಕಬ್, ಬುಲ್‌ಬುಲ್, ಸ್ಕೌಟ್ಸ್ ಹಾಗೂ ಗೈಡ್ಸ್ ವಿದ್ಯಾರ್ಥಿಗಳಿಂದ ಗುರು ಪೂರ್ಣಿಮಾ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮ ಗುರುಗಳಿಗೆ ಪುಷ್ಪಾರ್ಚನೆ ಸಲ್ಲಿಸಿ, ಆಶೀರ್ವಾದ ಪಡೆದು ಗುರು-ಶಿಷ್ಯ ಪರಂಪರೆಯ ಮಹತ್ವವನ್ನು ಸಾರುವ ಮೂಲಕ ಗುರು ಪೂರ್ಣಿಮೆಯನ್ನು ಅರ್ಥಪೂರ್ಣವಾಗಿ ಆಚರಿಸಿದರು.

ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಮತಿ ಹೇಮಲತಾ ಎಂ. ಆರ್. ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ, ಬೆಳ್ತಂಗಡಿ ಕಾರ್ಯದರ್ಶಿ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಸಹ ಶಿಕ್ಷಕಿಯಾದ ಶ್ರೀಮತಿ ಪ್ರಮೀಳಾ ಪೂಜಾರಿ ಅವರು ಕಾರ್ಯಕ್ರಮದ ನೇತೃತ್ವ ವಹಿಸಿದರು.

ಈ ಸಂದರ್ಭದಲ್ಲಿ ಸ್ಕೌಟ್-ಗೈಡ್ ಶಿಕ್ಷಕರಾದ ನೀತಾ ಕೆ. ಎಸ್., ಜಯಲಕ್ಷ್ಮಿ, ಪ್ರಮೀಳಾ ಎನ್., ಗೀತಾ ಪಿ., ರಮ್ಯ ಬಿ. ಎಸ್., ಸೌಮ್ಯ, ಅಮಿತಾ, ಕಾರುಣ್ಯ, ಸಮತಾ, ಪುಷ್ಪಲತಾ, ಮೋಹಿನಿ, ಜಯರಾಮ್ ಹಾಗೂ ಮಂಜುನಾಥ್ ಅವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ಮೇ 31: ಉಜಿರೆಯಲ್ಲಿ ಡಿ.ಡಿ ಮೆನ್ಸ್ & ವಿಮೆನ್ಸ್ ಸೆಂಟರ್ ಮಲ್ಟಿ ಶೋರೂಮ್ ಉದ್ಘಾಟನೆ

Suddi Udaya

ಅ.10-11: ಬಾಲಕರ ಹಾಗೂ ಬಾಲಕಿಯರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಎಸ್ಸೆಸ್ಸೆಲ್ಸಿ ಮರು ಮೌಲ್ಯ ಮಾಪನ : ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲಾ ವಿದ್ಯಾರ್ಥಿ ಪ್ರತೀಕ್ ವಿ. ಎಸ್. ರಾಜ್ಯಕ್ಕೆ 7ನೇ ರ್‍ಯಾಂಕ್

Suddi Udaya

ಬಳ್ಳಮಂಜ – ಮಾಯಿಲೋಡಿ ಸಂಪರ್ಕಿಸುವ ರಸ್ತೆಯಲ್ಲಿ ಗುಡ್ಡ ಕುಸಿತ: ರಸ್ತೆಗೆ ಬೀಳುವ ಸ್ಥಿತಿಯಲ್ಲಿದೆ ಮರ

Suddi Udaya

ಕಲ್ಮಂಜ ಸ.ಪ್ರೌ. ಶಾಲೆಯಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕುಕ್ಕಾವು ಸೇತುವೆ ಬಳಿ ಧ್ಯಾನಸಕ್ತ ಸದಾಶಿವನ 12 ಅಡಿ ಎತ್ತರದ ಪ್ರತಿಮೆ ಲೋಕಾರ್ಪಣೆ

Suddi Udaya
error: Content is protected !!