September 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ. 2: ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿಯಿಂದ ‘ಆಟಿಡೊಂಜಿ ದಿನ’ ವಿಶೇಷ ಆಚರಣೆ

ಬೆಳ್ತಂಗಡಿ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ, ಯುವ ಬಿಲ್ಲವ ಹಾಗೂ ಮಹಿಳಾ ಬಿಲ್ಲವ ವೇದಿಕೆಗಳ ಆಶ್ರಯದಲ್ಲಿ ಆಟಿಡೊಂಜಿ ದಿನ ವಿಶೇಷ ಕಾರ್ಯಕ್ರಮವು ಆ 2ರಂದು ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದ ಭಾಗಿ ಮುಂಡಪ್ಪ ಪೂಜಾರಿ ಸಭಾ ವೇದಿಕೆಯಲ್ಲಿ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ಸಂತೋಷ್ ಪಿ. ಕೋಟ್ಯಾನ್ ತಿಳಿಸಿದ್ದಾರೆ.

ಆಟಿ ತಿಂಗಳ ಪ್ರಾಚೀನ ಆಹಾರ ಪದ್ಧತಿ, ಸಾಂಪ್ರದಾಯಿಕ ತಿಂಡಿ-ತಿನಿಸುಗಳು ಹಾಗೂ ಆಚಾರ-ವಿಚಾರಗಳ ವೈಶಿಷ್ಟ್ಯವನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ವಿವಿಧ ಮನೋರಂಜನಾ ಸ್ಪರ್ಧೆಗಳಿಗೆ ಸಮಿತಿಯ ಮಾಜಿ ಅಧ್ಯಕ್ಷ ಹಾಗೂ ಬಳಂಜ ಗಣೇಶೋತ್ಸವ ಸಮಿತಿ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್. ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮವನ್ನು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಾಜಿ ಕಾರ್ಯದರ್ಶಿ ರಾಜೀವ್ ಸಾಲಿಯಾನ್ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಎಸ್‌ಸಿಡಿಸಿಸಿ ಬ್ಯಾಂಕ್ ಶಾಖಾ ನಿರೀಕ್ಷಕರಾದ ಮಾಲ ಎಂ.ಕೆ. ಹಾಗೂ ಬಡಕೋಡಿ ಶಾಲೆಯ ಶಿಕ್ಷಕಿ ಸೌಮ್ಯ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Related posts

ಕೊಕ್ಕಡದಲ್ಲಿ ಪೋಸ್ಟ್ ಮಾಸ್ಟರ್ ಆಗಿದ್ದ ಸತ್ಯನಾರಾಯಣ ಕಕ್ಕೆಪದವು ನಿಧನ.

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯ ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ

Suddi Udaya

ಧಮ೯ಸ್ಥಳ: 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ

Suddi Udaya

ಮಿತ್ತಬಾಗಿಲು ಗ್ರಾಮ ಸಭೆ: ಆಶ್ರಯ ಯೋಜನೆಯ ಮನೆ ಮಂಜೂರಾತಿಯಲ್ಲಿ ಪಾರದರ್ಶಕತೆ ಇರಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ನಡ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಜನಾರ್ದನ ಗೌಡ, ಉಪಾಧ್ಯಕ್ಷರಾಗಿ ಹೇಮಾವತಿ ಆಯ್ಕೆ

Suddi Udaya

ಆ.14 ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಅರ್ಹ ವಿದ್ಯಾರ್ಥಿಗಳಿಗೆ ರೂ.20 ಲಕ್ಷ ಸ್ಕಾಲರ್ ಸಿಪ್ ಹಸ್ತಾಂತರ

Suddi Udaya
error: Content is protected !!